ಜಾರ್ಖಂಡ್ | ಪ್ರವಾಸಕ್ಕೆಂದು ಬಂದಿದ್ದ ಸ್ಪೇನ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Date:

ಸ್ಪೇನ್‌ ದೇಶದಿಂದ ಪ್ರವಾಸಕ್ಕೆಂದು ಬಂದಿದ್ದ ಮಹಿಳೆಯೊಬ್ಬರ ಮೇಲೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಹನ್‌ಸಿದಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಸ್ಪೇನ್‌ನಿಂದ ಪತಿಯೊಂದಿಗೆ ಬಂದಿದ್ದ ಮಹಿಳೆ ರಾತ್ರಿ ಕಳೆಯಲು ತಾತ್ಕಾಲಿಕ ಟೆಂಟ್‌ಅನ್ನು ನಿರ್ಮಿಸಿಕೊಂಡಿದ್ದರು.

“ಶುಕ್ರವಾರ ರಾತ್ರಿ ಸಾಮೂಹಿಕ ಅತ್ಯಾಚಾರ ಸಂಭವಿಸಿದೆ” ಎಂದು ಜರ್ಮುಡಿ ಉಪ ವಿಭಾಗದ ಪೊಲೀಸ್ ಆಯುಕ್ತರಾದ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಆದಾಗ್ಯೂ ನಂತರದಲ್ಲಿ ಹೆಚ್ಚುವರಿ ಮಾಹಿತಿಯನ್ನು ಒದಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಸ್ಥಳೀಯ ಏಳೆಂಟು ಯುವಕರು ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದು, ಇಲ್ಲಿಯವರೆಗೂ ಮೂವರನ್ನು ಬಂಧಿಸಲಾಗಿದ್ದು, ಉಳಿದವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಸಂತ್ರಸ್ತೆಯು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿಯ ಆಧಾರದ ಮೇಲೆ ದಂಪತಿಗಳು ದ್ವಿಚಕ್ರ ವಾಹನದಲ್ಲಿ ಬಾಂಗ್ಲಾದೇಶದಿಂದ ಆಗಮಿಸಿದ್ದರು. ನಂತರ ಬಿಹಾರ ಮೂಲಕ ನೇಪಾಳಕ್ಕೆ ತೆರಳಲು ಸಿದ್ಧರಾಗಿದ್ದರು.

ಕಾಕತಾಳಿಯವೆಂದರೆ ಫ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಇದ್ದ ಸಂದರ್ಭದಲ್ಲಿಯೇ ಈ ಘಟನೆ ಸಂಭವಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...