ಸಂಸತ್ತಿನ ವಿಶೇಷ ಅಧಿವೇಶನ ಜೂ.24 ರಂದು; ಲೋಕಸಭೆ ಸ್ಪೀಕರ್ ಚುನಾವಣೆ ಜೂ 26ಕ್ಕೆ ಸಾಧ್ಯತೆ

Date:

ಪ್ರಧಾನಿ ಹಾಗೂ ಮಂತ್ರಿ ಮಂಡಳದ ಸದಸ್ಯರು ಪ್ರಮಾಣ ವಚನ ಸ್ಪೀಕರಿಸಿದ ನಂತರ ನೂತನ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೂನ್‌ 24 ರಂದು ಎಂಟು ದಿನಗಳ ವಿಶೇಷ ಅಧಿವೇ‍ಶನ ನಡೆಯಲಿದೆ. 8 ದಿನಗಳ ವಿಶೇಷ ಅಧಿವೇಶನದಲ್ಲಿ ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಜೂನ್‌ 24 ಹಾಗೂ 25ರಂದು ಸಂಸತ್ತಿನ ನೂತನ ಸದಸ್ಯರು ತಮ್ಮ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಶೇಷ ಅಧಿವೇಶನ ಸಂದರ್ಭದಲ್ಲಿ ಎನ್‌ಡಿಎ ಸರ್ಕಾರದ ಪ್ರಮುಖ ಕಾರ್ಯಕ್ರಮ ನೂತನ ಲೋಕಸಭೆ ಸ್ಪೀಕರ್‌ ಅವರನ್ನು ಆಯ್ಕೆ ಮಾಡಿಕೊಳ್ಳುವುದಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಲೋಕಸಭೆ ಸ್ಪೀಕರ್‌ ಹುದ್ದೆಯ ಮೇಲೆ ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ಕೂಡ ಪ್ರಮುಖವಾಗಿ ಕಣ್ಣಿಟ್ಟಿವೆ.

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಕ್ಷೇತ್ರಗಳನ್ನು ಗೆದ್ದಿದ್ದು, ಬಹುಮತದ ಸಂಖ್ಯೆ 272ಕ್ಕೆ 32 ಸೀಟುಗಳ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್‌ ಸ್ಥಾನ ಮುಖ್ಯವಾದ ಹುದ್ದೆಯಾಗಿದೆ. ಲೋಕಸಭೆಯಲ್ಲಿ ಅತಂತ್ರ ಸ್ಥಿತಿ ಸೃಷ್ಟಿಯಾದರೆ ಸ್ಪೀಕರ್‌ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳಬಹುದಾದ ಕಾರಣ ಬಿಜೆಪಿ ಸೇರಿದಂತೆ ಪ್ರಮುಖ ಪಕ್ಷಗಳು ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಲು ಯತ್ನಿಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...