ಮಹಿಳಾ ಮೀಸಲಾತಿ ಜಾರಿಗಾಗಿ ವಿಶೇಷ ಅಧಿವೇಶನ : ಗೈರಾಗದಂತೆ ಸಂಸದರಿಗೆ ವಿಪ್‌ ಜಾರಿಗೊಳಿಸಿದ ಕಾಂಗ್ರೆಸ್‌

Date:

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಜಾರಿಗೆ ತರುವ ಉದ್ದೇಶದಿಂದ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ವಿಶೇಷ ಅಧಿವೇಶನದ ಕಲಾಪದಲ್ಲಿ ಕಡ್ಡಾಯವಾಗಿ ಪಕ್ಷದ ಎಲ್ಲಾ ಸಂಸದರು ಹಾಜರಿರುವಂತೆ ಕಾಂಗ್ರೆಸ್ ಪಕ್ಷ ವಿಪ್‌ ಜಾರಿಗೊಳಿಸಿದೆ. ಬಿಜೆಪಿ ಕೂಡ ತನ್ನ ಸದಸ್ಯರಿಗೆ ಗೈರಾಗದಂತೆ ವಿಪ್ ಜಾರಿ ಮಾಡಿದೆ.

ಲೋಕಸಭೆಯಲ್ಲಿರುವ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ಗುರುವಾರ, ಶುಕ್ರವಾರ ಮತ್ತು ಶನಿವಾರದಂದು (ಏ. 16,17 ಮತ್ತು 19) ಬೆಳಿಗ್ಗೆ 11 ಗಂಟೆಯಿಂದ ಸದನವನ್ನು ಮುಂದೂಡುವವರೆಗೂ ಹಾಜರಿದ್ದು, ಪಕ್ಷದ ನಿಲುವನ್ನು ಬೆಂಬಲಿಸುವಂತೆ ವಿನಂತಿಸಲಾಗಿದೆ.

ಇದನ್ನೂ ಓದಿ : ಹಾಸನ ಮಣ್ಣಿನ ಹೆಣ್ಣು ದನಿಗಳು | ಜಿಲ್ಲೆಯ ಕಲಾವಿದೆಯರಿಂದ ಹಸನಾದ ರಂಗಭೂಮಿ

ಈ ಮೂರು ದಿನಗಳ ಕಾಲ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಕೆಲವು ಮುಖ್ಯವಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ವಿಪ್‌ನಲ್ಲಿ ನಮೂದಿಸಿ ಕಾಂಗ್ರೆಸ್ ತನ್ನ ಲೋಕಸಭಾ ಸದಸ್ಯರಿಗೆ ತಿಳಿಸಿದೆ.

ಏಪ್ರಿಲ್ 16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯುವ ವಿಶೇಷ ಸದನದ ಅಧಿವೇಶನದಲ್ಲಿ ‘ನಾರಿ ಶಕ್ತಿ ವಂದನ ಅಧಿನಿಯಮ’ ತಿದ್ದುಪಡಿ ಮಸೂದೆಯನ್ನು 2023ರಲ್ಲಿ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. 2029ರ ಲೋಕಸಭಾ ಚುನಾವಣೆಗೂ ಮೊದಲು ಇದನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಯೋಜಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...