ವಿಮಾನ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಬಾರಿಸಿದ ಸ್ಪೈಸ್‌ಜೆಟ್ ಮಹಿಳಾ ಸಿಬ್ಬಂದಿ

Date:

ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್​ಜೆಟ್ ಮಹಿಳಾ ಸಿಬ್ಬಂದಿ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗಿರಿರಾಜ್ ಪ್ರಸಾದ್ ಅವರು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತಡೆದರು. ವಾಹನದ ಗೇಟ್ ಬಳಸಲು ಅನುಮತಿ ಇಲ್ಲ ಎಂದು ಹೇಳಿದ್ದಾರೆ.

- Advertisement -

ಮತ್ತೊಂದು ಗೇಟ್ ಮೂಲಕ ಹೊರಹೋಗುವಂತೆ ವಿಮಾನಯಾನ ನೌಕರರನ್ನು ಕೇಳಿದಾಗ ಅವರು ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ಮತ್ತು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಂತರ, ಅನುರಾಧಾ ರಾಣಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

ಈ ನಡುವೆ ಅನುರಾಧಾ ರಾಣಿಯವರಿಗೆ ಪೊಲೀಸ್ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಮಾನಯಾನ ಸಂಸ್ಥೆ ತನ್ನ ಉದ್ಯೋಗಿಯ ರಕ್ಷಣೆಗೆ ನಿಂತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ವಿಮಾನ ನಿಲ್ದಾಣದಲ್ಲಿ ಪರಿಶೀಲನಾ ಪ್ರದೇಶದ ಸುತ್ತಲೂ ಮಹಿಳಾ ಪೊಲೀಸರು ಇರಲಿಲ್ಲ. ಆ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ಪರಿಶೀಲನೆಗೆ ಆಗಮಿಸುವಂತೆ ಗಿರಿರಾಜ್ ಕರೆದಿದ್ದರು ಆಗ ವಾಗ್ವಾದ ಶುರುವಾಗಿತ್ತು ಎನ್ನಲಾಗಿದೆ.

ಈ ಪ್ರಕರಣದಲ್ಲಿ, ಸ್ಪೈಸ್‌ಜೆಟ್ ತನ್ನ ಉದ್ಯೋಗಿಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಕೆಲಸ ಮುಗಿದ ಮೇಲೆ ಮನೆಗೆ ಬರುವಂತೆ ಕೇಳಿದ್ದಕ್ಕೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಿದ್ದಾರೆ.

“ತನ್ನ ಮಹಿಳಾ ಉದ್ಯೋಗಿಯ ವಿರುದ್ಧ ಲೈಂಗಿಕ ಕಿರುಕುಳದ ಈ ಗಂಭೀರ ಪ್ರಕರಣದಲ್ಲಿ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಂಡು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಲಾಗಿದೆ. ನಾವು ನಮ್ಮ ಉದ್ಯೋಗಿಯ ಪರವಾಗಿ ದೃಢವಾಗಿ ನಿಲ್ಲುತ್ತೇವೆ ಮತ್ತು ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡಲು ಬದ್ಧರಾಗಿದ್ದೇವೆ” ಎಂದು ಸ್ಪೈಸ್‌ಜೆಟ್ ವಕ್ತಾರರು ತಿಳಿಸಿದ್ದಾರೆ.

ಉದ್ಯೋಗಿ ಪ್ರವೇಶಕ್ಕಾಗಿ ಅಧಿಕೃತ ವಿಮಾನ ನಿಲ್ದಾಣ ಪ್ರವೇಶ ಪಾಸ್ ಅನ್ನು ಹೊಂದಿದ್ದರು, ಆದರೂ ಅಧಿಕಾರಿ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸ್ಪೈಸ್‌ಜೆಟ್ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...