ಶ್ರೀರಾಮನೇ ಅವರನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾನೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ಗುಡುಗು

Date:

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಮತ್ತು ದುರ್ಬಳಕೆ ವಿವಾದದ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಅಯೋಧ್ಯೆಯ ಹನುಮಾನ್‌ಗಢಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಶ್ರೀರಾಮನ ಹೆಸರನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದ ಅವರನ್ನು ಇದೀಗ ಅದೇ ಶ್ರೀರಾಮನೇ ಅಧಿಕಾರದಿಂದ ಓಡಿಸಲಿದ್ದಾನೆ. ರಾಮಮಂದಿರದ ದೇಣಿಗೆ ದುರ್ಬಳಕೆಯಲ್ಲಿ ಭಾಗಿಯಾದ ಆರೋಪಿಗಳನ್ನು ಸಾಮಾಜಿಕವಾಗಿ ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ದೇಣಿಗೆ ಕಳ್ಳರು ಹಾಗೂ ಅವರನ್ನು ಬೆಂಬಲಿಸುವವರನ್ನು ಸಮಾಜದಿಂದ ದೂರವಿಡಬೇಕು. ಕಾನೂನು ತನ್ನ ಕೆಲಸ ಮಾಡಲಿ ಅಥವಾ ಬಿಡಲಿ, ನಾವು ಆ ಕೆಲಸವನ್ನು ಖಂಡಿತಾ ಮಾಡಿಸುತ್ತೇವೆ. ದೇವರಿಗೆ ದ್ರೋಹ ಬಗೆದ ಆ ಪಾಪಿಗಳಿಗೆ ತಕ್ಕ ಶಿಕ್ಷೆಯಾಗುವವರೆಗೂ ನಾನು ವಿರಮಿಸುವುದಿಲ್ಲ,” ಎಂದು ಅವರು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ನೀಟ್ ಅಕ್ರಮ, ಭ್ರಷ್ಟಾಚಾರದ ಬಗ್ಗೆ ಮಣ್ಣಿನ ಮಗನ ಜಾಣಮೌನ: ಎಚ್‌ಡಿಕೆಗೆ ನೆಟ್ಟಿಗರ ತರಾಟೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಎಂಟು ಮಂದಿಯನ್ನು ಬಂಧಿಸಿರುವ ಕ್ರಮವನ್ನು ಕೇವಲ ‘ಕಣ್ಣೊರೆಸುವ ತಂತ್ರ’ ಎಂದು ಜರಿದಿರುವ ಕೇಜ್ರಿವಾಲ್, “ಬಂಧಿತರಾಗಿರುವವರು ಕೇವಲ ಕಿರಿಯ ನೌಕರರಾಗಿದ್ದಾರೆ. ನಿಜವಾದ ಹಿರಿಯ ಅಧಿಕಾರಿಗಳನ್ನು ಹಾಗೂ ಪ್ರಭಾವಿಗಳನ್ನು ರಕ್ಷಿಸುವ ಹುನ್ನಾರ ನಡೆಯುತ್ತಿದೆ,” ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಕ್ತರು ದೇವರಿಗೆ ಅರ್ಪಿಸಿದ್ದ ವಜ್ರ, ಬೆಲೆಬಾಳುವ ಹರಳುಗಳು, 200 ಕೋಟಿ ರೂ. ನಗದು ಹಾಗೂ 200 ಕೆ.ಜಿ. ಬೆಳ್ಳಿ ಕಳುವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

“ದೇವಸ್ಥಾನಕ್ಕೆ ಈ ಹಿಂದೆ ಪ್ರತಿದಿನ 12 ರಿಂದ 14 ಲಕ್ಷ ರೂಪಾಯಿಗಳಷ್ಟು ದೇಣಿಗೆ ಹರಿದುಬರುತ್ತಿತ್ತು. ಆದರೆ ಈ ಕಳ್ಳತನದ ಆರೋಪಗಳ ನಂತರ ಆ ಮೊತ್ತವು ದಿನಕ್ಕೆ 1 ಲಕ್ಷ ರೂಪಾಯಿಗಿಂತಲೂ ಕಡಿಮೆಯಾಗಿದೆ. ಇದು ಜನರ ವಿಶ್ವಾಸ ಕುಸಿದಿರುವುದರ ಸ್ಪಷ್ಟ ನಿದರ್ಶನ,” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...