ಶ್ರೀನಗರ | ಭೀಕರ ಹಿಮಪಾತ; ಐವರು ಬಲಿ

Date:

ಲಡಾಖ್‌ನ ಶ್ರೀನಗರ-ಲೆಹ್ ಹೆದ್ದಾರಿಯ ಝೋಜಿ ಲಾ ಕಣಿವೆಯಲ್ಲಿ ಸಂಭವಿಸಿದ ಭೀಕರ ಹಿಮಕುಸಿತವು ಪ್ರಯಾಣಿಕರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಶುಕ್ರವಾರ ಸಂಜೆ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಮಗು ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

- Advertisement -

ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ದಿಢೀರನೆ ಗುಡ್ಡದಿಂದ ಬೃಹತ್ ಹಿಮದ ರಾಶಿ ಕುಸಿದಿದೆ. ರಸ್ತೆಯಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ವಾಹನಗಳು ಹಿಮದಲ್ಲಿ ಮುಚ್ಚಿಹೋಗಿವೆ. ಪ್ರಯಾಣಿಕರು ವಾಹನಗಳ ಸಮೇತ ಹಿಮದ ಅಡಿಯಲ್ಲಿ ಸಿಲುಕಿಕೊಂಡಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದುರಂತದ ತೀವ್ರತೆಗೆ ಹೆದ್ದಾರಿಯಲ್ಲಿನ ಸಂಚಾರವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಘಟನೆ ನಡೆದ ಕೂಡಲೇ ಎಚ್ಚೆತ್ತ ಪೊಲೀಸರು, ಭಾರತೀಯ ಸೇನಾ ಸಿಬ್ಬಂದಿ, ಗಡಿ ರಸ್ತೆ ಸಂಸ್ಥೆ (BRO), ಎಸ್‌ಡಿಆರ್‌ಎಫ್ (SDRF) ಹಾಗೂ ಸೋನ್‌ಮಾರ್ಗ್ ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಸಿವೆ. ಮೈನಸ್ ಡಿಗ್ರಿ ತಾಪಮಾನ ಹಾಗೂ ಕಠಿಣ ಹವಾಮಾನದ ನಡುವೆಯೂ ಸಿಬ್ಬಂದಿಗಳು ಹಿಮದ ರಾಶಿಯನ್ನು ಸರಿಸಿ ಸಿಲುಕಿದ್ದವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಲೇಖನ ಓದಿದ್ದೀರಾ?: ‘ವಿಶ್ವಗುರು’ವಿನ ನಿಜ ಬಣ್ಣ ಬಯಲು ಮಾಡಿದ ಮಧು ಕಿಶ್ವರ್: ಸುದ್ದಿ ಮಾಡದ ಮಡಿಲ ಮಾಧ್ಯಮಗಳು

Advertisements

ದುರಂತದ ಕುರಿತು ಮಾಹಿತಿ ನೀಡಿರುವ ದ್ರಾಸ್ ಉಪವಿಭಾಗಾಧಿಕಾರಿ ವಿಷಾಲ್ ಅತ್ರಿ, “ಮೂವರು ಪುರುಷರು, ಒಬ್ಬ ಮಹಿಳೆ ಹಾಗೂ ಓರ್ವ ಮಗುವಿನ ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ತಿಳಿಸಿದ್ದಾರೆ.

ಆದಾಗ್ಯೂ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ನಿಖರ ಸಂಖ್ಯೆಯ ಬಗ್ಗೆ ಮತ್ತಷ್ಟು ಸ್ಪಷ್ಟತೆ ಸಿಗಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...