ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎಂ ಕೆ ಸ್ಟಾಲಿನ್ ಘೋಷಣೆ

Date:

ಹೊಸೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ ವಾರ್ಷಿಕ ಮೂರು ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಘೋಷಿಸಿದರು.

- Advertisement -

ವಿಧಾನಸಭೆಯಲ್ಲಿ ನಿಯಮಾವಳಿ 110ರ ಅಡಿಯಲ್ಲಿ ಘೋಷಿಸಿದ ಸ್ಟಾಲಿನ್, ಇತ್ತೀಚಿನ ವರ್ಷಗಳಲ್ಲಿ ಹೊಸೂರು ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಹೆಚ್ಚು ಹೂಡಿಕೆಗಳನ್ನು ಆಕರ್ಷಿಸುತ್ತಾ ಬಂದಿದೆ. ಆದ ಕಾರಣ ಹೊಸೂರು ಸುತ್ತಮುತ್ತಲು ಹಲವು ತಯಾರಿಕಾ ಕೇಂದ್ರಗಳು ಹಾಗೂ ಕೈಗಾರಿಕಾ ಘಟಕಗಳನ್ನು ಹೆಚ್ಚಿಸುವ ಅಗತ್ಯವನ್ನು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ರಾಜ್ಯ ಸರ್ಕಾರವು ಹೊಸೂರಿನಲ್ಲಿ ಆಧುನಿಕ ಮೂಲಸೌಕರ್ಯ ನಿರ್ಮಿಸಲು ಹಲವು ದೂರದೃಷ್ಟಿಯುಳ್ಳ ಕ್ರಮಗಳನ್ನು ಕೈಗೊಳ್ಳಲಿದೆ. ಹೊಸೂರಿಗಾಗಿ ನೂತನ ಕ್ರಿಯಾ ಯೋಜನೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಸ್ಟಾಲಿನ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದರಿಂದ ಕೃಷ್ಣಗಿರಿ ಹಾಗೂ ಧರ್ಮಪುರಿ ಪ್ರದೇಶಗಳಲ್ಲಿ ಆರ್ಥಿಕ ಸಾಮಾಜಿಕ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಸರ್ಕಾರ ಭಾವಿಸಿದೆ ಎಂದು ಸ್ಟಾಲಿನ್‌ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಟಿಆರ್‌ಬಿ ರಾಜ, “ನೂತನ ವಿಮಾನ ನಿಲ್ದಾಣವು ಬೆಂಗಳೂರಿನ ಜೊತೆಗೆ ಅವಳಿ ನಗರ ಪರಿಸರ ವ್ಯವಸ್ಥೆಗೆ ಉತ್ತೇಜನ ಹೊಂದಲಿದೆ. ಕರ್ನಾಟಕ ಹಾಗೂ ತಮಿಳುನಾಡು ಅಭಿವೃದ್ಧಿ ಹೊಂದುತ್ತದೆ. ಈ ಯೋಜನೆಯು ಸಂಪರ್ಕ ವೃದ್ಧಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ. ಹೊಸೂರಿನ ಜೊತೆ ನೆರೆಯ ಜಿಲ್ಲೆಗಳಾದ ಧರ್ಮಪುರಿ ಹಾಗೂ ಸೇಲಂ ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಹಾಗೆಯೇ ಬೆಂಗಳೂರಿನ ಹಲವು ಭಾಗಗಳಿಗೆ ಪ್ರಯೋಜನವಾಗಲಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...