ಶಾಸಕಾಂಗ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅಂಗೀಕರಿಸದೆ, ಅದರ ತಿದ್ದುಪಡಿಗೂ ಸೂಚಿಸದೆ ದೀರ್ಘಕಾಲ ಹಾಗೆಯೇ ಬಿಡುವುದು ತಪ್ಪು ಮತ್ತು ಕಾನೂನುಬಾಹಿರ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಂಗಳವಾರ ಶ್ಲಾಘಿಸಿದ್ದಾರೆ.
“ಕೆಲವು ಕ್ಷಣಗಳ ಹಿಂದೆ, ನಮ್ಮ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು ಲಭಿಸಿದೆ. ಈ ಆದೇಶವು ತಮಿಳುನಾಡಿಗೆ ಮಾತ್ರವಲ್ಲ, ಭಾರತದ ಎಲ್ಲಾ ರಾಜ್ಯಗಳಿಗೂ ದೊಡ್ಡ ಜಯವಾಗಿದೆ. ಇದು ಒಕ್ಕೂಟ ವ್ಯವಸ್ಥೆ, ರಾಜ್ಯ ಸ್ವಾಯತ್ತತೆ ಮತ್ತು ದ್ರಾವಿಡ ರಾಜಕೀಯದ ಸಮರ್ಥನೆ” ಎಂದು ಸ್ಟಾಲಿನ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? HDK ಗಣಿ ಅಕ್ರಮ ಪ್ರಕರಣ: ಪ್ರಾಸಿಕ್ಯೂಷನ್‌ಗೆ ರಾಜ್ಯಾಪಾಲರ ಅನುಮತಿ? H D Kumaraswamy | Governer | MUDA Scam
ರಾಜ್ಯಪಾಲ ಆರ್ ಎನ್ ರವಿ ಅವರು ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ, ನಿರಾಕರಿಸುವುದರ ವಿರುದ್ಧ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ವಿಚಾರಣೆ ನಡೆಸಿದೆ.
ಒಮ್ಮೆ ಮಸೂದೆಯಲ್ಲಿ ಸೂಚಿಸಿದ ತಿದ್ದುಪಡಿಯನ್ನು ಮಾಡಿ ರಾಜ್ಯಪಾಲರಿಗೆ ಕಳುಹಿಸಿದ ಬಳಿಕ ಒಪ್ಪಿಗೆಯನ್ನು ತಡೆಹಿಡಿಯುವುದು ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.
