ಸ್ವತಃ ಸಿಎಂ ಉದ್ಘಾಟಿಸಿದ್ದ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 19 ಮಂದಿ ಸಾವು: ಸುವೇಂದು ರಾಜೀನಾಮೆಗೆ ಮಮತಾ ಟಿಎಂಸಿ ಆಗ್ರಹ

Date:

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಭೀಕರ ದುರ್ಗಾ ಪೂಜಾ ಕಾಲ್ತುಳಿತ ದುರಂತದ ಬಳಿಕ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ. ಉತ್ತರ ಕೊಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಸುಮಾರು 19 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಳೆಯ ನಡುವೆ ಜನಸಂದಣಿ ಹೆಚ್ಚಾದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

- Advertisement -

ಈ ದುರಂತದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ರಾಜ್ಯದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸ್ಥಳದಲ್ಲಿ ಯಾವುದೇ ಸೂಕ್ತ ಪೊಲೀಸ್ ಬಂದೋಬಸ್ತ್, ನಾಗರಿಕ ಸ್ವಯಂಸೇವಕರು ಅಥವಾ ತುರ್ತು ಆಂಬ್ಯುಲೆನ್ಸ್ ವ್ಯವಸ್ಥೆ ಇರಲಿಲ್ಲ ಎಂದು ಟಿಎಂಸಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನೂ ಓದಿ: ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತ ದುರಂತ; ಸಾವಿನ ಸಂಖ್ಯೆ 19ಕ್ಕೆ ಏರಿಕೆ; 7 ಜನರ ಬಂಧನ!

ಸಾರ್ವಜನಿಕರ ಜೀವ ರಕ್ಷಿಸುವಲ್ಲಿ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿರುವ ಮಮತಾ ಟಿಎಂಸಿ, ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರು ಇದರ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಮಳೆಯ ವಾತಾವರಣದಲ್ಲೂ ಜನಸಂದಣಿಯನ್ನು ನಿಯಂತ್ರಿಸಲು ಸರ್ಕಾರ ಯಾಕೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ ಎಂದು ಪ್ರಶ್ನಿಸಿರುವ ಟಿಎಂಸಿ, ವಿಐಪಿ ವ್ಯವಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇ ಈ ದುರಂತಕ್ಕೆ ಕಾರಣ ಎಂದು ದೂರಿದೆ.

ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ದುರ್ಘಟನೆಯ ಬಗ್ಗೆ ತೀವ್ರ ಆಘಾತ ಹಾಗೂ ಸಂತಾಪ ವ್ಯಕ್ತಪಡಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಈ ದುರಂತದ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರವು, ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...