ಬಿಹಾರದ ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಹೂ ಮಾರಾಟಗಾರರ ಜಗಳದಿಂದ ಕಾಲ್ತುಳಿತ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕಿಂತ ಹೆಚ್ಚಾಗಿ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರಿಯಾದ ವ್ಯವಸ್ಥೆ ಇದ್ದಿದ್ದರೆ ಹೂ ಮಾರುವವರು ಜಗಳ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
“ಹೂ ಮಾರಾಟಗಾರರ ನಡುವೆ ಜಗಳ ನಡೆದಿದೆ. ಇನ್ನೂ ಎರಡು ಅಥವಾ ನಾಲ್ಕು ನಿಮಿಷಗಳ ಕಾಲ ನಾನು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದರೆ, ನಾನು ಸಾಯುತ್ತಿದ್ದೆ. ಪೊಲೀಸರು ಸ್ಥಳದಲ್ಲಿ ಎಲ್ಲೂ ಕಾಣಲಿಲ್ಲ. ಅವರನ್ನು ಮಾರ್ಗದುದ್ದಕ್ಕೂ ನಿಯೋಜಿಸಲಾಗಿತ್ತು. ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!
“ಘಟನಾ ಸ್ಥಳಕ್ಕೆ ಡಿಎಂ ಮತ್ತು ಎಸ್‌ಪಿ ಭೇಟಿ ನೀಡಿದ್ದು, ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಒಟ್ಟು ಏಳು ಜನರು ಸಾವನ್ನಪ್ಪಿದ್ದಾರೆ. ನಾವು ಮೃತರ, ಗಾಯಗೊಂಡವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ವಿಚಾರಣೆ ನಡೆಸುತ್ತಿದ್ದೇವೆ. ಮೃತರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುತ್ತೇವೆ” ಎಂದು ಜೆಹಾನಾಬಾದ್ ಎಸ್‌ಎಚ್‌ಒ ದಿವಾಕರ್ ಕುಮಾರ್ ವಿಶ್ವಕರ್ಮ ಹೇಳಿದ್ದಾರೆ.
#WATCH | Manoj, an eyewitness to the stampede at Baba Siddhnath Temple in Bihar's Jehanabad, says, "…Had the Administration worked well, the flower seller would not have picked a fight. There was a brawl. It happened right before us. So many of us were trapped there, someone… pic.twitter.com/Z92keGsnhI
— ANI (@ANI) August 12, 2024
#WATCH | Bihar: Divakar Kumar Vishwakarma, SHO Jehanabad says, "DM and SP visited the spot and they are taking stock of the situation…A total of seven people have died…We are meeting and inquiring the family members (of the people dead and injured)…We are trying to identify… https://t.co/yw6e4wzRiY pic.twitter.com/lYzaoSzVPH
— ANI (@ANI) August 12, 2024