ಬಿಹಾರ | ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ: 7 ಸಾವು, 16 ಮಂದಿಗೆ ಗಾಯ

Date:

ಬಿಹಾರದ ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

- Advertisement -

ಹೂ ಮಾರಾಟಗಾರರ ಜಗಳದಿಂದ ಕಾಲ್ತುಳಿತ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕಿಂತ ಹೆಚ್ಚಾಗಿ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರಿಯಾದ ವ್ಯವಸ್ಥೆ ಇದ್ದಿದ್ದರೆ ಹೂ ಮಾರುವವರು ಜಗಳ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಹೂ ಮಾರಾಟಗಾರರ ನಡುವೆ ಜಗಳ ನಡೆದಿದೆ. ಇನ್ನೂ ಎರಡು ಅಥವಾ ನಾಲ್ಕು ನಿಮಿಷಗಳ ಕಾಲ ನಾನು ಅಲ್ಲಿಯೇ ಸಿಕ್ಕಿಹಾಕಿಕೊಂಡಿದ್ದರೆ, ನಾನು ಸಾಯುತ್ತಿದ್ದೆ. ಪೊಲೀಸರು ಸ್ಥಳದಲ್ಲಿ ಎಲ್ಲೂ ಕಾಣಲಿಲ್ಲ. ಅವರನ್ನು ಮಾರ್ಗದುದ್ದಕ್ಕೂ ನಿಯೋಜಿಸಲಾಗಿತ್ತು. ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾಥರಸ್ ಕಾಲ್ತುಳಿತ | ಸಾವು ಅನಿವಾರ್ಯ, ವಿಧಿಯಿಂದ ಯಾರೂ ತಪ್ಪಿಸಿಕೊಳ್ಳಲಾಗದು: ಭೋಲೆ ಬಾಬಾ!

“ಘಟನಾ ಸ್ಥಳಕ್ಕೆ ಡಿಎಂ ಮತ್ತು ಎಸ್‌ಪಿ ಭೇಟಿ ನೀಡಿದ್ದು, ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಒಟ್ಟು ಏಳು ಜನರು ಸಾವನ್ನಪ್ಪಿದ್ದಾರೆ. ನಾವು ಮೃತರ, ಗಾಯಗೊಂಡವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ವಿಚಾರಣೆ ನಡೆಸುತ್ತಿದ್ದೇವೆ. ಮೃತರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುತ್ತೇವೆ” ಎಂದು ಜೆಹಾನಾಬಾದ್ ಎಸ್‌ಎಚ್‌ಒ ದಿವಾಕರ್ ಕುಮಾರ್ ವಿಶ್ವಕರ್ಮ ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...