ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

Date:

ಒಡಿಶಾದ ಪುರಿಯಲ್ಲಿ ಶುಕ್ರವಾರ ನಡೆಯುತ್ತಿದ್ದ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

- Advertisement -

ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಅತಿಯಾದ ಸೆಕೆ ಮತ್ತು ಕಿಕ್ಕಿರಿದ ಜನದಟ್ಟಣೆಯಿಂದಾಗಿ ಜನರು ಕುಸಿದು ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂತ್ರಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೂ ಅಗತ್ಯ ವೈದ್ಯಕೀಯ ನೆರವು ನೀಡಲಾಗುತ್ತಿದೆ.

ಒಡಿಶಾ ಸಚಿವ ಮುಖೇಶ್ ಮಹಾಲಿಂಗ್ ಮಾತನಾಡಿದ್ದು, “ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ರಕ್ಷಣಾ ತಂಡವು ಕೂಡಲೇ ನೆರವಿಗೆ ಧಾವಿಸಿ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಆರೋಗ್ಯ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ನೀರು ಮತ್ತು ಗ್ಲೂಕೋಸ್‌ಗೆ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸುತ್ತೇನೆ” ಎಂದಿದ್ದಾರೆ.

148ನೇ ಜಗನ್ನಾಥ ರಥಯಾತ್ರೆ

ಜಗನ್ನಾಥ ರಥಯಾತ್ರೆ ಐತಿಹಾಸಿಕ ಹಬ್ಬ. 1878ರಿಂದಲೂ ಪ್ರತಿವರ್ಷ ರಥೋತ್ಸವ ಜರುಗುತ್ತಿದೆ. ಜಗನ್ನಾಥ ದೇವಸ್ಥಾನವು ಆಷಾಢ ಸುಧ್ ಬಿಜ್‌ನಂದು ರಥಯಾತ್ರೆ ಮೆರವಣಿಗೆ ಆಯೋಜಿಸುತ್ತದೆ. ಈ ಹಬ್ಬದಂದು ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವತೆಗಳನ್ನು ಪೂಜಿಸಲಾಗುತ್ತದೆ. ಇದು 148ನೇ ಜಗನ್ನಾಥ ರಥಯಾತ್ರೆ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...

2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...