ಜಮ್ಮು ಕಾಶ್ಮೀರ : ಲೋಕಸಭೆ ಜೊತೆಯಲ್ಲೇ ವಿಧಾನಸಭಾ ಚುನಾವಣಾ ಸಾಧ್ಯತೆ!

Date:

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ನೀಡುವುದು ಇನ್ನೂ ಅತಂತ್ರ ಸ್ಥಿತಿಯಲ್ಲೇ ಇದೆ. ಈ ನಡುವೆ ಕಣಿವೆ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಇದೆ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ನಡೆಸುವ ಸಂಬಂಧ ಸಮಗ್ರ ಪರಿಶೀಲನಾ ಸಭೆ ಕೈಗೊಳ್ಳಲು ಕೇಂದ್ರಡಳಿತ ಪ್ರದೇಶಕ್ಕೆ ಮಾರ್ಚ್‌ 12 ಹಾಗೂ 13 ರಂದು ಎರಡು ದಿನಗಳ ಕಾಲ ಭೇಟಿ ನೀಡಲಿದೆ.

ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಾ.8 ಮತ್ತು 9 ರಂದು ನವದೆಹಲಿಯಲ್ಲಿ ಕೇಂದ್ರ ಗೃಹ ಖಾತೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಾಗಿ ಒಟ್ಟಾರೆ ಭದ್ರತಾ ಅಗತ್ಯಗಳು ಹಾಗೂ ಅರೆಸೇನೆ ಪಡೆ ನಿಯೋಜನೆಯ ಆಯ್ಕೆಗಳನ್ನು ಪರಿಶೀಲಿಸಲು ಉನ್ನತ ಹಂತದ ಸಭೆಯನ್ನು ಆಯೋಜಿಸಲಾಗಿದೆ. ಎರಡೂ ಚುನಾವಣೆಗಳನ್ನು ಏಕಕಾಲದಲ್ಲಿ ಹಮ್ಮಿಕೊಳ್ಳುವುದನ್ನು ನಿರ್ಧರಿಸಲು ಈ ಸಭೆಯು ಪ್ರಮುಖವಾಗಿ ನಿರ್ಧರಿಸಲಿದೆ” ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗಳು ಅಥವಾ ಸಂಸತ್ತಿನ ಚುನಾವಣೆಗಳನ್ನು ಏಕಾಂಗಿಯಾಗಿ ನಡೆಸಲು ಭಾರಿ ಭದ್ರತೆಯ ಅಗತ್ಯವಿರುವುದಾಗಿ ಪ್ರಾಥಮಿಕ ಮೌಲ್ಯಮಾಪನಗಳು ಸೂಚಿಸಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಆಡಳಿತಾತ್ಮಕ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

“ಚುನಾವಣಾ ಕಾರ್ಯಗಳನ್ನು ಹೊರತುಪಡಿಸಿ, ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಭದ್ರತಾ ಸೌಲಭ್ಯ ಒದಗಿಸಬೇಕಾಗುತ್ತದೆ ಹಾಗೂ ವಿಧಾನಸಭಾ ಚುನಾವಣೆಗಳು ನಡೆದರೆ ಅಭ್ಯರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಏಕಕಾಲದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನಡೆಸಲು ಮೌಲ್ಯಮಾಪನ ಮಾಡಿದಾಗ 800 ಅರೆಸೇನಾ ಪಡೆಗಳ ಅವಶ್ಯಕತೆಯಿತ್ತು ಎಂದು ಕೇಂದ್ರ ಗೃಹ ಇಲಾಖೆ ಹೇಳಿತ್ತು. ನಂತರ ಈ ಯೋಜನೆಯನ್ನು ಕೈಬಿಡಲಾಯಿತು.

ಮಾ.12 ರಂದು ಚುನಾವಣಾ ಆಯೋಗ ನಡೆಸುವ ಭೇಟಿಯಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಕಾನೂನು ಜಾರಿ ಅಧಿಕಾರಿಗಳನ್ನು ಭೇಟಿ ಮಾಡಲಿದ್ದು, ವಿಧಾನಸಭಾ ಚುನಾವಣೆಗಳನ್ನು ನಡೆಸುವ ಬಗ್ಗೆ ಅವರ ಅಭಿಪ್ರಾಯಗಳನ್ನು ಕೇಳಲಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡ ಕೇಂದ್ರಾಡಳಿತ ಪ್ರದೇಶದ ಜಿಲ್ಲಾಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಭದ್ರತಾ ಪರಿಸ್ಥಿಯ ಬಗ್ಗೆ ಪ್ರಥಮ ಹಂತದ ಮಾಹಿತಿ ಪಡೆದುಕೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ನಂತರ ಮಾ.12 ಅಥವಾ 13 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಕಣಿವೆ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆಯೆ ಎಂಬುದು ಕೂಡ ನಿರ್ಧಾರವಾಗಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ...

ಹರಿಯಾಣದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 7 ಜನರ ಸಾವು, 25 ಮಂದಿಗೆ ಗಾಯ

ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ...

5ನೇ ಹಂತದ ಲೋಕಸಭೆ ಚುನಾವಣೆ: ಶೇ. 62.2 ರಷ್ಟು ಮತದಾನ

ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ....

ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಇದೇ ಮೇ 25 ರಂದು...