‘ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಲಾಗಿದ್ದ ತಡೆಯಾಜ್ಞೆ ರದ್ದು

Date:

‘ಕೇರಳ ಸ್ಟೋರಿ-2; ಗೋಸ್ ಬಿಯಾಂಡ್’ ಸಿನಿಮಾದ ಬಿಡುಗಡೆಗೆ ಕೇರಳ ಹೈಕೋರ್ಟ್‌ನ ಬೆಚು ಕುರಿಯನ್ ಥಾಮಸ್ ಅವರ ಏಕ ಸದಸ್ಯ ಪೀಠ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಸಿನಿಮಾ ಬಿಡುಗಡೆ ಇದ್ದ ಕಾನೂನು ಅಡೆತಡೆಯನ್ನು ಮುಕ್ತಗೊಳಿಸಿ ಶುಕ್ರವಾರ ಆದೇಶಿಸಿದೆ.

- Advertisement -

ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿನಿಮಾ ನಿರ್ಮಾಪಕರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ನಿರ್ಮಾಪಕರ ಪರ ಹಾಜರಿದ್ದ ವಕೀಲ ನೀರಜ್ ಕಿಶನ್ ಕೌಲ್ ಮತ್ತು ಎಲ್ವಿನ್ ಪೀಟರ್, “ಸಿನಿಮಾದಲ್ಲಿ ಸ್ಪಷ್ಟ ನಿರಾಕರಣಾ ಸೂಚನೆಗಳಿವೆ, ಈ ಕಥೆ ಕೇವಲ ಕೇರಳಕ್ಕೆ ಸೀಮಿತವಲ್ಲ. ಬಹು ರಾಜ್ಯಗಳ ಹಿನ್ನೆಲೆಯನ್ನು ಒಳಗೊಂಡಿದೆ. ಸಿಬಿಎಫ್‌ಸಿ ಪ್ರಮಾಣೀಕೃತ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರಿರುವುದು ಸೆನ್ಸಾರ್‌ ಶಿಪ್‌ನ ತೀವ್ರ ರೂಪವಾಗಿದೆ” ಎಂದು ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್‌.ಎ. ಧರ್ಮಾಧಿಕಾರಿ ಮತ್ತು ಪಿ.ವಿ. ಬಾಲಕೃಷ್ಣನ್ ಅವರಿದ್ದ ಪೀಠವು, ಹಿಂದಿನ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ.

ಈ ಲೇಖನ ಓದಿದ್ದೀರಾ?: ಕೇಂದ್ರದ ಜಾತಿವಾರು ಸಮೀಕ್ಷೆಯಲ್ಲಿ ಅಲೆಮಾರಿಗಳ ಪ್ರಶ್ನೆ

ಸಿನಿಮಾ ವಿರುದ್ಧ ಕಣ್ಣೂರು ಮೂಲದ ಶ್ರೀದೇವ್ ನಂಬೂದಿರಿ ಎಂಬವರು ಅರ್ಜಿ ಸಲ್ಲಿಸಿದ್ದರು. “ಸಿನಿಮಾದಲ್ಲಿ ಕೇರಳವನ್ನು ತಪ್ಪಾಗಿ ಚಿತ್ರಿಸಲಾಗಿದೆ. ಸಿನಿಮಾ ಬಿಡುಗಡೆಯಾದರೆ ಕೇರಳದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಸಾಧ್ಯತೆ ಇದೆ. ಚಿತ್ರದ ಶೀರ್ಷಿಕೆ, ಟೀಸರ್ ಮತ್ತು ಟ್ರೇಲರ್‌ಗಳಲ್ಲಿ ಹಿಂಸಾಚಾರ ಪ್ರಚೋದಿಸುವ ಅಂಶಗಳಿವೆ. ಇದು ಕೇರಳ ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತದೆ. ಈ ಸಿನಿಮಾದ ಬಿಡುಗಡೆಗೆ ನಿಷೇಧ ಹೇರಬೇಕು” ಎಂದು ವಾದಿಸಿದ್ದರು.

ಅವರ ಅರ್ಜಿಯನ್ನು ಆಲಿಸಿದ್ದ ಬೆಚು ಕುರಿಯನ್ ಥಾಮಸ್ ಅವರ ಪೀಠವು, ಸಿನಿಮಾ ವಿರುದ್ಧದ ಅರ್ಜಿಗಳನ್ನು ಪರಿಶೀಲಿಸಬೇಕೆಂದು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ಸೂಚಿಸಿತ್ತು. 15 ದಿನಗಳವರೆಗೆ ಚಿತ್ರದ ಬಿಡುಗಡೆಗೆ ತಡೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...