ಷೇರುಪೇಟೆ: ಟಾಪ್ 10 ಕಂಪನಿಗಳ ಪೈಕಿ ಏಳು ಸಂಸ್ಥೆಗಳಿಗೆ 1.54 ಲಕ್ಷ ಕೋಟಿ ರೂ. ನಷ್ಟ

Date:

ಸರಣಿ ರಜೆಗಳ ಕಾರಣದಿಂದಾಗಿ ವಹಿವಾಟು ದಿನಗಳು ಕಡಿಮೆಯಿದ್ದ ಕಳೆದ ವಾರದ ಷೇರುಪೇಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶದ ಟಾಪ್ 10 ಮೌಲ್ಯಯುತ ಕಂಪನಿಗಳ ಪೈಕಿ ಏಳು ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ಒಟ್ಟಾರೆ 1.54 ಲಕ್ಷ ಕೋಟಿ ರೂಪಾಯಿಗಳ(ಈ ಮೊತ್ತವು ಅಸ್ಸಾಂ, ಪಂಜಾಬ್ ರಾಜ್ಯಗಳ ವಾರ್ಷಿಕ ಬಜೆಟ್‌ನ ಅಂದಾಜು ಮೊತ್ತ ) ಬೃಹತ್ ಕುಸಿತ ದಾಖಲಾಗಿದೆ. ಈ ನಷ್ಟದಲ್ಲಿ ಮುಕೇಶ್ ಅಂಬಾನಿ ನೇತೃತ್ವದ ‘ರಿಲಯನ್ಸ್ ಇಂಡಸ್ಟ್ರೀಸ್’ ಅತಿ ಹೆಚ್ಚು ಹೊಡೆತ ತಿಂದಿದೆ.

- Advertisement -

ಕಳೆದ ವಾರದ ವಹಿವಾಟಿನಲ್ಲಿ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ (BSE) ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 639.61 ಅಂಕಗಳಷ್ಟು (ಶೇ. 0.84) ಪತನಗೊಂಡಿದ್ದರೆ, ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ಸೂಚ್ಯಂಕ ನಿಫ್ಟಿ 171.55 ಅಂಕಗಳಷ್ಟು (ಶೇ. 0.72) ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿನ ಈ ಏರಿಳಿತವು ದಿಗ್ಗಜ ಕಂಪನಿಗಳ ಮಾರುಕಟ್ಟೆ ಬಂಡವಾಳೀಕರಣದ ಮೇಲೆ ನೇರ ಮತ್ತು ತೀವ್ರ ಪರಿಣಾಮ ಬೀರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಟಾಪ್ 10 ಕಂಪನಿಗಳ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಭಾರ್ತಿ ಏರ್‌ಟೆಲ್, ಐಸಿಐಸಿಐ ಬ್ಯಾಂಕ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS), ಬಜಾಜ್ ಫೈನಾನ್ಸ್ ಹಾಗೂ ಹಿಂದೂಸ್ತಾನ್ ಯೂನಿಲಿವರ್ ಸಂಸ್ಥೆಗಳ ಮಾರುಕಟ್ಟೆ ಮೌಲ್ಯ ಗಣನೀಯವಾಗಿ ಕುಸಿದಿದೆ.

ಇದನ್ನು ಓದಿದ್ದೀರಾ? ಯಾರಿಗೆ ಕೊಕ್, ಯಾರಿಗೆ ಅವಕಾಶ; ನೂತನ ಸಂಪುಟದಲ್ಲಿ ಶುರುವಾಗಲಿದೆಯೆ ಮತ್ತಷ್ಟು ಪೀಕಲಾಟ?

ರಿಲಯನ್ಸ್ ಸಂಸ್ಥೆಯು ಗರಿಷ್ಠ 46,078.3 ಕೋಟಿ ರೂ. ಮೌಲ್ಯವನ್ನು ಕಳೆದುಕೊಂಡಿದ್ದು, ಅದರ ಒಟ್ಟು ಮೌಲ್ಯ 17,87,039.40 ಕೋಟಿ ರೂ.ಗೆ ಇಳಿಕೆಯಾಗಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್ 33,333.06 ಕೋಟಿ ರೂ. ನಷ್ಟದೊಂದಿಗೆ 11,46,641.84 ಕೋಟಿ ರೂ.ಗೆ ಕುಸಿದಿದೆ. ಭಾರ್ತಿ ಏರ್‌ಟೆಲ್ 25,408.96 ಕೋಟಿ ರೂ. ಹಾಗೂ ಟಿಸಿಎಸ್ 22,920.58 ಕೋಟಿ ರೂ. ನಷ್ಟ ಅನುಭವಿಸಿವೆ. ಉಳಿದಂತೆ, ಹಿಂದೂಸ್ತಾನ್ ಯೂನಿಲಿವರ್ (13,169.46 ಕೋಟಿ ರೂ.), ಬಜಾಜ್ ಫೈನಾನ್ಸ್ (7,253.24 ಕೋಟಿ ರೂ.) ಮತ್ತು ಐಸಿಐಸಿಐ ಬ್ಯಾಂಕ್ (6,311.41 ಕೋಟಿ ರೂ.) ತಮ್ಮ ಮೌಲ್ಯವನ್ನು ಕಳೆದುಕೊಂಡಿವೆ.

ಒಂದೆಡೆ ಏಳು ದಿಗ್ಗಜ ಕಂಪನಿಗಳು ನಷ್ಟ ಅನುಭವಿಸಿದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಲಾರ್ಸೆನ್ ಅಂಡ್ ಟೂಬ್ರೊ (L&T) ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಸಂಸ್ಥೆಗಳು ಲಾಭ ಗಳಿಸುವ ಮೂಲಕ ಹೂಡಿಕೆದಾರರಿಗೆ ತುಸು ರಿಲೀಫ್ ನೀಡಿವೆ. ಎಲ್ ಆಂಡ್ ಟಿ ಮಾರುಕಟ್ಟೆ ಮೌಲ್ಯ 20,608.43 ಕೋಟಿ ರೂ.ಗಳಷ್ಟು ಏರಿಕೆಯಾಗಿ 5,60,836.64 ಕೋಟಿ ರೂ. ತಲುಪಿದೆ. ಅದೇ ರೀತಿ, ಎಸ್‌ಬಿಐ ಮೌಲ್ಯ 13,753.62 ಕೋಟಿ ರೂ. ಹಾಗೂ ಎಲ್‌ಐಸಿ ಮೌಲ್ಯ 6,040.37 ಕೋಟಿ ರೂ.ಗಳಷ್ಟು ಹೆಚ್ಚಳ ಕಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...