ಶೇರುಪೇಟೆ- ಈ ವಾರದ ನಷ್ಟ 20 ಲಕ್ಷ ಕೋಟಿ! ತೈಲ ಬೆಲೆಗಳ ‘ಕರಡಿ ಕುಣಿತ’ವೇ ಕಾರಣ

Date:

ಹಬ್ಬದ ಸಂಭ್ರಮದ ಸಮಯದಲ್ಲಿ ಶೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದವರು ತೀವ್ರ ನಿರಾಸೆಯನ್ನು ಎದುರಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಭೌಗೋಳಿಕ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲದ ಬೆಲೆಗಳು ವಿಪರೀತವಾಗಿ ಏರಿಕೆಯಾಗಿವೆ. ಇದರ ನೇರ ಹೊಡೆತ ಭಾರತೀಯ ಶೇರು ಮಾರುಕಟ್ಟೆಯ ಮೇಲೆ ಬಿದ್ದಿದ್ದು, ಕೇವಲ ಈ ಒಂದು ವಾರದಲ್ಲಿ ಹೂಡಿಕೆದಾರರು ಬರೋಬ್ಬರಿ 20 ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಭಾರಿ ನಷ್ಟವನ್ನು ಅನುಭವಿಸಿದ್ದಾರೆ. ಇದರಿಂದಾಗಿ ಮಾರುಕಟ್ಟೆಯ ಒಟ್ಟು ಬಂಡವಾಳ ಮೌಲ್ಯವು 473.46 ಲಕ್ಷ ಕೋಟಿಯಿಂದ 452.40 ಲಕ್ಷ ಕೋಟಿಗೆ ತೀವ್ರವಾಗಿ ಕುಸಿದಿದೆ.

- Advertisement -

ಶೇರುಪೇಟೆಯ ಪ್ರಮುಖ ಸೂಚ್ಯಂಕಗಳಾದ ಬಿಎಸ್‌ಇ ಸೆನ್ಸೆಕ್ಸ್ ಮತ್ತು ಎನ್‌ಎಸ್‌ಇ ನಿಫ್ಟಿ 50 ಈ ವಾರದ ಎಲ್ಲಾ ನಾಲ್ಕು ದಿನಗಳ ವಹಿವಾಟಿನಲ್ಲಿಯೂ ನಷ್ಟದೊಂದಿಗೆ (ಕೆಂಪು ಬಣ್ಣದಲ್ಲಿ) ಅಂತ್ಯಗೊಂಡಿವೆ. ಶುಕ್ರವಾರದ ವಹಿವಾಟು ಏರಿಕೆಯೊಂದಿಗೆ ಆರಂಭವಾದರೂ, ಮಧ್ಯಾಹ್ನದ ವೇಳೆಗೆ ಸೆನ್ಸೆಕ್ಸ್ 797.02 ಅಂಕಗಳಷ್ಟು ಕುಸಿದಿತ್ತು. ಅಂತಿಮವಾಗಿ 125.56 ಅಂಕಗಳ ಕುಸಿತದೊಂದಿಗೆ 73,123.83 ರಲ್ಲಿ ಮತ್ತು ನಿಫ್ಟಿ 87.65 ಅಂಕಗಳ ನಷ್ಟದೊಂದಿಗೆ 22,372 ಕ್ಕೆ ತಲುಪಿ ವಹಿವಾಟು ಮುಗಿಸಿದೆ. ಪ್ರಮುಖ ಕಂಪನಿಗಳಿಗಿಂತ ಹೆಚ್ಚಾಗಿ ಸಣ್ಣ ಹಾಗೂ ಮಧ್ಯಮ ಗಾತ್ರದ ಕಂಪನಿಗಳಾದ ಸ್ಮಾಲ್‌ಕ್ಯಾಪ್ ಶೇಕಡಾ 2.94 ರಷ್ಟು ಮತ್ತು ಮಿಡ್‌ಕ್ಯಾಪ್ ಶೇಕಡಾ 2.21 ರಷ್ಟು ಅತಿ ಹೆಚ್ಚು ಕುಸಿತವನ್ನು ದಾಖಲಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಬೃಹತ್ ಮಾರುಕಟ್ಟೆ ಕುಸಿತಕ್ಕೆ ಪ್ರಮುಖ ಕಾರಣವೆಂದರೆ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ 116 ಡಾಲರ್ (ಅಂದಾಜು 9,744 ರೂ.) ತಲುಪಿರುವುದು. ಇದು ಕಳೆದ ಆರು ತಿಂಗಳಿನಲ್ಲಿಯೇ ಅತಿ ಗರಿಷ್ಠ ಮಟ್ಟವಾಗಿದೆ. ತೈಲ ಬೆಲೆಗಳು ಇದೇ ರೀತಿ ನಿರಂತರವಾಗಿ ಹೆಚ್ಚಾಗುತ್ತಲೇ ಹೋದರೆ ನಮ್ಮ ದೇಶದಲ್ಲಿ ಹಣದುಬ್ಬರ ಗಣನೀಯವಾಗಿ ಹೆಚ್ಚಾಗುವ ಅಪಾಯವಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳ ಲಾಭಾಂಶ ಕಡಿಮೆಯಾಗಿ, ಕರೆನ್ಸಿ ಮೌಲ್ಯ ಕುಸಿದು ವಿದೇಶಿ ಹೂಡಿಕೆದಾರರು ತಮ್ಮ ಹಣವನ್ನು ಹಿಂಪಡೆಯುವ ಸಾಧ್ಯತೆಗಳಿರುವುದರಿಂದ ಷೇರುಪೇಟೆಗೆ ಮತ್ತಷ್ಟು ಹೊಡೆತ ಬೀಳಲಿದೆ ಎಂದು ಅಂದಾಜಿಸಲಾಗಿದೆ.

ಆರ್ಥಿಕ ತಜ್ಞರ ಪ್ರಕಾರ, ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಬಾಂಡ್ ಇಳುವರಿಯಲ್ಲಿನ ಏರಿಕೆ ಮತ್ತು ತೈಲ ಬೆಲೆ ಏರಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಶೇರುಗಳನ್ನು ಮಾರಾಟ ಮಾಡುವ ತೀವ್ರ ಒತ್ತಡ ಕಂಡುಬರುತ್ತಿದೆ. ಐತಿಹಾಸಿಕವಾಗಿ ನೋಡುವುದಾದರೆ, ಪ್ರತಿ ವರ್ಷ ನವರಾತ್ರಿಯಿಂದ ದೀಪಾವಳಿವರೆಗಿನ ಹಬ್ಬದ ಸಮಯವು ಶೇರುಪೇಟೆಗೆ ತುಂಬಾ ಲಾಭದಾಯಕವಾಗಿರುತ್ತದೆ. ಆದರೆ ಈ ಬಾರಿ ಜಾಗತಿಕ ಮಟ್ಟದ ಆರ್ಥಿಕ ಬಿಗಿತ ಮತ್ತು ವಿಶ್ವಾದ್ಯಂತ ಇರುವ ಯುದ್ಧದ ವಾತಾವರಣದಿಂದಾಗಿ ಪರಿಸ್ಥಿತಿಯು ಸಂಪೂರ್ಣವಾಗಿ ಬದಲಾಗಿದ್ದು, ಹೂಡಿಕೆದಾರರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುವೆಂಪು ವಿವಿ ಸಂಶೋಧನಾ ವಿದ್ಯಾರ್ಥಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ!

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಎಲ್ಸೆವಿಯರ್ ಸಹಯೋಗದಲ್ಲಿ ಪ್ರಕಟಿಸಿರುವ ಜಾಗತಿಕ ವೈಜ್ಞಾನಿಕ ಶ್ರೇಯಾಂಕದಲ್ಲಿ,...

​’ರಾಜತಾಂತ್ರಿಕ ಒಪ್ಪಂದಕ್ಕೆ ಬಾರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ’: ಡೊನಾಲ್ಡ್ ಟ್ರಂಪ್

ಟೆಹ್ರಾನ್ ರಾಜತಾಂತ್ರಿಕ ಒಪ್ಪಂದಕ್ಕೆ ಬರಲು ವಿಫಲವಾದರೆ ಇರಾನ್ ಮೇಲೆ ಮತ್ತೊಂದು ಸೇನಾ...

ರೆಹಾನ್ ವಾಡ್ರಾ ಛಾಯಾಚಿತ್ರ ಪ್ರದರ್ಶನಕ್ಕೆ ಕೇರಳಕ್ಕೆ ಆಹ್ವಾನ ನೀಡಿದ ಸಿಎಂ ಸತೀಶನ್

ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿರುವ ತಮ್ಮ 'ನೋ ಐಡಿಯಾ ಈಸ್ ಫೈನಲ್'...