BJP ಬೆಂಬಲಿಗರಿಂದ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ; ಪೊಲೀಸರ ವಿರುದ್ಧವೂ ಮೊಯಿತ್ರಾ ಗಂಭೀರ ಆರೋಪ!

Date:

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಾಲಿಗಂಜ್‌ನಲ್ಲಿ ಬಿಜೆಪಿ ಬೆಂಬಲಿಗರ ಗುಂಪೊಂದು ತಮ್ಮ ಕಾರು ಮತ್ತು ಬೆಂಗಾವಲು ವಾಹನಗಳ ಮೇಲೆ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆದಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಹೊರತಾಗಿಯೂ ತಮಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ರಾಜ್ಯ ಪೊಲೀಸರು ವಿಫಲರಾಗಿದ್ದಾರೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಆರೋಪಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು, “ಕಾಲಿಗಂಜ್‌ನ ಗೋಬ್ರಾ ಗ್ರಾಮ ಪಂಚಾಯತಿ ಪ್ರದೇಶದಲ್ಲಿ ತಮ್ಮ ಮೇಲೆ ದಾಳಿ ನಡೆಸಲು ಸುಮಾರು 80 ರಿಂದ 90 ಬಿಜೆಪಿ ಬೆಂಬಲಿಗರು ಜಮಾಯಿಸಿದ್ದರು. ತಮ್ಮ ಕಾರ್ಯಕ್ರಮದ ಬಗ್ಗೆ ಮೂರ್ನಾಲ್ಕು ದಿನಗಳ ಮೊದಲೇ ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದರೂ, ಪರಿಸ್ಥಿತಿಯನ್ನು ನಿಯಂತ್ರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

“ಗೌರವಾನ್ವಿತ ಕಲ್ಕತ್ತಾ ಹೈಕೋರ್ಟ್ ಆದೇಶದ ಅನ್ವಯ ತಮ್ಮ ಸುರಕ್ಷತೆಯು ಪಶ್ಚಿಮ ಬಂಗಾಳ ಪೊಲೀಸರು, ಡಿಜಿಪಿ ಮತ್ತು ಕೃಷ್ಣನಗರ ಪೊಲೀಸ್ ಜಿಲ್ಲೆಯ ಜವಾಬ್ದಾರಿಯಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ.

“ನ್ಯಾಯಾಲಯವು ಭದ್ರತಾ ವ್ಯವಸ್ಥೆಗೆ ಆದೇಶಿಸಿದ್ದರೂ ಸಹ, ಪಶ್ಚಿಮ ಬಂಗಾಳ ಪೊಲೀಸರು ಬಿಜೆಪಿ ಬೆಂಬಲಿಗರೊಂದಿಗೆ ಶಾಮೀಲಾಗಿ ತಮ್ಮ ಮೇಲೆ ದಾಳಿ ನಡೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ದೀಪಂಕರ್ ದತ್ತಾ ಹಾಗೂ ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ಪೋಸ್ಟ್ ಮಾಡಿರುವ ಅವರು, “ನನ್ನ ರಕ್ಷಣೆಗೆ ನಿಯೋಜನೆಗೊಂಡಿರುವ ಪಶ್ಚಿಮ ಬಂಗಾಳ ಪೊಲೀಸರೇ ಬಿಜೆಪಿಯೊಂದಿಗೆ ಕೈಜೋಡಿಸಿ ನನ್ನ ಮೇಲೆ ದೈಹಿಕ ದಾಳಿ ನಡೆಸಲು ಬಿಟ್ಟಿರುವುದು ನ್ಯಾಯಾಂಗ ನಿಂದನೆಗೆ ಸ್ಪಷ್ಟ ಉದಾಹರಣೆಯಾಗಿದೆ. ಕೋಲು ಮತ್ತು ಮೊಟ್ಟೆಗಳಿಂದ ಕಾರಿನ ಮೇಲೆ ದಾಳಿ ನಡೆಸುತ್ತಿದ್ದರೂ ಪೊಲೀಸರು ಗುಂಪನ್ನು ಚದುರಿಸುವ ಬದಲು ನನಗೇ ಅಲ್ಲಿಂದ ತೆರಳುವಂತೆ ಸೂಚಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, “ಈ ಘಟನೆಯನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲು ಮುಂದಾದರೆ ತಕ್ಕ ಉತ್ತರ ನೀಡಬೇಕಾಗುತ್ತದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೂ ಎಚ್ಚರಿಕೆ ನೀಡಿದ್ದಾರೆ.

“ಪೊಲೀಸ್ ರಕ್ಷಣೆಯಲ್ಲಿದ್ದ ತಮ್ಮ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಲು ಮತ್ತು ಪೂರ್ವನಿಗದಿತ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಬಿಜೆಪಿ ಗುಂಪಿಗೆ ಪೊಲೀಸರೇ ಅವಕಾಶ ಮಾಡಿಕೊಟ್ಟಿದ್ದಾರೆ” ಎಂದು ಅವರು ಮತ್ತೊಂದು ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

ಘಟನಾ ಸ್ಥಳದ ದೃಶ್ಯಾವಳಿಗಳಲ್ಲಿ ಪ್ರತಿಭಟನಾಕಾರರು ಕಪ್ಪು ಬಾವುಟಗಳನ್ನು ಪ್ರದರ್ಶಿಸುತ್ತಾ, ಸಂಸದೆಯ ಬೆಂಗಾವಲು ವಾಹನಗಳು ಹಾದುಹೋಗುವಾಗ ‘ಗೋ ಬ್ಯಾಕ್’ ಎಂದು ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸೇತುವೆ ಮೇಲಿನ ಗುಂಡಿ ಸರಿಪಡಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಕಲಾದಗಿ - ಅಂಕಲಗಿ ಸೇತುವೆ ಮೇಲೆ ಬೃಹತ್‌ ಪ್ರಮಾಣದ...

ಆರ್‌ಎಸ್‌ಎಸ್ ಮುಖ್ಯಸ್ಥರ ಮಣಿಪುರ ಭೇಟಿ; ಶಾಂತಿ ಸ್ಥಾಪನೆಗೆ ಏನು ಪ್ರಯೋಜನ: ಕಾಂಗ್ರೆಸ್ ಪ್ರಶ್ನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಮೂರು...

ಭಾರತದಲ್ಲಿ ʼಮಾಲಿನ್ಯʼ ಚುನಾವಣಾ ವಿಷಯವಾಗುತ್ತಿಲ್ಲ ಏಕೆ?

ಭಾರತದಲ್ಲಿ ವಾಯುಮಾಲಿನ್ಯವು ಅತ್ಯಂತ ಗಂಭೀರ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಾಗಿ ಮಾರ್ಪಟ್ಟಿದ್ದರೂ, ಅದು...