ಕುಂಭಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳಿಂದಲೇ ಕಲ್ಲು ತೂರಾಟ

Date:

ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಸೋಮವಾರ ರಾತ್ರಿ ಘಟನೆ ನಡೆದಿದೆ ಛತ್ರರ್‌ಪುರ ಜಿಲ್ಲೆಯಲ್ಲಿರುವ ಛತ್ತರ್‌ಪುರ ಮತ್ತು ಹರ್ಪಾಲ್‌ಪುರ ರೈಲು ನಿಲ್ದಾಣಗಳಲ್ಲಿ ಪ್ರಯಾಗ್‌ರಾಜ್‌ ನಗರಕ್ಕೆ ತೆರಳುತ್ತಿದ್ದ ರೈಲು ಹತ್ತಲು ಕೆಲವರು ಯತ್ನಿಸಿದ್ದಾರೆ. ಆದರೆ, ರೈಲು ತುಂಬಿದ್ದರಿಂದ, ರೈಲಿನಲ್ಲಿದ್ದವರು ಬಾಗಿಲು ತೆರೆದಿಲ್ಲ. ಪರಿಣಾಮ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಬುಧವಾರ, ಮೌನಿ ಅಮವಾಸ್ಯೆ ಇರುವ ಕಾರಣ ಹೆಚ್ಚಿನ ಜನರು ಕುಂಭಮೇಳದಲ್ಲಿ ಭಾಗಿಯಾಗಲು ತೆರಳುತ್ತಿದ್ದಾರೆ. ಹೀಗಾಗಿ, ರೈಲುಗಳು ಜನರಿಂದ ತುಂಬಿ ಹೋಗುತ್ತಿವೆ. ಇಂತಹ ಘಟನೆಗಳನ್ನು ತಪ್ಪಿಸಲು ಕಠಿಣ ಭದ್ರತಾ ವ್ಯವಸ್ಥೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೆ, ಪ್ರಯಾಗ್‌ರಾಜ್‌ಗೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಕೆಲವರು ಕಲ್ಲು ತೂರಾಟ ನಡೆಸಿ ರೈಲಿನ ಬಾಗಿಲುಗಳಿಗೆ ಹೊಡೆಯುತ್ತಿರುವುದು, ಬಲವಂತವಾಗಿ ಬಾಗಿಲೆ ತೆರೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.

“ಮಹಾ ಕುಂಭದ ಸಮಯದಲ್ಲಿ ಸಂಗಮದಲ್ಲಿ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಹೊರಟಿದ್ದೆ. ಆದರೆ, ಪ್ರಯಾಗ್‌ರಾಜ್‌ಗೆ ಹೋಗುವ ರೈಲಿನ ಎಲ್ಲ ಬಾಗಿಲುಗಳು ಮತ್ತು ಕಿಟಕಿಗಳು ಮುಚ್ಚಿದ್ದರಿಂದ ರೈಲು ಹತ್ತಲು ಸಾಧ್ಯವಾಗಲಿಲ್ಲ. ಗದ್ದಲವಾದ ಬಳಿಕ ರೈಲ್ವೇ ಸಿಬ್ಬಂದಿಗಳು ರೈಲಿನ ಬಾಗಿಲುಗಳನ್ನು ತೆರೆದರು. ಆದರೂ, ರೈಲಿನಲ್ಲಿ ಜನರು ತುಂಬಿದ್ದರಿಂದ ಹಲವಾರು ಮಂದಿ ಹತ್ತಲು ಸಾಧ್ಯವಾಗಲಿಲ್ಲ” ಎಂದು ಛತ್ತರ್‌ಪುರದ ಪ್ರಯಾಣಿಕ ಆರ್‌ಕೆ ಸಿಂಗ್ ಹೇಳಿದ್ದಾರೆ.

ಛತ್ತರ್‌ಪುರ ಮತ್ತು ಹರ್ಪಾಲ್‌ಪುರ ರೈಲು ನಿಲ್ದಾಣಗಳಲ್ಲಿ ರೈಲು ಹತ್ತುವ ವಿಚಾರಕ್ಕಾಗಿ ಗದ್ದಲ ನಡೆದಿರುವುದು ತಮ್ಮ ಗಮನಕ್ಕೆ ಬಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತದೊಂದಿಗೆ ಸಮನ್ವಯ ಸಾಧಿಸುವ ಮೂಲಕ ಕಠಿಣ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ಝಾನ್ಸಿ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮನೋಜ್ ಕುಮಾರ್ ಸಿಂಗ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...