‘ಮೈ ಲಾರ್ಡ್’ ಎನ್ನುವುದನ್ನು ನಿಲ್ಲಿಸಿ, ನನ್ನ ಅರ್ಧ ಸಂಬಳ ನಿಮಗೆ ಕೊಡುತ್ತೇನೆ: ಸುಪ್ರೀಂ ಜಡ್ಜ್‌

Date:

‘ನನ್ನ ಸ್ವಾಮಿ’ (ಮೈ ಲಾರ್ಡ್‌) ಎಂದು ಹೇಳುವುದನ್ನು ನಿಲ್ಲಿಸಿ, ನನ್ನ ಅರ್ಧದಷ್ಟು ಸಂಬಳವನ್ನು ನಿಮಗೆ ಕೊಡುತ್ತೇನೆ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿರುವ ಪ್ರಸಂಗ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕೋರ್ಟ್‌ ಕಲಾಪಗಳ ವೇಳೆ ವಕೀಲರು ಪದೇ ಪದೇ ‘ಮೈ ಲಾರ್ಡ್‌’ ಮತ್ತು ‘ಯುವರ್ ಲಾರ್ಡ್‌ಶಿಪ್ಸ್‌’ ಎಂದು ಸಂಬೋಧಿಸುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಮೈ ಲಾರ್ಡ್’ ಎಂದು ಎಷ್ಟು ಬಾರಿ ಹೇಳುತ್ತೀರಿ? ನೀವು ಇದನ್ನು ಹೇಳುವುದನ್ನು ನಿಲ್ಲಿಸಿದರೆ, ನನ್ನ ಸಂಬಳದಲ್ಲಿ ಅರ್ಧದಷ್ಟು ನಿಮಗೆ ನೀಡುತ್ತೇನೆ ಎಂದು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಅವರು ವಕೀಲರಿಗೆ ಹೇಳಿದ್ದಾರೆ.

“ವಕೀಲರು, ವಾದ ಮಂಡಿಸುವ ಸಮಯದಲ್ಲಿ ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಅಥವಾ ‘ಯುವರ್ ಲಾರ್ಡ್‌ಶಿಪ್’ ಎಂದು ಕರೆಯುತ್ತಾರೆ. ಇದು ವಸಾಹತುಶಾಹಿ ಯುಗದ ಗುಲಾಮಗಿರಿಯ ಸಂಕೇತವಾಗಿದೆ” ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“‘ಮೈ ಲಾರ್ಡ್‌ ಎಂದು ಕರೆಯುವುದರ ಬದಲು ‘ಸರ್’ ಎಂದು ಏಕೆ ಬಳಸಬಾರದು” ಎಂದು ನ್ಯಾಯಮೂರ್ತಿ ನರಸಿಂಹ ಹೇಳಿದ್ದಾರೆ.

2006ರಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾವು ಯಾವುದೇ ವಕೀಲರು ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಮತ್ತು ‘ಯುವರ್ ಲಾರ್ಡ್‌ಶಿಪ್’ ಎಂದು ಸಂಬೋಧಿಸಬಾರದು ಎಂದು ನಿರ್ಣಯವನ್ನು ಅಂಗೀಕರಿಸಿತ್ತು. ಆದರೂ, ಈ ಎರಡು ಪದಗಳ ಬಳಕೆ ಇಂದಿಗೂ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ| ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, 20 ಲಕ್ಷ ರೂ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ...

ಸಚಿವ ಸಂಪುಟದಲ್ಲಿ ಜೆಪಿ ನಡ್ಡಾ; ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್...

ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ...

ವೇದಿಕೆಯಲ್ಲೇ ಮಾಜಿ ರಾಜ್ಯಪಾಲೆ ತಮಿಳ್‌ಸೈಗೆ ಎಚ್ಚರಿಕೆ ನೀಡಿದ ಅಮಿತ್ ಶಾ: ವಿಡಿಯೋ ವೈರಲ್

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ...