ಹಡಗು ಸಂಚಾರಕ್ಕೆ ಮುಕ್ತಗೊಳ್ಳಲಿದೆ ಹಾರ್ಮುಜ್ ಜಲಸಂಧಿ; ಇಂಧನ ಬೆಲೆ ಇಳಿಸುವರೇ ಮೋದಿ?

Date:

ಜಗತ್ತಿನಾದ್ಯಂತ ಭಾರಿ ಇಂಧನ ಬಿಕ್ಕಟ್ಟು ಮತ್ತು ಮಧ್ಯಪ್ರಾಚ್ಯದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಅಮೆರಿಕ – ಇರಾನ್ ನಡುವಿನ ಭೀಕರ ಯುದ್ಧ ಅಂತ್ಯ ಕಂಡಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದಕ್ಕೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಶುಕ್ರವಾರ ಸಹಿ ಹಾಕಲಿವೆ. ಒಪ್ಪಂದದ ಭಾಗವಾಗಿ ಅಮೆರಿಕವು ಇರಾನ್ ಬಂದರುಗಳ ಮೇಲಿನ ನೌಕಾ ನಿರ್ಬಂಧಗಳನ್ನು ಸಡಿಲಿಸಲಿದೆ. ಪ್ರತಿಯಾಗಿ, ಇರಾನ್ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳ ಸಂಚಾರಕ್ಕೆ ಜೂನ್ 19ರಿಂದ ಮುಕ್ತಗೊಳಿಸಲಿದೆ ಎಂದು ಅಮೆರಿಕ ಘೋಷಿಸಿದೆ.

- Advertisement -

ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಜಾಗತಿಕ ರಾಜಕೀಯ ಮತ್ತು ಇಂಧನ ಮಾರುಕಟ್ಟೆಯಲ್ಲಿ ಹೊಸ ಆಶಾವಾದವನ್ನು ಮೂಡಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಭಾರಿ ಕುಸಿತ ಕಂಡಿದ್ದು, ಬ್ರೆಂಟ್ ಕಚ್ಚಾ ತೈಲ ಮತ್ತು ಡಬ್ಲ್ಯುಟಿಐ ತೈಲದ ಬೆಲೆಗಳು ಮೂರು ತಿಂಗಳಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದಿವೆ. ಬ್ರೆಂಟ್‌ ತೈಲವು ಪ್ರತಿ ಬ್ಯಾರಲ್‌ಗೆ 82.97 ಡಾಲರ್‌ಗಳಿಗೆ ಇಳಿದಿದ್ದರೆ, ಡಬ್ಲ್ಯೂಟಿಐ ತೈಲವು 80.69 ಡಾಲರ್‌ಗೆ ಕುಸಿತ ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದು ಭಾರತದ ಪಾಲಿಗೆ ಅತ್ಯಂತ ದೊಡ್ಡ ಆರ್ಥಿಕ ಆಶಾವಾದವನ್ನು ಹುಟ್ಟುಹಾಕಿದೆ. ತೈಲ ಬೆಲೆಗಳ ಕುಸಿತದಿಂದಾಗಿ ಭಾರತದ ಇಂಧನ ಆಮದು ವೆಚ್ಚವು ಭಾರಿ ಪ್ರಮಾಣದಲ್ಲಿ ತಗ್ಗಲಿದ್ದು, ದೇಶದ ಚಾಲ್ತಿ ಖಾತೆ ಕೊರತೆಯು (CAD) ಸುಮಾರು 10 ರಿಂದ 15 ಶತಕೋಟಿ ಡಾಲರ್‌ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಆದಾಗ್ಯೂ, ಕಚ್ಚಾ ತೈಲ ದರದಲ್ಲಿನ ಭಾರೀ ಕುಸಿತವು ಸಾಮಾನ್ಯ ಭಾರತೀಯರಿಗೆ ಲಾಭ ತಂದುಕೊಡುವುದೇ ಎಂಬ ಪ್ರಶ್ನೆಗೆ ಉತ್ತರವಂತೂ ಇಲ್ಲ! ಮೋದಿ ಸರ್ಕಾರವು ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ!

ಈ ಲೇಖನ ಓದಿದ್ದೀರಾ?: ಬತ್ತಿದ ಜೈವಿಕ ಚೈತನ್ಯ: ‘ಚೈಲ್ಡ್ ಫ್ರೀ’ ಪರಿಕಲ್ಪನೆ ಹೆಚ್ಚಳ, ಫಲವತ್ತತೆ ಕುಸಿತಕ್ಕೆ ಕಾರಣವೇನು?

ಇನ್ನು, ಇರಾನ್ ಮೇಲಿನ ಅಮೆರಿಕದ ಆರ್ಥಿಕ ನಿರ್ಬಂಧಗಳು ತೆರವಾಗುವುದರಿಂದ ಭಾರತ-ಇರಾನ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ತೈಲ ಆಮದು ಸಂಬಂಧಗಳು ಮತ್ತೆ ಚುರುಕುಗೊಳ್ಳಲಿವೆ. ಭಾರತವು ಆರ್ಥಿಕವಾಗಿ ಮತ್ತು ಆಯಕಟ್ಟಿನ ದೃಷ್ಟಿಯಿಂದ ಹೂಡಿಕೆ ಮಾಡಿರುವ ಇರಾನ್‌ನ ಚಾಬಹಾರ್ ಬಂದರು ಮತ್ತು ಅಂತರರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (INSTC) ಅಭಿವೃದ್ಧಿ ಯೋಜನೆಗಳಿಗೂ ಇದು ಹೊಸ ವೇಗವನ್ನು ನೀಡಲಿದ್ದು, ರಷ್ಯಾ ಮತ್ತು ಮಧ್ಯ ಏಷ್ಯಾದ ದೇಶಗಳೊಂದಿಗೆ ಭಾರತದ ಸಂಪರ್ಕ ಸುಲಭವಾಗಲಿದೆ.

ಆದಾಗ್ಯೂ, ಈ ಶಾಂತಿ ಒಪ್ಪಂದವು ಜಾಗತಿಕ ಮಟ್ಟದಲ್ಲಿ ಕೆಲವು ಪ್ರಮುಖ ರಾಜತಾಂತ್ರಿಕ ಸವಾಲುಗಳನ್ನೂ ಸೃಷ್ಟಿಸಿದೆ. ಅಮೆರಿಕದ ಬಾಲಂಗೋಚಿಯಾಗಿರುವ ಇಸ್ರೇಲ್‌, ಇನ್ನೂ ಲೆಬನಾನ್ ಮತ್ತು ಸಿರಿಯಾ ಮೇಲಿನ ದಾಳಿಯನ್ನು ಮುಂದುವರೆಸಿದೆ. ಇಸ್ರೇಲ್‌ನ ಈ ಕ್ರೌರ್ಯವು ಮಧ್ಯಪ್ರಾಚ್ಯದ ಶಾಂತಿ ಪ್ರಕ್ರಿಯೆಗೆ ಯಾವುದೇ ಕ್ಷಣದಲ್ಲಾದರೂ ಕುತ್ತು ತರಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...