ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

Date:

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಕಡಿವಾಣ ಹಾಕುವುದು ಮಹಾರಾಷ್ಟ್ರ ಸರ್ಕಾರಕ್ಕೆ ಸವಾಲಾಗಿದೆ. ಅಕ್ರಮಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರವು ನೇಮಿಸಿದ್ದ ‘ಪರೀಕ್ಷಾ ಸುಧಾರಣಾ ಸಮಿತಿ’ಯು ಇದೀಗ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಕಾನೂನುಗಳನ್ನು ಜಾರಿಗೊಳಿಸುವಂತೆ ಶಿಫಾರಸು ಮಾಡಿದೆ.

- Advertisement -

ಸಮಿತಿಯ ಶಿಫಾರಸಿನಂತೆ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವುದು ಸಾಬೀತಾದರೆ ತಪ್ಪಿತಸ್ಥರಿಗೆ 7ರಿಂದ 10 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಬೇಕು. ಜೊತೆಗೆ, ಕನಿಷ್ಠ 10 ಕೋಟಿ ರೂ. ಗಳ ಭಾರೀ ದಂಡ ಹಾಗೂ ಅಕ್ರಮವಾಗಿ ಗಳಿಸಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಪ್ರಸ್ತುತ ಜಾರಿಯಲ್ಲಿರುವ ‘ಮಹಾರಾಷ್ಟ್ರ ಸ್ಪರ್ಧಾತ್ಮಕ ಪರೀಕ್ಷೆ (ಅನ್ಯಾಯದ ಮಾರ್ಗಗಳ ತಡೆಗಟ್ಟುವಿಕೆ) ಕಾಯ್ದೆ- 2024’ಕ್ಕೆ ತಿದ್ದುಪಡಿ ತಂದು, ಈ ಕಠಿಣ ನಿಯಮಗಳನ್ನು ಸೇರ್ಪಡೆಗೊಳಿಸುವಂತೆ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಮುಂಬರುವ ಮಹಾರಾಷ್ಟ್ರ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿಯೇ ಈ ತಿದ್ದುಪಡಿ ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.

ಈ ಲೇಖನ ಓದಿದ್ದೀರಾ?: ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ

ಅಂದಹಾಗೆ, 2023ರಿಂದ  2026ರ ನಡುವೆ ಎಂಪಿಎಸ್‌ಸಿ ನಡೆಸಿದ ಒಂಬತ್ತು ಪ್ರಮುಖ ಪರೀಕ್ಷೆಗಳಲ್ಲಿ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳ ಕುರಿತು ತನಿಖೆ ನಡೆಸಲು ‘ವಿಚಾರಣಾ ಆಯೋಗ’ ರಚಿಸಿ ಮಹಾರಾಷ್ಟ್ರ ಸರ್ಕಾರ ಆದೇಶಿಸಿತ್ತು. ಆರೋಪಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು, ವಿದ್ಯಾರ್ಥಿಗಳು ಹಾಗೂ ಇತರ ಪಾಲುದಾರರು ತಮ್ಮ ಬಳಿಯಿರುವ ಸಾಕ್ಷ್ಯಾಧಾರಗಳನ್ನು 2026ರ ನವೆಂಬರ್ 16ರೊಳಗೆ ಸಲ್ಲಿಸುವಂತೆ ಆಯೋಗವು ಆಹ್ವಾನ ನೀಡಿತ್ತು.

ವಿಶೇಷವೆಂದರೆ, ಪ್ರಶ್ನೆಪತ್ರಿಕೆ ಸೋರಿಕೆಯ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ಔಷಧ ಆಡಳಿತ ಇಲಾಖೆಯ (FDA) ಅಡಿಯಲ್ಲಿ ಬರುವ ‘ಡ್ರಗ್ ಇನ್ಸ್‌ಪೆಕ್ಟರ್ (ಗ್ರೂಪ್-ಬಿ)’ ಹುದ್ದೆಗಳ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ಎಂಪಿಎಸ್‌ಸಿ ಕಳೆದ ಆಗಸ್ಟ್‌ನಲ್ಲಿ ರದ್ದುಗೊಳಿಸಿತ್ತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಹಿಳೆಯರ ಆರ್ಥಿಕ ಸಬಲೀಕರಣವೇ ಸಮಾಜದ ಪ್ರಗತಿಗೆ ಬುನಾದಿ: ಕವಿತಾ ದಂಡಿನ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ; ಶರಣಾಗಲು ಸುಪ್ರೀಂ ಸೂಚನೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ...

ಚಾಮರಾಜನಗರ |ನ. 26ರಂದು ಸಂವಿಧಾನ ದಿನಾಚರಣೆ : ಜನರ ಧ್ವನಿ ಕಾರ್ಯಕ್ರಮ

ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಮತ್ತು...

ಹಾವೇರಿ | ಶಾಸಕರಿಂದ ವರ್ದಿ ಗ್ರಾಮದ ಸರ್ಕಾರಿ ಶಾಲೆಗೆ ₹2.8 ಲಕ್ಷದ ಸಾಮಗ್ರಿ ವಿತರಣೆ

ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಶ್ರೀನಿವಾಸ ಮಾನೆ ಅವರ...