ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ: ಮುಂಬೈ ನ್ಯಾಯಾಲಯ

Date:

ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿ ತಪಾಸಣೆ ನಡೆಸುವುದು ಅವರ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆ ಹಾಗೂ ಅಪಮಾನಕಾರಿ ಎಂದು ಮುಂಬೈ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿದೆ.

- Advertisement -

“ವಿಚಾರಣಾಧೀನ ಕೈದಿಯ ವಿರುದ್ಧ ಅಸಂಸದೀಯ ಅಥವಾ ಅಶ್ಲೀಲ ಭಾಷೆ ಬಳಸುವುದೂ ಕೂಡಾ ಅಪಮಾನಕಾರಿ. ಆದ ಕಾರಣ ಅಧೀಕ್ಷಕರು ಹಾಗೂ ಸಂಬಂಧಿತ ಭದ್ರತಾ ಸಿಬ್ಬಂದಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕಿದೆ” ಎಂದು ವಿಶೇಷ ನ್ಯಾಯಾಧೀಶ ಬಿ ಡಿ ಶೆಲ್ಕೆ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

1993ರ ಮುಂಬೈ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ ಮೂರನೆ ಹಂತದ ವಿಚಾರಣಾಧೀನ ಕೈದಿಯಾಗಿರುವ ಅಹ್ಮದ್ ಕಮಾಲ್ ಶೇಖ್ ಎಂಬ ಆರೋಪಿಯು, ನ್ಯಾಯಾಲಯದ ವಿಚಾರಣೆಯ ನಂತರ ಕಾರಾಗೃಹಕ್ಕೆ ವಾಪಸು ಕರೆ ತಂದಾಗ, ತನ್ನನ್ನು ಕಾರಾಗೃಹದ ಪ್ರವೇಶ ದ್ವಾರದ ಬಳಿ ಬೆತ್ತಲೆಯಾಗಿ ನಿಲ್ಲಿಸಲಾಗಿತ್ತು ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಒಂದು ವೇಳೆ ವಿದ್ಯುನ್ಮಾನ ಶೋಧಕಗಳು ಲಭ್ಯವಿಲ್ಲದಿದ್ದರೆ ವಿಚಾರಣಾಧೀನ ಕೈದಿಗಳ ವೈಯಕ್ತಿಕ ಶೋಧವನ್ನು ದೈಹಿಕವಾಗಿ ನಡೆಸಬೇಕು. ಆದರೆ ಯಾವುದೇ ಕಾರಣಕ್ಕೂ ಅವರನ್ನು ಬೆತ್ತಲೆ ಮಾಡಬಾರದು. ಅವರ ವಿರುದ್ಧ ಅವಾಚ್ಯ ಅಥವಾ ಅಸಂಸದೀಯ ಭಾಷೆಯನ್ನು ಬಳಸಬಾರದು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಫಿರ್ಯಾದುದಾರರ ಪರ ಸಾಕ್ಷಿಯಾಗಿ ಪರಿವರ್ತನೆಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ತನ್ನನ್ನು ಆರ್ಥರ್ ರಸ್ತೆ ಕಾರಾಗೃಹದ ಅಧೀಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಬೆತ್ತಲೆಗೊಳಿಸಿ ತಪಾಸಣೆ ನಡೆಸಿದ್ದಾರೆ ಎಂದು ನ್ಯಾಯಾಲಯಕ್ಕೆ ನೀಡಿದ್ದ ದೂರಿನಲ್ಲಿ ಹುರುಳಿರುವುದನ್ನು ಕಳೆದ ಫೆಬ್ರವರಿಯಲ್ಲಿ ನ್ಯಾಯಾಲಯ ಗಮನಿಸಿತ್ತು.

ವಿಚಾರಣಾಧೀನ ಕೈದಿಗಳ ತಪಾಸಣೆಯನ್ನು ವಿದ್ಯುನ್ಮಾನ ಶೋಧಕ ಹಾಗೂ ಗ್ಯಾಡ್ಜೆಟ್‌ಗಳನ್ನು ಮಾತ್ರ ಬಳಸಿ ಮಾಡಬೇಕು ಎಂದು ಆರ್ಥರ್ ರಸ್ತೆ ಕಾರಾಗೃಹದ ಅಧೀಕ್ಷಕ ಹಾಗೂ ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...