ಹಾಸ್ಟೆಲ್‌ನಲ್ಲಿ ಉಪಾಹಾರ ಕೇಳಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ

Date:

ಹಾಸ್ಟೆಲ್‌ನಲ್ಲಿ ಉಪಹಾರ ಕೇಳಿದ್ದಕ್ಕಾಗಿ ವಿದ್ಯಾರ್ಥಿ ಮೇಲೆ ಹಾಸ್ಟೆಲ್‌ ಸಿಬ್ಬಂದಿಗಳು ಚಾಕುವಿನಿಂದ ಹಲ್ಲೆಗೈದಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿರುವ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆದಿದೆ.

- Advertisement -

ಕ್ಯಾಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹರ್ಷ್‌ ಅಗರ್ವಾಲ್‌ ಅವರ ಮೇಲೆ ಹಲ್ಲೆ ನಡೆದಿದೆ. ಹರ್ಷ್‌ ಅವರು ಹಾಸ್ಟೆಲ್‌ನ ಉಪಾಹಾರ ಸಮಯದ ಮುಗಿಯುವುದರೊಳಗೆ ಉಪಹಾರ ಪಡೆಯಲು ಸಾಧ್ಯವಾಗಿಲ್ಲ. ತಡವಾಗಿ ಬಂದು ಉಪಹಾರ ಕೇಳಿದ್ದಾರೆ. ತಡವಾಗಿ ಬಂದ ಕಾರಣಕ್ಕೆ, ಉಪಹಾರ ಕೊಡಲು ಸಿಬ್ಬಂದಿಗಳು ನಿರಾಕರಿಸಿದ್ದಾರೆ. ನಿರಾಕರಣೆಯು ಮಾತಿನ ಚಕಮಕಿಗೆ ಕಾರಣವಾಗಿದೆ. ಕುಪಿತಗೊಂಡ ಸಿಬ್ಬಂದಿಗಳು ವಿದ್ಯಾರ್ಥಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಲ್ಲೆಗೊಳಗಾದ ವಿದ್ಯಾರ್ಥಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಸಿಬ್ಬಂದಿ ಮತ್ತು ವಿದ್ಯಾರ್ಥಿ ನಡುವಿನ ವಾಗ್ವಾದದ ಸಮಯದಲ್ಲಿ ಮೆಸ್‌ ಸಿಬ್ಬಂದಿಗಳಾದ ದೀಪಕ್ ಕೆವಾಟ್ ಮತ್ತು ದೀಪೇಂದ್ರ ಕೆವಾಟ್ ಅವರು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ. ವಿದ್ಯಾರ್ಥಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಹಾಸ್ಟೆಲ್ ಆವರಣದಲ್ಲಿ ಚಾಕು ಹಿಡಿದು ಸಿಬ್ಬಂದಿಗಳು ವಿದ್ಯಾರ್ಥಿಯ ಬೆನ್ನಟ್ಟಿದ್ದಾರೆ. ವಿದ್ಯಾರ್ಥಿಗಳ ಎದುರೇ ಈ ಘಟನೆ ನಡೆದಿದ್ದು, ಹಲವರು ಆತಂಕಗೊಂಡಿದ್ದಾರೆ.

ಘಟನೆಯು ಸಿಸಿಟಿವಿಯಲ್ಲಿ ಸೇರೆಯಾಗಿದೆ. ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿವೆ. ಘಟನೆಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಬೆದರಿಕೆಯಾಗಿದೆ ಎಂದು ಅನೇಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಾದ ದೀಪಕ್ ಕೆವಾಟ್ ಮತ್ತು ದೀಪೇಂದ್ರ ಕೆವಾಟ್ ಇಬ್ಬರನ್ನೂ ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...