ರ‍್ಯಾಗಿಂಗ್ ಹೆಸರಿನಲ್ಲಿ ವಿದ್ಯಾರ್ಥಿ ಮೇಲೆ ಭೀಕರ ಹಲ್ಲೆ

Date:

ರ‍್ಯಾಗಿಂಗ್ ಹೆಸರಿನಲ್ಲಿ 10ನೇ ವಿದ್ಯಾರ್ಥಿಯ ಮೇಲೆ 12ನೇ ತರಗತಿ ವಿದ್ಯಾರ್ಥಿಗಳು ಕೋಲು ಮತ್ತು ಬ್ಯಾಟ್‌ಗಳಿಂದ ಭೀಕರವಾಗಿ ಹಲ್ಲೆಗೈದಿರುವ ಘಟನೆ ತೆಲಂಗಾಣದ ರಾಜಪೇಟದಲ್ಲಿರುವ ಸಮಾಜ ಕಲ್ಯಾಣ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ನಡೆದಿದೆ. ಸುಮಾರು 20 ಹಿರಿಯ (12ನೇ ತರಗತಿ) ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.

- Advertisement -

ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮರೆಮಾಚಿತ್ತು. ಆದಾಗ್ಯೂ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಚಾಡಾ ಗ್ರಾಮದ ಸಂತ್ರಸ್ತ ವಿದ್ಯಾರ್ಥಿಯು ರಾಜಪೇಟ ವಸತಿ ಶಾಲೆಯಲ್ಲಿ 5ನೇ ತರಗತಿಯಿಂದಲೂ ವ್ಯಾಸಂಗ ಮಾಡುತ್ತಿದ್ದರು. ಶಾಲೆಯ ವೈಸ್-ಕ್ಯಾಪ್ಟನ್ ಕೂಡ ಆಗಿದ್ದರು. ಆತ ವೈಸ್-ಕ್ಯಾಪ್ಟನ್ ಆಗಿದ್ದ ಕಾರಣಕ್ಕಾಗಿಯೇ, ಆತನನ್ನು ಗುರಿಯಾಗಿಸಿಕೊಂಡು ಹಿರಿಯ ವಿದ್ಯಾರ್ಥಿಗಳು ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.

ಸುಮಾರು 20 ವಿದ್ಯಾರ್ಥಿಗಳ ಗುಂಪೊಂದು ಬ್ಯಾಟ್‌ಗಳು ಮತ್ತು ಕೋಲುಗಳೊಂದಿಗೆ ಸಂತ್ರಸ್ತ ವಿದ್ಯಾರ್ಥಿಯ ಕೋಣೆಗೆ ನುಗ್ಗಿದ್ದಾರೆ. ಆತನನ್ನು ಅವಾಚ್ಯವಾಗಿ ನಿಂದಿಸಿ, ಹೊಡೆಯಲು ಆರಂಭಿಸಿದ್ದಾರೆ. ಹಲ್ಲೆಯ ದೃಶ್ಯವನ್ನು ಸ್ನೇಹಿತರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಪ್ರಯತ್ನಿಸಿದಾಗ, ಹಲ್ಲೆಕೋರರು ಕೊಠಡಿಯ ದೀಪಗಳನ್ನು ಆಫ್ ಮಾಡಿ, ದಾಳಿಯನ್ನು ಮುಂದುವರೆಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತನನ್ನು ರಕ್ಷಿಸಲು ಪ್ರಯತ್ನಿಸಿದ ಇತರ ಐದು ವಿದ್ಯಾರ್ಥಿಗಳ ಮೇಲೂ ಆರೋಪಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿಯ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ನೋಡಿ, ಆತಂಕಗೊಂಡು ಶಾಲೆಗೆ ಧಾವಿಸಿದ್ದಾರೆ. ದಾಳಿಯನ್ನು ತಡೆಯುವಲ್ಲಿ ವಿಫಲವಾದ ಮತ್ತು ಘಟನೆಯನ್ನು ಮುಚ್ಚಿಟ್ಟಿದ್ದ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲ್ಲೆಗೈದಿರುವ ಎಲ್ಲ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ವಿದ್ಯಾರ್ಥಿಗಳ ಕುಟುಂಬಸ್ಥರು ಶಾಲೆಯ ಎದುರು ಧರಣಿ ನಡೆಸಿದ್ದಾರೆ.

“ಕಳೆದ ಎರಡು ದಿನಗಳಿಂದ ಶಾಲೆಯಲ್ಲಿ ವಿಶೇಷ ಸಭೆಗಳು ಮತ್ತು ಸಮಾಲೋಚನೆ ನಡೆದಿದೆ. ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ” ಎಂದು ಶಾಲೆಯ ಪ್ರಾಂಶುಪಾಲ ಸುಧಾಕರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶ ಬಿಡುವಂತೆ ನೀಡಿದ್ದ ನೋಟಿಸ್‌ಗೆ ತಡೆ: ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ರಿಲೀಫ್

​ಅಕ್ಟೋಬರ್ 28ರೊಳಗೆ (ನಾಳೆ) ಭಾರತ ತೊರೆಯುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು...

ಅ.12ರ ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಗೆ ತಳ್ಳಾಟ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

ಅಕ್ಟೋಬರ್ 12ರಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ನಡೆಸಿದ್ದ ಪ್ರತಿಭಟನಾ ಮೆರವಣಿಗೆಯ...

ಚುನಾವಣಾ ಆಯೋಗದಲ್ಲಿ ಗ್ಯಾನೇಶ್‌ ಕುಮಾರ್ ಏಕಪಕ್ಷೀಯ ನಿರ್ಧಾರ; ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ...