ಉತ್ತರ ಪ್ರದೇಶ | ಕಾನ್ಪುರ ಐಐಟಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ; ಒಂದು ತಿಂಗಳಲ್ಲಿ 3ನೇ ಸಾವು

Date:

ಕಾನ್ಪುರದ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಐಐಟಿ) ಕಾಲೇಜಿನಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಗುರುವಾರ ಸಾವನ್ನಪ್ಪಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಐಐಟಿಯಲ್ಲಿ ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಓದುತ್ತಿದ್ದ ಜಾರ್ಖಂಡ್‌ನ ದುಮ್ಕಾ ಮೂಲದ ಪ್ರಿಯಾಂಕಾ ಜೈಸ್ವಾಲ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಒಂದು ತಿಂಗಳಲ್ಲಿ ಕಾನ್ಪುರ ಐಐಟಿ ಕ್ಯಾಂಪಸ್‌ನಲ್ಲಿ ನಡೆದ 3ನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಪ್ರಿಯಾಂಕಾ ಅವರು ಕಳೆದ ವರ್ಷ ಡಿಸೆಂಬರ್ 29 ರಂದು ಸಂಸ್ಥೆಗೆ ಪ್ರವೇಶ ಪಡೆದಿದ್ದರು ಎಂದು ತಿಳಿದುಬಂದಿದೆ. ಸಂಸ್ಥೆಗೆ ಸೇರಿದ 20 ದಿನಗಳಲ್ಲಿಯೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆತ್ಮಹತ್ಯೆಯ ಬಗ್ಗೆ ಮಾಹಿತಿ ಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಅವರ ಕೊಠಡಿಯ ಬಾಗಿಲು ಒಳಗಿನಿಂದ ಲಾಕ್‌ ಆಗಿತ್ತು. ಬಾಗಿಲನ್ನು ಒಡೆದು ಪರಿಶೀಲಿಸಿದಾಗ, ಅವರು ಮೃತಪಟ್ಟಿರುವುದು ಕಂಡುಬಂದಿತು” ಎಂದು ಕಾನ್ಪುರ ಹೆಚ್ಚುವರಿ ಡಿಸಿಪಿ ಆಕಾಶ್ ಪಟೇಲ್ ತಿಳಿಸಿದ್ದಾರೆ.

“ಫೋರೆನ್ಸಿಕ್ ತಂಡವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದೆ. ಪ್ರಾಥಮಿಕ ತನಿಖೆ ಮತ್ತು ಇತರ ವಿವರಗಳನ್ನು ಪಡೆದ ಬಳಿಕ ಆಕೆಯ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಬಹುದು” ಎಂದು ಅವರು ಹೇಳಿದ್ದಾರೆ.

“2023ರ ಡಿಸೆಂಬರ್‌ನಲ್ಲಿ ಸಂಸ್ಥೆಗೆ ಪ್ರವೇಶ ಪಡೆದಿದ್ದ ಪ್ರಿಯಾಂಕಾ ಅವರ ಅಕಾಲಿಕ ಮತ್ತು ದುರದೃಷ್ಟಕರ ಸಾವು ತೀವ್ರ ದುಃಖ ತಂದಿದೆ. ಕಾನ್ಪುರ ಐಐಟಿ ಸಂತಾಪ ವ್ಯಕ್ತಪಡಿಸುತ್ತದೆ. ಆಕೆಯ ಸಾವಿಗೆ ಸಂಭವನೀಯ ಕಾರಣವೇನು ಎಂದು ತಿಳಿಯಲು ಸಂಸ್ಥೆಯು ಪೊಲೀಸ್ ತನಿಖೆಗಾಗಿ ಕಾಯುತ್ತಿದೆ. ಆಕೆಯ ಸಾವಿನಿಂದ ಸಂಸ್ಥೆಯು ಭರವಸೆಯ ಯುವ ವಿದ್ಯಾರ್ಥಿಯನ್ನು ಕಳೆದುಕೊಂಡಿದೆ” ಎಂದು ಕಾನ್ಪುರ ಐಐಟಿ ಹೇಳಿದೆ.

ಜನವರಿ 11 ರಂದು, ಇನ್ಸ್ಟಿಟ್ಯೂಟ್‌ನ ಎರಡನೇ ವರ್ಷದ ಎಂ.ಟೆಕ್ ವಿದ್ಯಾರ್ಥಿ ವಿಕಾಸ್ ಕುಮಾರ್ ಮೀನಾ (31) ತನ್ನ ಹಾಸ್ಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ ತನ್ನ ಕೋರ್ಸ್‌ನಲ್ಲಿ ಮುಂದುವರೆಯುವುದನ್ನು ‘ತಾತ್ಕಾಲಿಕವಾಗಿ’ ನಿರ್ಬಂಧಿಸಲಾಗಿತ್ತು ಎಂದು ಹೇಳಲಾಗಿದೆ.

ಅದಕ್ಕೂ ಹಿಂದೆ, ಡಿಸೆಂಬರ್ 19 ರಂದು, ಪೋಸ್ಟ್‌ಡಾಕ್ಟರಲ್ ಸಂಶೋಧಕಿ ಪಲ್ಲವಿ ಚಿಲ್ಕಾ (34) ಅವರು ಕ್ಯಾಂಪಸ್‌ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...