ದೆಹಲಿ ಶಾಲಾ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ; ಸ್ಥಳದಲ್ಲಿ ಮೂರು ಡೆತ್‌ನೋಟ್‌ಗಳು ಪತ್ತೆ

Date:

ರಾಷ್ಟ್ರ ರಾಜಧಾನಿ ದೆಹಲಿಯ ಕೃಷ್ಣ ನಗರ ಪ್ರದೇಶದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದ ಶಾಲಾ ಆವರಣದಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದಾರುಣ ಘಟನೆ ಶನಿವಾರ ನಡೆದಿದೆ. ಶಾಲೆಯ ಆವರಣದಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಆತಂಕಗೊಂಡಿದ್ದಾರೆ.

- Advertisement -

ಪೊಲೀಸ್ ಮೂಲಗಳು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವಿದ್ಯಾರ್ಥಿನಿಯು ಶನಿವಾರ ಮಧ್ಯಾಹ್ನದ ವೇಳೆ ಶಾಲೆಗೆ ಬಂದಿದ್ದು, ಶಾಲೆಯ ಗಾರ್ಡ್ ರೂಮ್‌ನ ಹಿಂಭಾಗದ ಪ್ರದೇಶಕ್ಕೆ ತೆರಳಿದ್ದಾಳೆ. ಅಲ್ಲಿ ತಾನು ತಂದಿದ್ದ ಪೆಟ್ರೋಲ್ ಅನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಷ್ಟರಲ್ಲಿ ಆಕೆ ಕೊನೆಯುಸಿರೆಳದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಘಟನಾ ಸ್ಥಳಕ್ಕೆ ಧಾವಿಸಿದ ದೆಹಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾರ್ಥಿನಿಯ ಶಾಲಾ ಬ್ಯಾಗ್ ಅನ್ನು ಪರಿಶೀಲಿಸಿದಾಗ ಪೊಲೀಸರಿಗೆ ಮೂರು ಪ್ರಮುಖ ಡೆತ್‌ನೋಟ್‌ಗಳು ದೊರೆತಿವೆ. ಈ ಪತ್ರಗಳ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಿದ್ದು, ಪ್ರಕರಣದ ಹಿಂದೆ ಪ್ರೇಮ ಪ್ರಕರಣವಿದೆ ಎಂದು ಕಂಡುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisements

ಆಕೆಯ ಸಾವಿಗೆ ನಿಖರವಾದ ಕಾರಣವೇನು ಮತ್ತು ಆ ಡೆತ್‌ನೋಟ್‌ಗಳಲ್ಲಿ ಏನೆಲ್ಲ ಬರೆಯಲಾಗಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ ಸ್ಥಳಕ್ಕೆ ತಕ್ಷಣವೇ ಅಪರಾಧ ತನಿಖಾ ದಳವನ್ನು ಕರೆಸಲಾಗಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ದೆಹಲಿ ಪೊಲೀಸರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ನಿರ್ಬಂಧ ಭೀತಿ: ಇರಾನ್‌ಗೆ ಔಷಧ ಸಾಗಿಸುವ ನೇರ ವಿಮಾನ ಹಾರಾಟಕ್ಕೆ ಭಾರತ ತಡೆ

ಅಮೆರಿಕ ವಿಧಿಸಬಹುದಾದ ಆರ್ಥಿಕ ನಿರ್ಬಂಧಗಳ ಭೀತಿಯಿಂದಾಗಿ, ಇರಾನ್ ಜತೆಗಿನ ನೇರ ವಿಮಾನಗಳ...

ಸೊರಬ | ಮಾದಕ ದ್ರವ್ಯ, ಡಿಜಿಟಲ್ ವಂಚನೆ ವಿರೋಧಿ ಜನಜಾಗೃತಿ ಜಾಥಾ ಮತ್ತು ಯುವ ಸಮಾವೇಶ

ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳ ಬಗ್ಗೆ ಯುವಜನರಲ್ಲಿ...

ಜ.1ರಿಂದ ವಾಟ್ಸಾಪ್‌, ಟೆಲಿಗ್ರಾಂ ಬಳಕೆಗೆ ಹೊಸ ರೂಲ್ಸ್; ಸಿಮ್‌ ತೆಗೆದರೆ ಖಾತೆ ಬಂದ್‌!

ವಾಟ್ಸಾಪ್‌, ಟೆಲಿಗ್ರಾಂ ಸೇರಿದಂತೆ ಮೊಬೈಲ್‌ ಸಂಖ್ಯೆಯ ಆಧಾರದಲ್ಲಿ ಕಾರ್ಯನಿರ್ವಹಿಸುವ ಮೆಸೇಜಿಂಗ್‌ ಆ್ಯಪ್‌ಗಳ...