ಆನ್‌ಲೈನ್‌ ಗೇಮಿಂಗ್ ಚಟ | 96 ಲಕ್ಷ ರೂ. ಸಾಲ ಮಾಡಿದ ವಿದ್ಯಾರ್ಥಿ; ಪತ್ರಕರ್ತನ ಮುಂದೆ ಕಣ್ಣೀರು!

Date:

ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ವಿದ್ಯಾರ್ಥಿಯೊಬ್ಬ ಒಂದೆರಡಲ್ಲ ಬರೋಬ್ಬರಿ 96 ಲಕ್ಷ ರೂಪಾಯಿ ಸಾಲವನ್ನು ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

- Advertisement -

ವಿದ್ಯಾರ್ಥಿ ಆನ್‌ಲೈನ್ ಗೇಮಿಂಗ್ ಗೀಳಿನಿಂದ ಸಾಲ ಮಾಡಿಕೊಂಡು ಕುಟುಂಬದಿಂದಲೇ ದೂರವಾಗಿರುವ ಬಗ್ಗೆ ನ್ಯೂಸ್‌18ನ ಪತ್ರಕರ್ತ ಪ್ರತೀಕ್ ತ್ರಿವೇದಿ ಅವರ ಕಾರ್ಯಕ್ರಮವೊಂದಲ್ಲಿ ಅಳಲು ತೋಡಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ವಿಡಿಯೋದಲ್ಲಿ ವಿದ್ಯಾರ್ಥಿ ಭಾವುಕನಾಗಿ ಕಣ್ಣೀರು ಸುರಿಸುತ್ತಾ, “ಆನ್‌ಲೈನ್ ಗೇಮಿಂಗ್‌ನಿಂದಾಗಿ ಹಲವಾರು ವಿದ್ಯಾರ್ಥಿಗಳು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಾರೆ. ನಾನು ಈ ಆಟ ಆಡಿ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ನನ್ನ ಮೇಲೆ 96 ಲಕ್ಷ ರೂಪಾಯಿ ಸಾಲದ ಹೊರೆಯಿದೆ. ಇದರಿಂದಾಗಿ ನನ್ನ ಕುಟುಂಬವೂ ನನ್ನಿಂದ ದೂರವಾಗಿದೆ. ಯಾರೂ ನನ್ನ ಬಳಿ ಮಾತನಾಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಇದನ್ನು ಓದಿದ್ದೀರಾ? ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

“ನಾನು ಹಲವಾರು ಮಂದಿಯಿಂದ ಸಾಲ ಪಡೆದುಕೊಂಡಿದ್ದೇನೆ. ಅದಾದ ಬಳಿಕ ನಾನು ಆನ್‌ಲೈನ್‌ ಗೇಮಿಂಗ್‌ ಚಟದಲ್ಲಿ ವಂಚನೆಯನ್ನೂ ಮಾಡಿದ್ದೇನೆ. ಭಾರೀ ಸಾಲವಾದ ಬಳಿಕ ಆತ್ಮಹತ್ಯೆಯ ಯತ್ನವೂ ಮಾಡಿದ್ದೇನೆ” ಎಂದಿದ್ದಾನೆ.

ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯಾರ್ಥಿಯನ್ನು ಭೇಟಿಯಾಗಲು ಶಿಕ್ಷಕಿಯಾಗಿರುವ ತಾಯಿ ಒಪ್ಪಿಕೊಂಡಿದ್ದಾರೆ ಎಂದು ನ್ಯೂಸ್18 ವರದಿ ಮಾಡಿದೆ.

ಇದರ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಠೆ, “ಖ್ಯಾತ ಸೆಲೆಬ್ರೆಟಿಗಳು, ಪ್ರಭಾವಿಗಳು ಜೂಜಿನಲ್ಲಿ ಸಿಲುಕಿಸಿ ಯುವಕರ ಜೀವನವನ್ನು ಹೇಗೆ ಹಾಳುಗೆಡವುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ. ಭಾರತದ ಯುವಕರ ಜೀವನವನ್ನೇ ಆನ್‌ಲೈನ್ ಗೇಮಿಂಗ್‌ಗಳನ್ನು ಪ್ರೊಮೋಟ್ ಮಾಡುವ ಸೆಲೆಬ್ರೆಟಿಗಳು ನಾವು ಜನರನ್ನು ಈ ಗೇಮ್ ಆಡಿ ಎಂದು ಒತ್ತಡ ಹೇರುತ್ತಿಲ್ಲ ಎಂದು ಹೇಳಿಕೊಳ್ಳುತ್ತಾರೆ. ಆದರೆ ಈ ಸೆಲೆಬ್ರೆಟಿಗಳೇ ಯುವಕರ ಮೇಲೆ ಪ್ರಭಾವ ಬೀರುವುದು” ಎಂದಿದ್ದಾರೆ.

“ಸ್ಪೇನ್, ಇಟಲಿ, ನೆದರ್‌ಲ್ಯಾಂಡ್, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಬಹುತೇಕ ಅಭಿವೃದ್ಧಿಯಾದ ದೇಶಗಳಲ್ಲಿ ಸೆಲೆಬ್ರೆಟಿಗಳ ಮೂಲಕ ಈ ಜೂಜಿನ ಆಪ್‌ಗಳ ಪ್ರಚಾರ ಮಾಡುವುದು ನಿಷೇಧವಾಗಿದೆ. ಟಿವಿಯಲ್ಲಿಯೂ ಈ ಜಾಹೀರಾತು ತೋರಿಸುವುದು ಬ್ಯಾನ್ ಆಗಿದೆ. ಆದರೆ ನಮ್ಮ ದೇಶದಲ್ಲಿ ಯಾವುದೇ ನಿಷೇಧವಿಲ್ಲ. ಈ ಜೂಜಿಗೆ ಅವಕಾಶ ನೀಡಲಾಗುತ್ತದೆ. ಸೆಲೆಬ್ರೆಟಿಗಳು ಈ ಆಪ್‌ಗಳ ಪ್ರಚಾರ ಮಾಡುತ್ತಾರೆ. ನಿಮ್ಮಲ್ಲಿ ಇಂತಹ ಆಪ್‌ಗಳಿದ್ದರೆ ಇಂದೇ ಡಿಲೀಟ್ ಮಾಡಿ. ನೀವು ಯಾವ ಜಾಲದಲ್ಲಿ ಸಿಲುಕುತ್ತಿದ್ದೀರಿ ಎಂಬುದು ನಿಮಗೆಯೇ ತಿಳಿದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...