ಶಾಯಿ ದಾಳಿಗೆ ‘ಶಾಯಿಯಿಂದಲೇ ನಮ್ಮ ಭವಿಷ್ಯ ಬರೆಯುತ್ತೇವೆ’ ಎಂದು ತಿರುಗೇಟು ನೀಡಿದ ವಿದ್ಯಾರ್ಥಿನಿ

Date:

ಜಾರ್ಖಂಡ್‌ನ ರಾಂಚಿಯಲ್ಲಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯಾದ ‘ಐಸಾ’ (AISA) ಅಧ್ಯಕ್ಷೆ ನೇಹಾ ಬೋರಾ ಹಾಗೂ ಸುಮಾರು 20 ಮಹಿಳೆಯರ ಮೇಲೆ ಆರ್.ಎಸ್.ಎಸ್ (RSS) ಮತ್ತು ಬಿಜೆಪಿ ಬೆಂಬಲಿತ ಗೂಂಡಾಗಳು ಶಾಯಿ (ಮಸಿ) ಎರಚಿ ದಾಳಿ ನಡೆಸಿದ್ದಾರೆ.

- Advertisement -

ಆದರೆ, ಘಟನೆಯಿಂದ ಕಿಂಚಿತ್ತೂ ವಿಚಲಿತರಾಗದ ನೇಹಾ, ದುಷ್ಕರ್ಮಿಗಳಿಗೆ ದಿಟ್ಟ ಉತ್ತರ ನೀಡಿದ್ದಾರೆ. “ಅವರಿಗೆ ಈ ಶಾಯಿ ಬೇರೆಯವರನ್ನು ಅವಮಾನಿಸಲು ಬಳಸುವ ಒಂದು ಅಸ್ತ್ರವಾಗಿರಬಹುದು. ಆದರೆ, ನಾವು ಅದೇ ಶಾಯಿಯಿಂದಲೇ ನಮ್ಮ ಭವಿಷ್ಯವನ್ನು ಬರೆಯುತ್ತೇವೆ” ಎಂದು ಅವರು ಗುಡುಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಶಾಯಿ ದಾಳಿಯ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನೇಹಾ ಬೋರಾ ಅವರು ಘಟನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. “ತನ್ನ ಈ ಕ್ರಿಮಿನಲ್ ಕೃತ್ಯವನ್ನು ಸಮರ್ಥಿಸಿಕೊಳ್ಳಲು ಆ ಅಪರಿಚಿತ ವ್ಯಕ್ತಿಯು, ಆರ್.ಎಸ್.ಎಸ್ ನಂಟು ಹೊಂದಿರುವ ಜನರು ಮಾಡುವಂತೆಯೇ ಧರ್ಮವನ್ನು ಬಳಸಿಕೊಂಡು ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದನು” ಎಂದು ಅವರು ಆರೋಪಿಸಿದ್ದಾರೆ. ಕೃತ್ಯ ಎಸಗಿದ ಕೂಡಲೇ ಪ್ರತಿಭಟನಾ ಸ್ಥಳದಲ್ಲಿದ್ದ ಜನರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತ ಪ್ರಸ್ತುತ ಪೊಲೀಸ್ ಠಾಣೆಯಲ್ಲಿದ್ದು, ಆತನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಹಾಗೂ ತೀವ್ರ ವಿಚಾರಣೆ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿ ಚಳುವಳಿಯನ್ನು ದುರ್ಬಲಗೊಳಿಸುವ ಉದ್ದೇಶದಿಂದಲೇ ಆರ್.ಎಸ್.ಎಸ್ ಮತ್ತು ಬಿಜೆಪಿ ಬೆಂಬಲಿತರು ಪದೇ ಪದೇ ಇಂತಹ ಹಿಂಸಾಚಾರಗಳಿಗೆ ಇಳಿಯುತ್ತಿದ್ದಾರೆ ಎಂದು ನೇಹಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರಶ್ನಿಸಿದ ಅವರು, “ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಜಾರ್ಖಂಡ್‌ನ ವಿದ್ಯಾರ್ಥಿ ಚಳುವಳಿಯನ್ನು ತಾವೇ ನಡೆಸುತ್ತಿದ್ದೇವೆ, ಅದು ಬಲಪಂಥೀಯರು ಅಥವಾ ಬಿಜೆಪಿಯಿಂದ ನಡೆಯುತ್ತಿದೆ ಮತ್ತು ಅಲ್ಲಿಗೆ ಬೇರೆ ಯಾರನ್ನೂ ಪ್ರವೇಶಿಸಲು ಬಿಡುವುದಿಲ್ಲ ಎಂದು ಹೇಳಿಕೊಳ್ಳುವವರನ್ನು ನಾನು ಕೇಳಲು ಬಯಸುತ್ತೇನೆ. ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ಮುಂದಿಟ್ಟಿರುವ ಅದೇ ಬೇಡಿಕೆಗಳ ಆಧಾರದ ಮೇಲೆ ನಾವು ಶಾಂತಿಯುತ ಮೆರವಣಿಗೆ ನಡೆಸುವಾಗ, ಆ ಮೆರವಣಿಗೆಯನ್ನು ಅಡ್ಡಿಪಡಿಸುವ ಮತ್ತು ಹಿಂಸಾಚಾರಕ್ಕೆ ಇಳಿಯುವ ಅಗತ್ಯ ನಿಮಗೇಕೆ ಬಂತು?” ಎಂದು ಅವರು ಪ್ರಶ್ನಿಸಿದ್ದಾರೆ.

ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳ ಧ್ವನಿಯನ್ನು ಇಂತಹ ಬೆದರಿಕೆ ಹಾಗೂ ಹಿಂಸಾಚಾರಗಳ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ನೇಹಾ ಬೋರಾ ಅವರ ದಿಟ್ಟ ನುಡಿಗಳು ಸ್ಪಷ್ಟಪಡಿಸಿವೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೂ ಮಾಫಿಯಾ, ಬೆದರಿಕೆ ಆರೋಪ: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟು ಜಾರ್ಖಂಡ್ ಬುಡಕಟ್ಟು ನಾಯಕಿ ಆತ್ಮಹತ್ಯೆ

ಜಾರ್ಖಂಡ್‌ನ ರಾಂಚಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಮತ್ತು ನಾಯಕಿ ನಿಶಾ ಕುಮಾರಿ...

ದೇಶದ ಭದ್ರತೆಗೆ ಧಕ್ಕೆಯಾದ ಅಗ್ನಿಪಥ್ ಯೋಜನೆ ತಕ್ಷಣವೇ ರದ್ದುಗೊಳಿಸಿ: ಕಾಂಗ್ರೆಸ್ ಆಗ್ರಹ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಶಸ್ತ್ರ ಪಡೆಗಳ 'ಅಗ್ನಿಪಥ್' ನೇಮಕಾತಿ ಯೋಜನೆಯನ್ನು...

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ ಮೂಲಭೂತ ಹಕ್ಕುಗಳ ಮೇಲೇಕೆ ತೂಗುಕತ್ತಿ?

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ...