ಸಿಎಂ ನಾಯ್ಡು ಜೊತೆ ವೇದಿಕೆ ಹಂಚಿಕೊಂಡಿದ್ದ ವಿದ್ಯಾರ್ಥಿನಿ ಅಸಹಜ ಸಾವು

Date:

ಕೆಲವೇ ದಿನಗಳ ಹಿಂದೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಜೊತೆ ವೇದಿಕೆ ಹಂಚಿಕೊಂಡು, ಭಾಷಣ ಮಾಡಿದ್ದ ವಿದ್ಯಾರ್ಥಿನಿಯೊಬ್ಬರು ಅಸಹಜವಾಗಿ (ಆತ್ಮಹತ್ಯೆ) ಸಾವನ್ನಪ್ಪಿದ್ದಾರೆ. ಆಕೆಯ ಸಾವಿನ ಘಟನೆಗೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

- Advertisement -

ಮೃತ ವಿದ್ಯಾರ್ಥಿನಿಯನ್ನು ಮುರ್ರಂ ಶಿವಾನಿ ಎಂದು ಗುರುತಿಸಲಾಗಿದೆ. ಅವರು ರಾಂಪಚೋಡವರಂ ಸರ್ಕಾರಿ ಜಿಲ್ಲಾ ಪಂಚಾಯತ್ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಕೆ ತನ್ನ ಸಾವಿಗೂ ಮೂರು ದಿನಗಳ ಮುನ್ನ ನಡೆದ ಮೆಗಾ ಪೇರೆಂಟ್-ಟೀಚರ್ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಶಿಕ್ಷಣ ಸಚಿವ ನಾರಾ ಲೋಕೇಶ್ ಅವರ ಸಮ್ಮುಖದಲ್ಲಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ಅವರು ಭವಿಷ್ಯದಲ್ಲಿ ‘ಶೈನಿಂಗ್ ಸ್ಟಾರ್’ ಪ್ರಶಸ್ತಿ ಪಡೆಬೇಕೆಂಬ ಗುರಿ ಹೊಂದಿರುವುದಾಗಿ ಹೇಳಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ವಿದ್ಯಾರ್ಥಿನಿಯ ಭಾಷಣವನ್ನು ಮೆಚ್ಚಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಕೆಯನ್ನು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಮಾತುಕತೆ ನಡೆಸಿದ್ದರು. ಬಳಿಕ ಇತರ ವಿದ್ಯಾರ್ಥಿಗಳೊಂದಿಗೆ ಊಟವನ್ನೂ ಮಾಡಿದ್ದರು.

ಆದರೆ, ಇದೀಗ ಆಕೆ ಸಾವನ್ನಪ್ಪಿದ್ದಾರೆ. ಶಿವಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಶಿವಾನಿ ಅವರ ಅಜ್ಜಿಯ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಒಂದು ಕೈಬರಹದ ಪತ್ರವೂ ದೊರೆತಿದ್ದು, ಅದರಲ್ಲಿ ಪೋಷಕರಲ್ಲಿ ಕ್ಷಮೆ ಕೇಳುವುದಾಗಿಯೂ, ತಾನು ಅವರ ಕನಸುಗಳನ್ನು ನನಸಾಗಿಸಲು ಶ್ರಮಿಸಬೇಕೆಂಬ ಆಸೆ ಹೊಂದಿದ್ದಾಗಿಯೂ ಉಲ್ಲೇಖಿಸಿದ್ದಾರೆ. ಅಲ್ಲದೆ, ಕುಟುಂಬದವರು ಒಗ್ಗಟ್ಟಿನಿಂದ ಇರಬೇಕೆಂದೂ ಆಕೆ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಆಕೆಯ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಪ್ರಕರಣವನ್ನು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಿವಾನಿ ಸಾವಿಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಶಾಲಾ ಕಾರ್ಯಕ್ರಮದಲ್ಲಿ ಶಿವಾನಿ ಅವರ ಉತ್ಸಾಹ ಮತ್ತು ಕನಸುಗಳನ್ನು ನೆನಪಿಸಿಕೊಂಡರೆ, ಈ ಘಟನೆ ಅತ್ಯಂತ ನೋವುಂಟುಮಾಡಿದೆ ಎಂದು ಹೇಳಿದ್ದಾರೆ.

“ಭಾವನಾತ್ಮಕ ಒತ್ತಡ ಅಥವಾ ಸಂಕಷ್ಟವನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ತಮ್ಮ ಕುಟುಂಬದವರು, ಸ್ನೇಹಿತರು ಅಥವಾ ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತನಾಡಿ ಸಹಾಯ ಪಡೆಯಬೇಕು. ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ” ಎಂದು ನಾಯ್ಡು ಹೇಳಿದ್ದಾರೆ.  

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

30 ದಿನ ಕಳೆದರೂ ʼRTIʼಗೆ ಉತ್ತರವಿಲ್ಲ; ECI ಮೇಲೊಂದು ಪ್ರಶ್ನಾರ್ಥಕ ಚಿಹ್ನೆ! 

'ಚುನಾವಣಾ ಆಯೋಗ ಏನು ಮುಚ್ಚಿಡಲು ಪ್ರಯತ್ನಿಸುತ್ತಿದೆ?' ಎಂಬ ಗಂಭೀರ ಅನುಮಾನ ಈಗ...

ನ.1ರಂದು ʼದಿಲ್ಲಿ ಚಲೋʼ | ಪ್ರಜಾಪ್ರಭುತ್ವ ಉಳಿಸಲು ಎಲ್ಲರೂ ಜೊತೆಗೂಡುವಂತೆ ರಾಹುಲ್ ಗಾಂಧಿ ಕರೆ

ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು, ಮತಗಳ್ಳತನವನ್ನು ತಡೆಯಲು ಹಾಗೂ ಸಂವಿಧಾನವನ್ನು ರಕ್ಷಿಸಲು ನವೆಂಬರ್...

SIR ಸಂಚು: 10 ಕೋಟಿ ಜನರಲ್ಲಿ ಸಿಕ್ಕಿದ್ದು ಬರಿ 1,600 ವಿದೇಶಿಯರು!

ದೇಶಾದ್ಯಂತ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ನಡೆಸುತ್ತಿರುವುದು ದೇಶದ...

ಅಪ್ರಾಪ್ತ ಪುತ್ರನಿಂದ ಕಾರು ಅಪಘಾತ: ಕೇರಳದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಕೊಚ್ಚಿಯಲ್ಲಿ 17 ವರ್ಷದ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್-ಬೆಂಜ್ ಕಾರು ಡಿಕ್ಕಿ...