ಆಹ್ವಾನವಿಲ್ಲದೆ ಮದುವೆ ಊಟಕ್ಕೆ ಬಂದ ವಿದ್ಯಾರ್ಥಿಗಳು; ಛತ್ರದಲ್ಲಿ ಹಿಂಸಾಚಾರ

Date:

ಆಹ್ವಾನವಿಲ್ಲದೆ ಮದುವೆ ಊಟಕ್ಕೆ ತೆರಳಿದ್ದ ಹಾಸ್ಟೆಲ್‌ ವಿದ್ಯಾರ್ಥಿಗಳನ್ನು ಮದುವೆ ಮನೆಯವರು ಪ್ರಶ್ನಿಸಿದ್ದು, ಸಿಡಿಮಿಡಿಗೊಂಡ ವಿದ್ಯಾರ್ಥಿಗಳು ಕಲ್ಲು, ಕಚ್ಛಾ ಬಾಂಬ್‌ಗಳನ್ನು ಎಸೆದು ಹಿಂಸಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

- Advertisement -

ಲಕ್ನೋದ ಹಸನ್‌ಗಂಜ್‌ನಲ್ಲಿ ಮದುವೆ ಸಮಾರಂಭ ನಡೆದಿದೆ. ಈ ವೇಳೆ, ಸುಮಾರು 150 ವಿದ್ಯಾರ್ಥಿಗಳು ರುಚಿಯಾದ ಊಟ ಸವಿಯಲು ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ. ಆಹ್ವಾನವಿಲ್ಲದಿದ್ದರೂ ಬಂದಿದ್ದ ವಿದ್ಯಾರ್ಥಿಗಳನ್ನು ಮದುವೆ ಮನೆಯವರು ಪ್ರಶ್ನಿಸಿದ್ದಾರೆ. ಕೋಪಗೊಂಡ ವಿದ್ಯಾರ್ಥಿಗಳು ಅತಿಥಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ಉಲ್ಬಣಗೊಂಡು ಅತಿಥಿಗಳ ಮೇಲೆ ಕಲ್ಲು ಮತ್ತು ಕಚ್ಚಾ ಬಾಂಬ್‌ಗಳನ್ನು ಎಸೆದು ಹಿಂಸಾಚಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಘಟನೆಯಲ್ಲಿ 20 ಮಂದಿ ಅತಿಥಿಗಳಿಗೆ ಗಾಯಗಳಾಗಿದ್ದು, ಅವರಲ್ಲಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಚುನಾವಣಾ ಬಾಂಡ್ | ಆರೋಪಿ, ಅಪರಾಧಿಗಳೇ ಇಲ್ಲದ ಹಗರಣವೇ?

ವಿದ್ಯಾರ್ಥಿಗಳು ಮತ್ತು ಮದುವೆ ಮನೆಯವರು ಪೊಲೀಸ್‌ ಠಾಣೆಯಲ್ಲಿ ಪರಸ್ಪರರ ವಿರುದ್ಧ ದೂರು ದಾಖಲಿಸಿದ್ದಾರೆ. ಎರಡೂ ಕಡೆಯವರ ದೂರುಗಳ ಆಧಾರದ ಮೇಲೆ ಹಸನ್‌ಗಂಜ್‌ ಪೊಲೀಸ್‌ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಹಿಂಸಾಚಾರದಿಂದಾಗಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪೊಲೀಸರ ಭದ್ರತೆಯಲ್ಲಿ ಮದುವೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...