ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮೆ ಬೇಡ, ನೀವು ಕ್ಷಮೆ ಕೇಳಿ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Date:

ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಕ್ಷಮಿಸುವುದಾಗಿ ಹೇಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರಧಾನಿ ಕ್ಷಮೆ ನೀಡುವ ಅಗತ್ಯವಿಲ್ಲ, ಬದಲಾಗಿ ಅವರಲ್ಲಿ ಕ್ಷಮೆಯಾಚನೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌, ಶಿಕ್ಷಣ ವ್ಯವಸ್ಥೆಯ ವೈಫಲ್ಯದಿಂದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಅನುಭವಿಸಿರುವ ನೋವನ್ನು ಪ್ರಧಾನಿ ಅರ್ಥಮಾಡಿಕೊಂಡಿಲ್ಲ. ತಮ್ಮ ಮಗ ಅಥವಾ ಮಗಳನ್ನು ಕಳೆದುಕೊಂಡ ಪೋಷಕರ ನೋವಿಗಿಂತ ದೊಡ್ಡ ನೋವು ಮತ್ತೊಂದಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯ ಸಾವಿನ ಹಿಂದೆ ಜೀವಮಾನವಿಡೀ ಮರೆಯಲಾಗದ ದುಃಖವಿದೆ. ಜೊತೆಗೆ ದೇಶದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳೂ ಇವೆ. ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷೆಗಳ ರದ್ದತಿ, ವರ್ಷಗಳ ಪರಿಶ್ರಮ ಒಂದೇ ರಾತ್ರಿ ವ್ಯರ್ಥವಾಗುತ್ತಿದೆ. ಪ್ರಾಮಾಣಿಕವಾಗಿ ಓದಲು ವಿದ್ಯಾರ್ಥಿಗಳಿಗೆ ಹೇಳಲಾಗುತ್ತಿದೆ. ಆದರೆ ಅವರಿಗೆ ನ್ಯಾಯಯುತ ವ್ಯವಸ್ಥೆಯೇ ಸಿಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು “ದಾರಿ ತಪ್ಪಿದ ಮಕ್ಕಳು” ಎಂದಿರುವ ಪ್ರಧಾನಿ, ಅವರನ್ನು ಕ್ಷಮಿಸುವುದಾಗಿ ಹೇಳಿದ್ದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್, “ಪ್ರಧಾನಿಗೆ ವಿದ್ಯಾರ್ಥಿಗಳನ್ನು ‘ಕ್ಷಮಿಸುವ’ ಧೈರ್ಯ ಹೇಗೆ ಬರುತ್ತದೆ? ಅವರು ತಮ್ಮ ಮಕ್ಕಳನ್ನು ಕಳೆದುಕೊಂಡ ಒಬ್ಬ ಪೋಷಕರನ್ನೂ ಭೇಟಿ ಮಾಡಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಭವಿಷ್ಯ ಕಳೆದುಕೊಂಡ ಒಬ್ಬ ವಿದ್ಯಾರ್ಥಿಯೊಂದಿಗೂ ಕುಳಿತು ಮಾತನಾಡಿಲ್ಲ. ಭಾರತದ ವಿದ್ಯಾರ್ಥಿಗಳಿಗೆ ಅವರ ಕ್ಷಮೆ ಬೇಕಾಗಿಲ್ಲ; ಅವರಲ್ಲಿ ಪ್ರಧಾನಿ ಕ್ಷಮೆಯಾಚಿಸಬೇಕಿದೆ” ಎಂದು ಹೇಳಿದ್ದಾರೆ.

ಶುಕ್ರವಾರ ರಾತ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ತಮ್ಮ ಹಾಗೂ ತಮ್ಮ ದಿವಂಗತ ತಾಯಿಯ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ. ಸಮಾಜದಲ್ಲಿರುವ ಆಕ್ರೋಶವನ್ನು ಅರ್ಥಮಾಡಿಕೊಳ್ಳಬಹುದು. ಆದರೆ ನಿಂದನೆಗಳಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ದಾರಿ ತಪ್ಪಿದ ಯುವಕರಿಗೆ ಸರಿದಾರಿ ತೋರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳ ಬೆನ್ನಟ್ಟಿರುವ ದೆಹಲಿ ಪೊಲೀಸರಿಗೆ ತಮ್ಮದೇ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ʼಕೈʼ ಬರುತ್ತಿಲ್ಲವೇ?

ಪ್ರತಿಭಟನಾಕಾರರನ್ನು “ನಮ್ಮ ಮಕ್ಕಳು” ಎಂದು ಹೇಳಿದ್ದ ಪ್ರಧಾನಿ, ಅವರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಗಳ ಅಲೆದಾಟಕ್ಕೆ ಒಳಪಡಿಸುವ ಬದಲು ಕ್ಷಮಿಸಬೇಕು. ಯುವಜನರನ್ನು ತಬ್ಬಿಕೊಂಡು ಸರಿದಾರಿಯಲ್ಲಿ ನಡೆಸುವುದು ಸಮಾಜದ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದರು.

ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಕಾಕ್‌ರೋಚ್‌ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜೂನ್‌ 20ರಂದು ಜಂತರ್‌ ಮಂತರ್‌ನಲ್ಲಿ ಆರಂಭವಾದ ಪ್ರತಿಭಟನೆ ಜುಲೈ 25ರಂದು ಕೇಂದ್ರ ಸರ್ಕಾರ ಬೇಡಿಕೆಗಳನ್ನು ಒಪ್ಪಿಕೊಂಡು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬಳಿಕ ಅಂತ್ಯಗೊಂಡಿತ್ತು. ಈ ಹೋರಾಟಕ್ಕೆ ವಿವಿಧ ಪ್ರತಿಪಕ್ಷಗಳೂ ಬೆಂಬಲ ವ್ಯಕ್ತಪಡಿಸಿದ್ದವು. ಜುಲೈ 20ರಂದು ನಡೆದ “ಸಂಸತ್‌ ಚಲೋ” ಮೆರವಣಿಗೆಯ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದು, ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...