ದೆಹಲಿ ವಿವಿ ಕ್ಯಾಂಪಸ್‌: ಗಾಂಧಿ ಪ್ರತಿಮೆ ಬಳಿ ದೀಪ ಬೆಳಗಿಸದಂತೆ ವಿದ್ಯಾರ್ಥಿಗಳಿಗೆ ತಡೆ

Date:

ಹುತಾತ್ಮರ ದಿನದಂದು (ಜನವರಿ 30) ಗಾಂಧಿ ಪ್ರತಿಮೆ ಮುಂದೆ ಮೊಂಬತ್ತಿ ಹಚ್ಚದಂತೆ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನ ಭದ್ರತಾ ಸಿಬ್ಬಂದಿ ತಡೆದ ಘಟನೆ ಬೆಳಕಿಗೆ ಬಂದಿದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಮರಣೆಯನ್ನು ಶಾಂತಿಯುತವಾಗಿ ಆಚರಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂಬ ಆರೋಪಗಳು ವ್ಯಾಪಕ ಟೀಕೆಗೆ ಕಾರಣವಾಗಿವೆ.

- Advertisement -

ಈ ಘಟನೆ ವಿವಿ ಕ್ಯಾಂಪಸ್‌ನ ಮುಖ್ಯದ್ವಾರದ ಬಳಿ, ಕುಲಪತಿಗಳ ನಿವಾಸದಿಂದ ಕೇವಲ 100 ಮೀಟರ್ ದೂರದಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹುತಾತ್ಮರ ದಿನದಂದು ಗಾಂಧಿ ಪ್ರತಿಮೆಯ ಸುತ್ತ ಕತ್ತಲು ಆವರಿಸಿತ್ತು. ನಾವು ಕೇವಲ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲು ಬಯಸಿದ್ದೆವು. ಆದರೆ ಅಧಿಕಾರಿಗಳು ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ ನಮ್ಮನ್ನು ತಡೆದರು. ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಯಾವುದೇ ಸಂಘರ್ಷಕ್ಕೆ ಇಳಿಯದೆ ಶಾಂತಿಯುತವಾಗಿ ವಾಪಸ್ಸಾದೆವು,” ಎಂದು ವಿದ್ಯಾರ್ಥಿ ಸಮರ್ಥ್ ಬನೀವಾಲ್ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ವಿದ್ಯಾರ್ಥಿ ವಿಕಾಸ್ ರಾಣ್ವಾ, “ಹುತಾತ್ಮರ ದಿನದಂದು ಮುಂಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲು ತೆರಳಿದ್ದೆವು. ಆದರೆ ಭದ್ರತಾ ಸಿಬ್ಬಂದಿ ಅವಕಾಶ ನೀಡಲಿಲ್ಲ. ಕೊನೆಗೆ ಮೊಂಬತ್ತಿ ಉರಿಸದೇ ವಾಪಸ್ಸಾಗಬೇಕಾಯಿತು. ಇದು ತೀರಾ ಖೇದಕರ,” ಎಂದು ಹೇಳಿದರು.

ಘಟನೆಯ ಪರಿಣಾಮಗಳ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿ ಮಂದೇವ್ ಕಸಾನಾ ಆತಂಕ ವ್ಯಕ್ತಪಡಿಸಿದ್ದು, “ಈ ಘಟನೆ ನಮ್ಮ ವಿಶ್ವವಿದ್ಯಾನಿಲಯದ ಸ್ಥಿತಿಗತಿಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...