ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

Date:

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು ಮತ್ತು ಉನ್ನತಾಧಿಕಾರಿಗಳ ಎದುರು ತಮ್ಮ ಶಾಲೆಗಳಲ್ಲಿನ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಕುರಿತು ಧ್ವನಿ ಎತ್ತಿದ್ದಾರೆ. ಇಂತಹದೊಂದು ಶ್ಲಾಘನೀಯ ಬೆಳವಣಿಗೆಯು ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಗ್ರಾಮೀಣ ಭಾಗದ ಶಾಲಾ ನಿರ್ವಹಣಾ ಸಮಿತಿಗಳ (SMC) ಸಹಯೋಗದೊಂದಿಗೆ ನಡೆದ ಗ್ರಾಮ ಸಭೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ತಮ್ಮ ದೈನಂದಿನ ಕಲಿಕೆಗೆ ತೊಡಕಾಗಿರುವ ವಿಷಯಗಳನ್ನು ಮುಕ್ತವಾಗಿ ಪ್ರಸ್ತಾಪಿಸಿದ್ದಾರೆ. ಶಾಲಾ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಅಭಾವ, ಶೌಚಾಲಯಗಳ ಸಮರ್ಪಕ ನಿರ್ವಹಣೆಯ ಕೊರತೆ, ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ದುರಸ್ತಿ ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣದ ಅಗತ್ಯವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಜೊತೆಗೆ, ಶಾಲೆಗಳಿಗೆ ಸುರಕ್ಷಿತ ಕಾಂಪೌಂಡ್ ಗೋಡೆ, ಸುಸಜ್ಜಿತ ಆಟದ ಮೈದಾನ ಹಾಗೂ ಇಂದಿನ ತಂತ್ರಜ್ಞಾನ ಯುಗಕ್ಕೆ ಅಗತ್ಯವಿರುವ ಕಂಪ್ಯೂಟರ್ ಸೌಲಭ್ಯಗಳನ್ನು ಒದಗಿಸಬೇಕೆಂದು ಸಭೆಯಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಈ ಧೈರ್ಯದ ನಡೆಗೆ ಸ್ಥಳೀಯ ಗ್ರಾಮಸ್ಥರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹದಿಹರೆಯದ ವಯಸ್ಸಿನಲ್ಲೇ ತಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಈ ವಾತಾವರಣವು ಇತರ ಜಿಲ್ಲೆಗಳಿಗೂ ಮಾದರಿಯಾಗಿದೆ ಎಂದು ಶಿಕ್ಷಣ ತಜ್ಞರು ಶ್ಲಾಘಿಸಿದ್ದಾರೆ.

ವಿದ್ಯಾರ್ಥಿಗಳು ಮಂಡಿಸಿದ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ಶಾಲಾ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನಗೆ ಮತ್ತೆ ಭಯ ಶುರುವಾಗಿದೆ’: ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೊ ಆಘಾತ

ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವ ಬೆಳವಣಿಗೆಯಿಂದ ತನಗೆ...

ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯ: ಬಸವರಾಜ ಸಾವಳಗಿ

ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದೆ. ಪಠ್ಯದ ಜೊತೆಗೆ ಇಂತಹ ಸಾಂಸ್ಕೃತಿಕ...

ಉತ್ತರ ಪ್ರದೇಶ | 6 ತಿಂಗಳಲ್ಲಿ 17 ಲಕ್ಷ ಮತದಾರರ ಸೇರ್ಪಡೆ; ಸಂಖ್ಯೆ ಹೆಚ್ಚಿಸಲು ಕಣಕ್ಕಿಳಿದಿದೆ ಬಿಜೆಪಿ; ಸೇರುವವರು ಅರ್ಹರೋ-ಅನರ್ಹರೋ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2027ರ ಫ್ರೆಬ್ರವರಿ-ಮಾರ್ಚ್‌ ತಿಂಗಳಲ್ಲಿ ನಡೆಯುವ ಸಂಭವವಿದೆ....

ಬೆಳೆ ವಿಸ್ತೀರ್ಣ ಇಳಿಕೆಯ ನಡುವೆಯೂ ಸಾರ್ವಕಾಲಿಕ ದಾಖಲೆ ಬರೆದ ಭಾರತದ ತೋಟಗಾರಿಕೆ!

ಭಾರತೀಯ ಕೃಷಿ ಕ್ಷೇತ್ರದಲ್ಲಿ ತೋಟಗಾರಿಕೆಯು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 2025-26ನೇ...