ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ ಮೋಹನ್‌ದಾಸ್ ದ್ವೇಷದ ಹೇಳಿಕೆ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕಾರಣವಾದ ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು ಎಂದು ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ ಮೋಹನ್‌ದಾಸ್ ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ.

- Advertisement -

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಮಾತನಾಡಿದ ಮೋಹನ್‌ದಾಸ್, “ಜಂತರ್ ಮಂತರ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೊದಲು ಕರ್ಫ್ಯೂ ವಿಧಿಸಬೇಕಿತ್ತು. ಸೇರಿರುವ ಗುಂಪಿಗೆ ಚದುರಿ ಹೋಗುವಂತೆ ಮೂರು ಬಾರಿ ಎಚ್ಚರಿಕೆ ನೀಡಿ, ಆನಂತರವೂ ಕದಲದಿದ್ದರೆ ನೇರವಾಗಿ ಗುಂಡಿನ ದಾಳಿ ನಡೆಸಬೇಕಿತ್ತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

“ಈ ರೀತಿ ಗುಂಡಿನ ದಾಳಿ ಮಾಡಿದ್ದರೆ ಹಲವರು ಸಾಯುತ್ತಿದ್ದರು. ಇನ್ನು ಕೆಲವರು ಅಂಗವಿಕಲರಾಗುತ್ತಿದ್ದರು; ಕೇವಲ ನಾಲ್ಕು ಗಂಟೆಗಳಲ್ಲಿ ಇಡೀ ಪರಿಸ್ಥಿತಿ ಶಾಂತವಾಗುತ್ತಿತ್ತು. ಆ ಬಳಿಕ ಶವಗಳನ್ನು ಆರಿಸಿಕೊಂಡು ಆಸ್ಪತ್ರೆಗೆ ಸಾಗಿಸುವ ಕೆಲಸವನ್ನಷ್ಟೇ ಮಾಡಬೇಕಿತ್ತು” ಎಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ, ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ ಮೋಹನ್‌ದಾಸ್, “ಇಂತಹ ಪ್ರಕ್ಷುಬ್ಧ ಪ್ರತಿಭಟನೆಗಳನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕುವಲ್ಲಿ ಮೋದಿ ಸಮರ್ಥರಾಗಿದ್ದಾರೆ. ಇದಕ್ಕೆ ಗುಜರಾತ್ ಗಲಭೆಯೇ ಸ್ಪಷ್ಟ ನಿದರ್ಶನ” ಎಂದಿದ್ದಾರೆ.

“ದೆಹಲಿಯಲ್ಲಿ ನಡೆದಿದ್ದು ಕೇವಲ ಒಂದೂವರೆ ಚದರ ಕಿಲೋಮೀಟರ್ ವ್ಯಾಪ್ತಿಯ ಗದ್ದಲ. ಆದರೆ, ಅಂದು ಗುಜರಾತ್‌ನ ಬರೋಬ್ಬರಿ 14 ಜಿಲ್ಲೆಗಳಲ್ಲಿ ಗಲಭೆ ಭುಗಿಲೆದ್ದಿತ್ತು. ಆ ಸಮಯದಲ್ಲಿ ಯಾವುದೇ ಆಡಳಿತಾತ್ಮಕ ಅನುಭವವಿಲ್ಲದಿದ್ದರೂ, ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಗುಜರಾತ್‌ನಂತಹ ಭೀಕರ ಗಲಭೆಗಳು ಮತ್ತು ಬಾಂಬ್ ದಾಳಿಗಳನ್ನು ಹತ್ತಿರದಿಂದ ಕಂಡಿರುವ ಮೋದಿಯವರಿಗೆ, ಇಂತಹ ವಿದ್ಯಾರ್ಥಿ ಪ್ರತಿಭಟನೆಗಳನ್ನು ಮಟ್ಟಹಾಕುವುದು ಕಷ್ಟದ ಕೆಲಸವೇನಲ್ಲ” ಎಂದು ಮೋಹನ್‌ದಾಸ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಯುಪಿ ಚುನಾವಣೆ | ಮತದಾರರ ಮನಗೆಲ್ಲಲು ಯೋಗಿ ಸಂಪುಟದ ಮೆಗಾ ಪ್ಲ್ಯಾನ್; ಹಸು ಖರೀದಿಗೆ ಸಬ್ಸಿಡಿ, ಉಚಿತ ಕೋಳಿ ಮರಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ (2027ರ ಫೆಬ್ರವರಿ–ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆಯಿದೆ)...

ಬ್ರೆಜಿಲ್‌ ಚುನಾವಣೆ | ಸೋಲುಂಡ ಬೆನ್ನಲ್ಲೇ‌ ಪ್ಲೇವಿಯೋ ಬೊಲ್ಸೊನಾರೊ ಅಮೆರಿಕಗೆ ಪಲಾಯನ!

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ಅವರ ಪುತ್ರ, ಹಾಲಿ ಸೆನೆಟರ್...