ವಿದ್ಯಾರ್ಥಿಗಳ ಧ್ವನಿ ಅಡಗಿಸಲಾಗದು: ಪ್ರತಿಭಟನೆ ವೇಳೆ ಪೊಲೀಸರ ಕ್ರಮಕ್ಕೆ ಒಳಗಾದವರ ಜತೆ ರಾಹುಲ್ ಗಾಂಧಿ ಸಂವಾದ

Date:

ದೇಶದಲ್ಲಿ ಸತತವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಧ್ವನಿಯೆತ್ತಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಬೆಂಬಲಕ್ಕೆ ಮತ್ತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿಂತಿದ್ದಾರೆ. ದೇಶದ ಯುವಜನರು ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಯಾವುದೇ ಕಾರಣಕ್ಕೂ ಅಡಗಿಸಲು ಅಥವಾ ಹತೋಟಿಗೆ ತರಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

- Advertisement -

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ಅಕ್ರಮಗಳನ್ನು ವಿರೋಧಿಸಿ ಧರಣಿ ನಡೆಸಿದ ಕಾರಣಕ್ಕೆ ಪೊಲೀಸರ ಕ್ರಮ ಮತ್ತು ಕಿರುಕುಳವನ್ನು ಎದುರಿಸಿದ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಇತ್ತೀಚೆಗೆ ಸಂವಾದ ನಡೆಸಿದ್ದರು. ಈ ಸಂವಾದದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಸರ್ಕಾರದಿಂದ ಎದುರಾದ ಅಡೆತಡೆಗಳು ಮತ್ತು ಪೋಲಿಸ್‌ ಕ್ರಮಗಳ ಹೊರತಾಗಿಯೂ ಶಾಂತಿಯುತವಾಗಿ ಹಾಗೂ ಧೈರ್ಯದಿಂದ ಹೋರಾಡಿದ ಯುವಜನತೆಯನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ‘ನೀವು ವ್ಯವಸ್ಥೆಯ ದಬ್ಬಾಳಿಕೆಯಿಂದ ನಲುಗಿದ್ದೀರಿ’: ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ಇನ್ನು ವಿದ್ಯಾರ್ಥಿಗಳೊಂದಿಗೆ ನಿರಂತರವಾಗಿ ಸಂವಾದ ನಡೆಸಲು ನಿರ್ಧರಿಸಿರುವ ರಾಹುಲ್ ಗಾಂಧಿ, ದೇಶಾದ್ಯಂತ ‘ಛಾತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಧ್ವನಿ) ಕಾರ್ಯಕ್ರಮಗಳ ಮೂಲಕ ಯುವಕರ ಅಳಲನ್ನು ಆಲಿಸುವ ಕೆಲಸ ಮುಂದುವರಿಯಲಿದೆ ಎಂದಿದ್ದಾರೆ.

ಹಾಗೆಯೇ ಸರ್ಕಾರಿ ಪರೀಕ್ಷೆಗಳ ಅಕ್ರಮ ಖಂಡಿಸಿ ಬೀದಿಗಿಳಿದು ನ್ಯಾಯ ಕೇಳಿದ ಯುವ ಸಮುದಾಯ, ವಿಶೇಷವಾಗಿ ವಿದ್ಯಾರ್ಥಿನಿಯರು ತೋರಿದ ಧೈರ್ಯ ಮತ್ತು ಸ್ಥಿರತೆಯನ್ನು ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ. ಲಕ್ಷಾಂತರ ಯುವಕರು ವರ್ಷಗಟ್ಟಲೆ ಶ್ರಮಪಟ್ಟು ತರಬೇತಿ ಪಡೆಯುತ್ತಾರೆ, ಶುಲ್ಕ ಪಾವತಿಸುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನೇಮಕಾತಿ ವಿಳಂಬದಂತಹ ಅಕ್ರಮಗಳು ಅವರ ಭವಿಷ್ಯವನ್ನು ಕಸಿದುಕೊಳ್ಳುತ್ತಿವೆ ಎಂದು ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ಸಮುದಾಯ ಅನುಭವಿಸುತ್ತಿರುವ ಅನ್ಯಾಯದ ವಿರುದ್ಧ ಕಾಂಗ್ರೆಸ್ ಪಕ್ಷವು ಸಂಸತ್ತಿನ ಒಳಗೂ ಮತ್ತು ಬೀದಿಗಳಲ್ಲೂ ತನ್ನ ಹೋರಾಟವನ್ನು ಮುಂದುವರಿಸಲಿದ್ದು, ಸಂತ್ರಸ್ತ ವಿದ್ಯಾರ್ಥಿಗಳಿಗೆ ಸಂಪೂರ್ಣ ನ್ಯಾಯ ಸಿಗುವವರೆಗೆ ವಿರಮಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ...

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಕೆಪಿಎಸ್‌ಸಿ ಅಕ್ರಮ: ಗರಿಷ್ಠ ಅಂಕ ಪಡೆದ 14 ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಸಿಕ್ಕಿತ್ತು ಪ್ರಶ್ನೆಗಳು!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ...

ನಂದಿಗ್ರಾಮ ಉಪಚುನಾವಣೆ | ಕಣ್ಣಿಗೆ ಬಟ್ಟೆ ಕಟ್ಟಿ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ: ಜೈಲಿನಿಂದ ಹೊರಬಂದ ಕಾಂಗ್ರೆಸ್ ಅಭ್ಯರ್ಥಿ ಆರೋಪ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮ ಉಪಚುನಾವಣೆಯ ಅಖಾಡದ ಕಾಂಗ್ರೆಸ್...