ಎಸ್‌ಸಿ-ಎಸ್‌ಟಿ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ.

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಈ ವರ್ಷ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಸಿ-ಎಸ್‌ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿಯಿದೆ ಎಂದು ಪೀಠ ಹೇಳಿದೆ. ನ್ಯಾಯಮೂರ್ತಿ ಬೇಲಾ ತ್ರಿವೇದಿ ಅನುಮತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಇದನ್ನು ಒದಿದ್ದೀರಾ? ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.

ಈ ಮೂಲಕ ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳಲ್ಲಿ ಉಪ ವರ್ಗೀಕರಣಕ್ಕೆ ರಾಜ್ಯಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಈ ಸೆಕ್ಷನ್ ವಾಲ್ಮೀಕಿಗಳು ಮತ್ತು ಮಝಬಿ ಸಿಖ್ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ ಕೋಟಾದಲ್ಲಿ ಶೇಕಡ 50ರಷ್ಟು ಮೀಸಲಾತಿಗೆ ಆದ್ಯತೆಯನ್ನು ನೀಡುತ್ತಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...