ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸಂಬಂಧಿಸಿದಂತಹ ತೀರ್ಪನ್ನು ಇಂದು (ಆಗಸ್ಟ್ 1) ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನೀಡಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಇದನ್ನು ಓದಿದ್ದೀರಾ? ಒಳಮೀಸಲಾತಿ ವಿಚಾರ | ಕೇಂದ್ರ ಸರ್ಕಾರಕ್ಕೆ ಪ್ರಾಮಾಣಿಕ ಕಾಳಜಿ ಇದ್ದರೆ ತಿದ್ದುಪಡಿ ಮಾಡಲಿ: ಸಿದ್ದರಾಮಯ್ಯ
ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಈ ಸೆಕ್ಷನ್ ವಾಲ್ಮೀಕಿಗಳು ಮತ್ತು ಮಝಬಿ ಸಿಖ್ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ ಕೋಟಾದಲ್ಲಿ ಶೇಕಡ 50ರಷ್ಟು ಮೀಸಲಾತಿಗೆ ಆದ್ಯತೆಯನ್ನು ನೀಡುತ್ತಿತ್ತು.
#BREAKING #SupremeCourt to deliver judgment tomorrow on whether sub-classification is permissible within the Scheduled Castes and Scheduled Tribes pic.twitter.com/eG1ZLFyIgl
— Live Law (@LiveLawIndia) July 31, 2024