ಸಬ್ ಇನ್‌ಸ್ಪೆಕ್ಟರ್ ಒಬ್ಬ ಮಹಿಳಾ ಹೆಡ್ ಕಾನ್ಸ್‌ಟೇಬಲ್ ತಲೆಗೆ ಗನ್ ಇಟ್ಟು ಬೆದರಿಸಿ, ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ ಭೂಪಲ್‌ಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಎಸ್‌ಐನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಎಸ್‌ಐ ಕಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಹೆಡ್ ಕಾನ್ಸ್‌ಟೇಬಲ್ ಕೂಡ ಅದೇ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಜೂನ್ 15ರಂದು ಯಾವುದೋ ಯೋಜನೆ ಸಲುವಾಗಿ ಚರ್ಚಿಸುವುದಾಗಿ ಹೇಳಿ ಅತಿಥಿ ಗೃಹದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ದೂರಿನ ಪ್ರಕಾರ, ಎಸ್‌ಐ ರಿವಾಲ್ವಾರ್ ಮೂಲಕ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಈ ವಿಷಯದ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡ ಹೆದರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ
ಮಹಿಳೆಯ ತಲೆಗೆ ಗನ್ ಇಟ್ಟು ಬೆದರಿಸುವ ಮೂಲಕ ಎಸ್‌ಐ ಅತ್ಯಾಚಾರವೆಸಗಿರುವ ಬಗ್ಗೆ ದೂರು ದಾಖಲಾಗಿದೆ. ನಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ದೂರಿನ ಪ್ರಕಾರ ಎಸ್‌ಐ ಹಲವು ಬಾರಿ ಆಕೆಯನ್ನು ಹಿಂಬಾಲಿಸಿದ್ದಾನೆ. ದೂರಿನ ಆಧಾರದ ಮೇಲೆ ವಿವಿಧ ಐಪಿಸಿ ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
