ಪತ್ನಿ ತೊರೆದ ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ? ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

Date:

ಅಯೋಧ್ಯೆ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಗೊಳಿಸುವುದಕ್ಕೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ಎತ್ತಿದ್ದು, “ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ?” ಎಂದು ಪ್ರಶ್ನಿಸಿದ್ದಾರೆ.

- Advertisement -

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಲವು ನಾಯಕರು ಪರ-ವಿರೋಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವಂತೆಯೇ ಸುಬ್ರಮಣಿಯನ್ ಸ್ವಾಮಿ ಈ ಪ್ರಶ್ನೆ ಎತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, “ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿ, ಕಷ್ಟಗಳನ್ನು ಎದುರಿಸಿದ ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ಪತ್ನಿಯನ್ನೇ ತೊರೆದ ಪ್ರಧಾನಿ ನರೇಂದ್ರ ಮೋದಿ ಅವರು ಅದರ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ?” ಎಂದು ಕೇಳಿದ್ದಾರೆ.

“ರಾಮ ಸುಮಾರು ಒಂದೂವರೆ ದಶಕದಷ್ಟು ಕಾಲ ವನವಾಸವನ್ನು ಅನುಭವಿಸಿದ. ಅಪಹರಣಗೊಂಡ ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ. ಆದರೆ ಮೋದಿ ಅವರು ತಮ್ಮ ಪತ್ನಿಯನ್ನು ತ್ಯಜಿಸಿದವರು ಎಂಬುದು ಎಲ್ಲರಿಗೂ ತಿಳಿದ ವಿಷಯ. ಹಾಗಿದ್ದರೆ, ಅವರು ಹೇಗೆ ಈ ಪೂಜೆ ನೆರವೇರಿಸುತ್ತಾರೆ? ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯವನ್ನು ಮೋದಿ ಅವರು ನೆರವೇರಿಸಲು ರಾಮನ ಭಕ್ತರು ಹೇಗೆ ಅವಕಾಶ ನೀಡುತ್ತಾರೆ” ಎಂದೂ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದರೂ, ಅವರ ವೈವಾಹಿಕ ಜೀವನದ ಬಗ್ಗೆ ಮಾಹಿತಿ ಬಯಲಾಗಿರಲಿಲ್ಲ. 2014ರಲ್ಲಿ ಮೋದಿ ತಮ್ಮ ಚುನಾವಣಾ ಅಫಿಡವಿಟ್ ಸಲ್ಲಿಸುವಾಗ ವೈವಾಹಿಕ ಜೀವನದ ಬಗ್ಗೆ ಮಾಹಿತಿ ಒದಗಿಸಿದ್ದರು. ಅವರು ನಿವೃತ್ತ ಶಿಕ್ಷಕಿ ಜಶೋದಾಬೆನ್ ಅವರನ್ನು ವಿವಾಹವಾಗಿದ್ದರು. ಬಳಿಕ ಪತ್ನಿಯಿಂದ ದೂರ ಆಗಿದ್ದರು. ಅವರ ಸಮುದಾಯದ ಸಂಪ್ರದಾಯದಂತೆ ಮೋದಿ ಮತ್ತು ಜಶೋದಾ ಬೆನ್ ವಿವಾಹ ಬಹಳ ವರ್ಷಗಳ ಮುಂಚೆಯೇ ನಡೆದಿತ್ತು ಎಂಬ ವಿಚಾರ ಬಯಲಾಗಿತ್ತು.

ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಸುಮಾರು 4,000 ಸಂತರು ಮತ್ತು ನೂರಾರು ಅಧಿಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ದೇಶದ ಬಹುತೇಕ ಪಕ್ಷಗಳ ಮುಖಂಡರಿಗೆ ರಾಮ ಮಂದಿರ ಟ್ರಸ್ಟ್ ಆಹ್ವಾನ ಕೊಟ್ಟಿದೆ. ಸಿಪಿಐ (ಎಂ) ಪಕ್ಷ ಆಹ್ವಾನವನ್ನು ತಿರಸ್ಕರಿಸಿದ್ದು, ಬಿಜೆಪಿ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯಗೊಳಿಸುತ್ತಿದೆ ಎಂದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಉದ್ಯೋಗ ಪರೀಕ್ಷೆಗೆ ಇನ್ನು ಶುಲ್ಕವಿಲ್ಲ: ಬಂಗಾಳ ಸಿಎಂ ಸುವೇಂದು ಅಧಿಕಾರಿ ಘೋಷಣೆ!

ಪಶ್ಚಿಮ ಬಂಗಾಳದ ಯುವಜನತೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ...

ಆಯೋಗವು ಧರ್ಮ/ಜಾತಿ ದತ್ತಾಂಶ ನಿರ್ವಹಿಸುವುದಿಲ್ಲ; ಯೋಗಿಯ ‘ಹಿಂದು ಮತಗಳ ಡಿಲೀಟ್’ ಆರೋಪಕ್ಕೆ ಚುನಾವಣಾಧಿಕಾರಿ ಪ್ರತಿಕ್ರಿಯೆ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತಪಟ್ಟಿಯಿಂದ 1.27 ಕೋಟಿ ಹಿಂದು...

‘ನನಗೆ ಮತ್ತೆ ಭಯ ಶುರುವಾಗಿದೆ’: ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೊ ಆಘಾತ

ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವ ಬೆಳವಣಿಗೆಯಿಂದ ತನಗೆ...

ಉತ್ತರ ಪ್ರದೇಶ | 6 ತಿಂಗಳಲ್ಲಿ 17 ಲಕ್ಷ ಮತದಾರರ ಸೇರ್ಪಡೆ; ಸಂಖ್ಯೆ ಹೆಚ್ಚಿಸಲು ಕಣಕ್ಕಿಳಿದಿದೆ ಬಿಜೆಪಿ; ಸೇರುವವರು ಅರ್ಹರೋ-ಅನರ್ಹರೋ?

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2027ರ ಫ್ರೆಬ್ರವರಿ-ಮಾರ್ಚ್‌ ತಿಂಗಳಲ್ಲಿ ನಡೆಯುವ ಸಂಭವವಿದೆ....