ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಪ್ರಕರಣ: 34 ಲಕ್ಷ ಮೇಲ್ಮನವಿಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

Date:

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಎಸ್‌ಐಆರ್ (SIR) ಮೇಲ್ಮನವಿ ನ್ಯಾಯಮಂಡಳಿಗಳಿಗೆ ಸಲ್ಲಿಕೆಯಾಗಿರುವ ಸುಮಾರು 34 ಲಕ್ಷ ಮೇಲ್ಮನವಿಗಳು ಇತ್ಯರ್ಥಕ್ಕೆ ಬಾಕಿ ಇವೆ. ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ವಿಚಾರಣಾ ಪ್ರಕ್ರಿಯೆಯನ್ನು ತಕ್ಷಣವೇ ಚುರುಕುಗೊಳಿಸುವಂತೆ ಸೂಚಿಸಿದೆ.

- Advertisement -

“ಮುಂದಿನ ವಿಧಾನಸಭಾ ಚುನಾವಣೆ ಬರುವಷ್ಟರಲ್ಲಿಯೂ ಈ ಮೇಲ್ಮನವಿಗಳ ವಿಚಾರಣೆ ಮುಗಿಯದಷ್ಟು ನ್ಯಾಯಮಂಡಳಿಯ ಪ್ರಕ್ರಿಯೆ ನಿಧಾನವಾಗಿರಬಾರದು. ಇದು ಅನಂತಕಾಲದವರೆಗೆ ಸಾಗುವಂತಿಲ್ಲ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅರ್ಜಿದಾರ ಹಾಗೂ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಪರವಾಗಿ ಹಿರಿಯ ವಕೀಲ ರೌಫ್ ರಹೀಮ್ ಅವರು ವಾದ ಮಂಡಿಸಿದರು. ವಿಶೇಷ ಪರಿಷ್ಕರಣೆ ವೇಳೆ ಮುರ್ಷಿದಾಬಾದ್‌ನಲ್ಲಿ ಲಕ್ಷಾಂತರ ಬಡವರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲಾಗಿದೆ. ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಆರ್ಥಿಕವಾಗಿ ಅಸಹಾಯಕರಾಗಿದ್ದಾರೆ. ಅಲ್ಲದೆ, ವಿಚಾರಣೆಗಾಗಿ ರಚಿಸಲಾಗಿರುವ ನ್ಯಾಯಮಂಡಳಿಗಳ ಕಾರ್ಯವೈಖರಿ ತೀರಾ ನಿಧಾನಗತಿಯಲ್ಲಿದೆ. ಹೀಗಾಗಿ ಪ್ರಕರಣಗಳ ತ್ವರಿತ ವಿಲೇವಾರಿಗೆ ವೇಗ ನೀಡಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಕೋರಿದರು.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರ ತ್ರಿಸದಸ್ಯ ಪೀಠವು ಈ ಅರ್ಜಿ ವಿಚಾರಣೆ ನಡೆಸಿತು. “ನಮ್ಮ ಆದೇಶದ ಮೇರೆಗೆ ರಚನೆಯಾದ ನ್ಯಾಯಮಂಡಳಿಗಳ ಕಾರ್ಯಕ್ಷಮತೆಯನ್ನು ಈಗ ಪರಿಶೀಲಿಸಬೇಕಿದೆ” ಎಂದು ಪೀಠ ಹೇಳಿತು. ಆಗಸ್ಟ್ 25ರೊಳಗೆ ಬಾಕಿ ಇರುವ ಹಾಗೂ ಇತ್ಯರ್ಥಗೊಂಡ ಪ್ರಕರಣಗಳ ಸಂಪೂರ್ಣ ವಿವರ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಯಿತು. ನಿಖರ ಅಂಕಿ-ಅಂಶ ಸಿಕ್ಕ ಬಳಿಕ ಪ್ರಕ್ರಿಯೆ ವೇಗಗೊಳಿಸಲು ಮಾಹಿತಿ ತಂತ್ರಜ್ಞಾನದ ನೆರವು ಒದಗಿಸುವುದಾಗಿ ನ್ಯಾಯಮೂರ್ತಿ ಬಾಗ್ಚಿ ಭರವಸೆ ನೀಡಿದರು.

ಮತದಾರರ ಪಟ್ಟಿಯಿಂದ ಕೈಬಿಟ್ಟ ಕಾರಣ ಬಡವರಿಗೆ ಪಶ್ಚಿಮ ಬಂಗಾಳ ಸರ್ಕಾರದ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಉದ್ದೇಶಪೂರ್ವಕವಾಗಿ ನಿರಾಕರಿಸಲಾಗುತ್ತಿದೆ ಎಂಬ ಮಹತ್ವದ ವಿಚಾರವನ್ನು ವಕೀಲರು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, “ಇದು ಸಂಪೂರ್ಣವಾಗಿ ಪ್ರತ್ಯೇಕ ವಿಚಾರ. ಈ ಕುರಿತು ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಅಲ್ಲಿಯೇ ಸೂಕ್ತ ಪರಿಹಾರ ಕಂಡುಕೊಳ್ಳಬೇಕು” ಎಂದು ಸ್ಪಷ್ಟಪಡಿಸಿತು. ಅಲ್ಲದೆ, ಮೇಲ್ಮನವಿಗಳ ಸಂಪೂರ್ಣ ವಿಲೇವಾರಿಗೆ ಯಾವುದೇ ನಿರ್ದಿಷ್ಟ ಗಡುವು ವಿಧಿಸಲು ನ್ಯಾಯಾಲಯವು ಇದೇ ವೇಳೆ ಸ್ಪಷ್ಟವಾಗಿ ನಿರಾಕರಿಸಿತು.

ಕಳೆದ 100 ದಿನಗಳಲ್ಲಿ ಕೇವಲ ಶೇ.1ರಷ್ಟು ಮೇಲ್ಮನವಿಗಳು ಮಾತ್ರ ವಿಲೇವಾರಿಯಾಗಿವೆ. ಮತದಾರರ ಪಟ್ಟಿಯಿಂದ ಕೈಬಿಡಲಾದ ಲಕ್ಷಾಂತರ ಜನರು ನ್ಯಾಯಮಂಡಳಿಗಳ ಮೆಟ್ಟಿಲೇರಿ ತಮ್ಮ ಪ್ರಕರಣಗಳ ಭವಿಷ್ಯಕ್ಕಾಗಿ ಅತ್ಯಂತ ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಇಷ್ಟು ದೊಡ್ಡ ಸಂಖ್ಯೆಯ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ, ಸೂಕ್ತ ಅವಕಾಶ ನೀಡಿ ತೀರ್ಪು ನೀಡಲು ನ್ಯಾಯಮಂಡಳಿಗಳಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿದೆ. ಪ್ರಕ್ರಿಯೆಯ ಈ ಅಪೂರ್ಣತೆಯೇ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಅರ್ಜಿದಾರರಾದ ಚೌಧರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...