ಹೆಚ್ಚುತ್ತಿವೆ ‘ನೀಟ್’ ಆಕಾಂಕ್ಷಿಗಳ ಆತ್ಮಹತ್ಯೆ: ಕೋಟಾದಲ್ಲಿ ಮತ್ತೋರ್ವ ಯುವಕ ಸಾವು

Date:

ತರಬೇತಿ ಕೇಂದ್ರಗಳ ಹಬ್‌ ಎಂದೇ ಗುರುತಿಸಿಕೊಂಡಿರುವ ರಾಜಸ್ಥಾನದ ಕೋಟಾದಲ್ಲಿ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಸಿದ್ದತೆ ನಡೆಸಲು ಕೋಟಾಗೆ ಬರುವ ಹಲವಾರು ಆಕಾಂಕ್ಷಿಗಳು ಫೇಲ್‌ ಆಗುವ ಭಯ, ಮಾನಸಿಕ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ, ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಇದು ಈ ತಿಂಗಳಲ್ಲಿ ನಡೆದ 3ನೇ ಪ್ರಕರಣವಾಗಿದೆ.

- Advertisement -

18 ವರ್ಷದ ವಿದ್ಯಾರ್ಥಿಯೊಬ್ಬರು ತಾವು ವಾಸಿಸುತ್ತಿದ್ದ ಪಿಜಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಡಿಶಾ ಮೂಲದ ವಿದ್ಯಾರ್ಥಿ ನೀಟ್ ತಯಾರಿಗಾಗಿ ಕೋಟಾಗೆ ಬಂದಿದ್ದರು. ವಿಜ್ಞಾನ ನಗರದಲ್ಲಿ ವಾಸಿಸುತ್ತಿದ್ದರು. ಆದರೆ, ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಸ್ಥಳ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಕಳೆದ ವಾರ ಕೋಟಾದಲ್ಲಿಯೇ ಜೆಇಇಗಾಗಿ ತಯಾರಿ ನಡೆಸುತ್ತಿದ್ದ ಇಬ್ಬರು ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 8 ರಂದು, ಜೆಇಇ ಆಕಾಂಕ್ಷಿ ಮಧ್ಯಪ್ರದೇಶದ ಮೂಲಕ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 7 ರಂದು, ಹರಿಯಾಣದ ಮತ್ತೊಬ್ಬ ಜೆಇಇ ಆಕಾಂಕ್ಷಿ ನೀರಜ್ (19) ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಲ್ಲದೆ, 2024ರಲ್ಲಿಯೂ ಹಲವಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2024ರಲ್ಲಿ ಕೋಟಾದಲ್ಲಿಯೇ 19 ಮಂದಿ ಸಾವನ್ನಪ್ಪಿದ್ದರೆ, 2023ರಲ್ಲಿ 29 ಮಂದಿ ಸಾವನ್ನಪ್ಪಿದ್ದರು. ಈ ವರ್ಷದ ಆರಂಭದಲ್ಲಿಯೇ 3 ಮಂದಿ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸುವ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ...

ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ- ಪಾಕ್ ಯುದ್ಧನೌಕೆಗಳು ಢಿಕ್ಕಿ ಹೊಡೆದ ಕತೆಯೇನು?

ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ ಮತ್ತು ಪಾಕಿಸ್ತಾನದ...