2018ರಲ್ಲಿ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್‌ಪುರ ಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರಿನಲ್ಲಿ 2018 ಮೇ 8ರಂದು ಚುನಾವಣೆಗಳು ನಡೆಯುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಆಗಸ್ಟ್ 4, 2018ರಲ್ಲಿ ವಿಜಯ್ ಮಿಶ್ರಾ ಎಂಬುವವರು ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಾಮಾಣಿಕ ಹಾಗೂ ಸ್ವಚ್ಛ ರಾಜಕಾರಣ ಮಾಡುವುದಾಗಿ ಬಿಜೆಪಿ ಹೇಳುತ್ತದೆ. ಆದರೆ ಪಕ್ಷದ ಅಧ್ಯಕ್ಷರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದರು. ಆ ಸಂದರ್ಭದಲ್ಲಿ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ
ರಾಹುಲ್ ಗಾಂಧಿ ಹೇಳಿದ ನಾಲ್ಕು ವರ್ಷದ ನಂತರ ಮುಂಬೈನ ವಿಶೇಷ ಸಿಬಿಐ ಕೋರ್ಟ್ ಅಮಿತ್ ಸಾ ಅವರನ್ನು ಗುಜರಾತ್‌ನ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದಿದ್ದ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು.
ಭಾರತ್ ಜೋಡೋ ನ್ಯಾಯ ಯಾತ್ರೆ ಪ್ರಯುಕ್ತ ಜನವರಿ 18 ರಂದು ನಡೆದಿದ್ದ ಅಂತಿಮ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಿರಲಿಲ್ಲ. ಹಲವು ಸಮನ್ಸ್‌ಗಳಿಗೂ ಗೈರು ಹಾಜರಾಗಿದ್ದರು.
