2018ರ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

Date:

2018ರಲ್ಲಿ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್‌ಪುರ ಕೋರ್ಟ್ ಜಾಮೀನು ನೀಡಿದೆ.

- Advertisement -

ಬೆಂಗಳೂರಿನಲ್ಲಿ 2018 ಮೇ 8ರಂದು ಚುನಾವಣೆಗಳು ನಡೆಯುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಆಗಸ್ಟ್‌ 4, 2018ರಲ್ಲಿ ವಿಜಯ್‌ ಮಿಶ್ರಾ ಎಂಬುವವರು ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಾಮಾಣಿಕ ಹಾಗೂ ಸ್ವಚ್ಛ ರಾಜಕಾರಣ ಮಾಡುವುದಾಗಿ ಬಿಜೆಪಿ ಹೇಳುತ್ತದೆ. ಆದರೆ ಪಕ್ಷದ ಅಧ್ಯಕ್ಷರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದರು. ಆ ಸಂದರ್ಭದಲ್ಲಿ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ರಾಹುಲ್ ಗಾಂಧಿ ಹೇಳಿದ ನಾಲ್ಕು ವರ್ಷದ ನಂತರ ಮುಂಬೈನ ವಿಶೇಷ ಸಿಬಿಐ ಕೋರ್ಟ್ ಅಮಿತ್ ಸಾ ಅವರನ್ನು ಗುಜರಾತ್‌ನ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದಿದ್ದ 2005ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು.

ಭಾರತ್ ಜೋಡೋ ನ್ಯಾಯ ಯಾತ್ರೆ ಪ್ರಯುಕ್ತ ಜನವರಿ 18 ರಂದು ನಡೆದಿದ್ದ ಅಂತಿಮ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಿರಲಿಲ್ಲ. ಹಲವು ಸಮನ್ಸ್‌ಗಳಿಗೂ ಗೈರು ಹಾಜರಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...