ಬ್ಯಾಂಕ್ ವಂಚನೆ ಪ್ರಕರಣ | 8 ಗಂಟೆಗಳ ಕಾಲ ಅನಿಲ್‌ ಅಂಬಾನಿ ವಿಚಾರಣೆ; ಮತ್ತೆ ಸಮನ್ಸ್ ಜಾರಿ

Date:

ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ 2,929.05 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ಎಂಟು ಗಂಟೆಗಳ ಕಾಲ ಅನಿಲ್‌ ಅಂಬಾನಿಯ ವಿಚಾರಣೆ ನಡೆಸಿದ್ದಾರೆ. ಹಾಗೆಯೇ ಮತ್ತೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ.

- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ದೂರಿನ ನಂತರ 2025ರ ಆಗಸ್ಟ್ 21ರಂದು ಪ್ರಕರಣವನ್ನು ದಾಖಲಿಸಲಾಗಿದೆ. 2013 ಮತ್ತು 2017ರ ನಡುವೆ ದೊಡ್ಡ ಪ್ರಮಾಣದ ಹಣ ವರ್ಗಾವಣೆ ಮತ್ತು ಸಾಲದ ನಿಧಿ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಒಟ್ಟು 17 ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ 19,694.33 ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಈ ಪೈಕಿ ಎಸ್‌ಬಿಐಗೆ 2,929.05 ಕೋಟಿ ರೂಪಾಯಿಗಳ ನಷ್ಟವನ್ನುಂಟಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರ ಸೇರಿದಂತೆ ಹಲವು ಬ್ಯಾಂಕುಗಳು ಇದೇ ರೀತಿ ದೂರು ದಾಖಲಿಸಿದೆ.

ಈ ವರ್ಷದ ಆರಂಭದಲ್ಲಿ ಬ್ಯಾಂಕ್ ಆಫ್ ಬರೋಡಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ದೂರುಗಳ ಆಧಾರದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ಮತ್ತು ಅದರ ನಿರ್ದೇಶಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಹಾಗೆಯೆ 2025ರ ಆಗಸ್ಟ್‌ನಲ್ಲಿ ಮುಂಬೈನಲ್ಲಿರುವ ಕಂಪನಿಯ ಕಚೇರಿಗಳು ಮತ್ತು ಅನಿಲ್ ಅಂಬಾನಿ ನಿವಾಸದಲ್ಲಿ ಶೋಧ ನಡೆಸಲಾಗಿದೆ. ತನಿಖಾಧಿಕಾರಿಗಳು ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನಿಲ್ ಅಂಬಾನಿಯ ವಿಚಾರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...