ಕೆ.ಎಲ್ ರಾಹುಲ್‌ಗೆ ಸುನಿಲ್ ಗವಾಸ್ಕರ್ ತರಾಟೆ

Date:

ಗುರುವಾರ ಸಂಜೆ ನಡೆದ ಇಂಗ್ಲೆಂಡ್‌-ಭಾರತ ಕ್ರಿಕೆಟ್‌ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕು ವಿಕೆಟ್‌ಗಳ ನಷ್ಟದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆದಾಗ್ಯೂ, ಕೆ.ಎಲ್ ರಾಹುಲ್ ಅವರ ಆಟದ ಬಗ್ಗೆ ಟೀಮ್ ಇಂಡಿಯಾದ ಮಾಜಿ ಸ್ಟಾರ್‌ ಆಟಗಾರ ಸುನಿಲ್ ಗವಾಸ್ಕರ್ ಕಿಡಿಕಾರಿದ್ದಾರೆ. ಟೀಮ್‌ ಗೇಮ್‌ನಲ್ಲಿ ತಂಡದ ಆಟದ ಮೇಲೆ ಗಮನ ಇರಬೇಕೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್‌ ತಂಡ 248 ರನ್‌ಗಳನ್ನು ದಾಖಲಿಸಿತ್ತು. ಟೀಮ್ ಇಂಡಿಯಾ ಗೆಲ್ಲಲು 249 ರನ್‌ಗಳ ಗುರಿ ನೀಡಿತ್ತು. ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. 251 ರನ್‌ ಗಳಿಸಿ, ಗೆಲುವು ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಭಾರತ ತಂಡ ಗೆಲುವು ಸಾಧಿಸಲು ಕೇವಲ 28 ರನ್‌ಗಳ ಅಗತ್ಯವಿದ್ಧಾಗ ಕೆ.ಎಲ್‌ ರಾಹುಲ್ ಕ್ರೀಸ್‌ಗೆ ಇಳಿದರು. ಆ ವೇಳೆಗೆ, ಶುಭಮನ್ ಗಿಲ್ ಶತಕದ ಸನಿಹದಲ್ಲಿದ್ದರು. ರಾಹುಲ್ ಅವರ ಆಟದ ಶೈಲಿಯು ಗಿಲ್ ಶತಕ ಬಾರಿಸಲು ಅವಕಾಶ ಮಾಡಿಕೊಡಬೇಕೆಂಬ ಧೋರಣೆಯನ್ನು ಹೊಂದಿದೆ ಎಂಬ ರೀತಿಯಲ್ಲಿತ್ತು. 9 ಬಾಲ್‌ಗಳನ್ನು ಎದುರಿಸಿದ ರಾಹುಲ್, ಕೇವಲ 2 ರನ್‌ ಗಳಿಸಿ ಔಟಾದರು.

ಆದಾಗ್ಯೂ, 87 ರನ್ ಗಳಿಸಿದ್ದ ಗಿಲ್‌ ಕೂಡ ರಾಹುಲ್ ಔಟ್ ಆದ ಬೆನ್ನಲ್ಲೇ ಔಟ್‌ ಆದರು. ಪಂದ್ಯದಲ್ಲಿ ಕೆ.ಎಲ್ ರಾಹುಲ್ ಅವರ ಆಟದ ಶೈಲಿಯ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಲ್‌ ಅವರಿಗೆ ಸ್ಟ್ರೈಕ್ ನೀಡುವ ಆತುರದಲ್ಲಿ ಕೆ.ಎಲ್ ರಾಹುಲ್‌ ಔಟಾಗಿದ್ದಾರೆ ಎಂದು ಹಲವರು ಭಾವಿಸಿದ್ದಾರೆ.

ಈ ವೇಳೆ, ಕಾಮೆಂಟರಿಯಲ್ಲಿದ್ದ ಸುನಿಲ್ ಗವಾಸ್ಕರ್, “ಕೆಎಲ್ ರಾಹುಲ್ ತಮ್ಮ ಆಟವನ್ನು ಪಂದ್ಯಕ್ಕಾಗಿ ಆಡಬೇಕು. ಸಹಜವಾಗಿ ಬ್ಯಾಟಿಂಗ್ ಮಾಡಬೇಕು. ತಮ್ಮ ಜೊತೆಗಾರ ಶತಕ ಗಳಿಸುವ ಅವಕಾಶವಿದೆ ಎಂಬ ಕಾರಣಕ್ಕಾಗಿ ಅವರು ಆತುರದಲ್ಲಿ ಆಟವಾಡಿದರು. ಆಟಗಾರರಿಗೆ ತಂಡ ಆದ್ಯತೆ ಆಗಿರಬೇಕು. ಶುಭ್ಮನ್ ಗಿಲ್ ಅವರಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪಂದ್ಯವು ತಂಡದ ಆಟ. ರಾಹುಲ್ ತಮ್ಮ ಜೊತೆಗಾರ ಶತಕ ಗಳಿಸಲು ಸಹಾಯ ಮಾಡುವ ಉದ್ದೇಶದಿಂದ ಚೆಂಡನ್ನು ಅರ್ಧ ಮನಸ್ಸಿನಿಂದ ಎದುರಿಸಿದರು. ಔಟ್‌ ಆದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...