ವಾಂಗ್‌ಚುಕ್ ಆರೋಗ್ಯ ಚೆನ್ನಾಗಿಲ್ಲ, ಬಂಧನದ ಬಗ್ಗೆ ಮರುಪರಿಶೀಲಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

Date:

ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಚೆನ್ನಾಗಿಲ್ಲ. ಆದ ಕಾರಣದಿಂದಾಗಿ ಅವರ ಬಂಧನದ ಬಗ್ಗೆ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -

ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ, ಶಿಕ್ಷಣತಜ್ಞ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್‌ನಲ್ಲಿ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ನಾಲ್ವರ ಸಾವಿಗೆ ಕಾರಣವಾದ ಲಡಾಖ್ ಹಿಂಸಾಚಾರಕ್ಕೆ ವಾಂಗ್‌ಚುಕ್ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಹೇಳಿ ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಜೈಲು ಸೇರಿ 100 ದಿನ: ಲಡಾಖ್ ಜನರಿಗಾಗಿ ಧ್ವನಿಯೆತ್ತಿ ಮೋದಿ ಶತ್ರುವಾದರೆ?

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ನಿರಂತರವಾಗಿ ಹೋರಾಡುತ್ತಾ ಬಂದವರು ಸೋನಮ್. ಸದ್ಯ 100ಕ್ಕೂ ಅಧಿಕ ದಿನಗಳಿಂದ ಜೋಧಪುರ ಜೈಲಿನಲ್ಲಿದ್ದು, ಅವರ ಆರೋಗ್ಯ ನಿರಂತರವಾಗಿ ಹದಗೆಡುತ್ತಿದೆ.

ವಾಂಗ್‌ಚುಕ್ ಅವರ ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ ಬಿ ವರಾಲೆ ಅವರ ಪೀಠವು, “ನ್ಯಾಯಾಲಯದ ಅಧಿಕಾರಿಯಾಗಿ ಈ ಬಗ್ಗೆ ಒಮ್ಮೆ ಯೋಚಿಸಿ. ಬಂಧನ ಆದೇಶವು ಸುಮಾರು ಐದು ತಿಂಗಳು ಹಳೆಯದು. ಬಂಧಿತನ ಆರೋಗ್ಯ ಸ್ಥಿತಿಯನ್ನು ನೋಡಿದರೆ, ಖಂಡಿತವಾಗಿಯೂ ಉತ್ತಮವಾಗಿಲ್ಲ. ಆದ್ದರಿಂದಾಗಿ ಬಂಧನ ಆದೇಶವನ್ನು ಮತ್ತೆ ಪರಿಶೀಲಿಸಬೇಕಾಗುತ್ತದೆ” ಎಂದು ಹೇಳಿದೆ.

ಇನ್ನು ಈಗಾಗಲೇ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಈ ವೇಳೆಯೇ ವೈದ್ಯಕೀಯ ವರದಿ ಪರಿಶೀಲಿಸಿದೆ. ಕೇಂದ್ರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್ ಅವರನ್ನು ಉದ್ದೇಶಿಸಿ ಮಾತನಾಡಿದ ಪೀಠ, “ಸರ್ಕಾರವು ಪುನರ್ವಿಮರ್ಶಿಸಲು, ಮರುಪರಿಶೀಲಿಸಲು ಸಾಧ್ಯತೆ ಇದೆಯೇ” ಎಂದು ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...