ನಿಠಾರಿ ಸರಣಿ ಹತ್ಯೆ ಪ್ರಕರಣ: ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್‌

Date:

ಉತ್ತರ ಪ್ರದೇಶದ ನೋಯ್ಡಾದಲ್ಲಿ 2005-2006ರ ಅವಧಿಯಲ್ಲಿ ನಡೆದ ನಿಠಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಕೊನೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದೆ. ಕೋಲಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಾಲಯ ಒಪ್ಪಿದೆ.

- Advertisement -

ಸಾಕ್ಷ್ಮಾಧಾರಗಳ ಕೊರತೆಯಿಂದಾಗಿ ಆರೋಪಿಗಳು ಖುಲಾಸೆಗೊಂಡಿದ್ದರೂ, ಈ ಪ್ರಕರಣವು ದೇಶದ ಅಪರಾಧ ಇತಿಹಾಸದಲ್ಲಿ ಅತ್ಯಂತ ಘೋರ ಮತ್ತು ರಹಸ್ಯಮಯ ಘಟನೆಗಳಲ್ಲಿ ಒಂದಾಗಿ ಉಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

2006ರ ಡಿಸೆಂಬರ್‌ನಲ್ಲಿ ನೋಯ್ಡಾದ ನಿಠಾರಿ ಗ್ರಾಮದ ಮನೆಯೊಂದರ ಚರಂಡಿಯಲ್ಲಿ ಹಲವು ಮಕ್ಕಳು, ಯುವತಿಯರ ಅಸ್ಥಿಪಂಜರಗಳು ಪತ್ತೆಯಾದಾಗ ಈ ಹತ್ಯಾಕಾಂಡವು ಬೆಳಕಿಗೆ ಬಂದಿತ್ತು.

2004 ಮತ್ತು 2006ರ ನಡುವೆ ನಿಠಾರಿ ಹತ್ಯಾಕಾಂಡ ಸಂಭವಿಸಿದೆ ಎನ್ನಲಾಗಿದ್ದು ದೇಶವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ ಇದಾಗಿದೆ. ಬಂಗಲೆಯ ಮಾಲೀಕ ಮಣಿಂದರ್ ಸಿಂಗ್ ಪಂದೇರ್ ಮತ್ತು ಆತನ ಮನೆ ಕೆಲಸಗಾರ ಸುರೇಂದ್ರ ಕೋಲಿ ಮಕ್ಕಳನ್ನು, ಯುವತಿಯನ್ನು ಬಂಗಲೆಗೆ ಕರೆತಂದು ಅತ್ಯಾಚಾರ ಎಸಗಿ, ಕೊಂದು ದೇಹಗಳನ್ನು ಛಿದ್ರಗೊಳಿಸಿ ಚರಂಡಿಯಲ್ಲಿ ಎಸೆಯುತ್ತಿದ್ದರು ಎಂದು ಆರೋಪಿಸಲಾಗಿತ್ತು.

15 ವರ್ಷದ ಬಾಲಕಿಯ ಹತ್ಯೆಗೆ ಸಂಬಂಧಿಸಿದಂತೆ ಕೋಲಿಗೆ ವಿಧಿಸಿದ ಶಿಕ್ಷೆಯನ್ನು 2011ರಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಕೋಲಿ ವಿರುದ್ಧದ ಉಳಿದ 12 ಪ್ರಕರಣಗಳಲ್ಲಿ ಕೋಲಿಯನ್ನು ಖುಲಾಸೆಗೊಳಿಸಿತ್ತು. ಇದಾದ ಬಳಿಕ ಮರುಪರಿಶೀಲನಾ ಅರ್ಜಿಯನ್ನು ವಜಾ ಮಾಡಿದ ನಂತರ ಸಲ್ಲಿಸಲಾಗುವ ಕ್ಯುರೇಟಿವ್ ಅರ್ಜಿಯನ್ನು ಕೋಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ.

ಇದನ್ನು ಓದಿದ್ದೀರಾ? ನಿತಾರಿ ಹತ್ಯಾಕಾಂಡ: ಹೈಕೋರ್ಟ್‌ನಿಂದ ಸುರೇಂದ್ರ ಕೋಲಿ ಬಿಡುಗಡೆ ಪ್ರಶ್ನಿಸಿದ ಸಿಬಿಐ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರ ಪೀಠವು ಇಂದು ಕೋಲಿಯನ್ನು ಖುಲಾಸೆಗೊಳಿಸಿದ್ದು, ಕೊನೆಯ ಪ್ರಕರಣದಲ್ಲಿ ಶಿಕ್ಷೆಯನ್ನು ರದ್ದುಗೊಳಿಸಿದೆ.

“ಅರ್ಜಿದಾರರನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದೆ. ಅರ್ಜಿದಾರರನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತದೆ” ಎಂದು ತೀರ್ಪು ನೀಡುವಾಗ ನ್ಯಾಯಮೂರ್ತಿ ನಾಥ್ ಹೇಳಿದ್ದಾರೆ.

ಅಕ್ಟೋಬರ್ 7ರಂದು ಕೋಲಿಯ ಕ್ಯುರೇಟಿವ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಹೇಳಿಕೆ ಮತ್ತು ಅಡುಗೆಗೆ ಬಳಸಿದ ಚಾಕುವನ್ನು ವಶಪಡಿಸಿಕೊಂಡ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಲಯವು ಹೇಳಿತ್ತು. ಹಾಗೆಯೇ ಉಳಿದ ಪ್ರಕರಣಗಳಲ್ಲಿ ಖುಲಾಸೆಯಾಗಿರುವುದರಿಂದ ಈ ಅಸಂಗತ ಪರಿಸ್ಥಿತಿ ಉದ್ಭವಿಸಿದೆ ಎಂದೂ ಹೇಳಿತ್ತು.

ಒಟ್ಟು 19 ಪ್ರಕರಣಗಳನ್ನು ಆರೋಪಿಗಳ ವಿರುದ್ಧ ದಾಖಲಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಬಿಐ ಮೂರು ಪ್ರಕರಣಗಳನ್ನು ಕೊನೆಗೊಳಿಸಿತ್ತು. ಅದಾದ ಬಳಿಕ ಕೆಳ ನ್ಯಾಯಾಲಯಗಳು ಒಟ್ಟು 12 ಪ್ರಕರಣಗಳಲ್ಲಿ ಕೋಲಿಯನ್ನು ಮತ್ತು ಕೆಲವು ಪ್ರಕರಣಗಳಲ್ಲಿ ಪಂಧೇರ್‌ನನ್ನು ತಪ್ಪಿತಸ್ಥರೆಂದು ಪರಿಗಣಿಸಿ ಮರಣದಂಡನೆ ವಿಧಿಸಿತ್ತು.

ಆದರೆ 2023ರ ಅಕ್ಟೋಬರ್‌ನಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎಲ್ಲಾ ಪ್ರಕರಣಗಳಲ್ಲಿ ಸುರೇಂದ್ರ ಕೋಲಿ ಮತ್ತು ಪಂಧೇರ್‌ನನ್ನು ಅಲಹಾಬಾದ್ ಕೋರ್ಟ್ ಖುಲಾಸೆಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, 2025ರ ಜುಲೈನಲ್ಲಿ ಉನ್ನತ ನ್ಯಾಯಾಲಯ ಹೈಕೋರ್ಟ್ ತೀರ್ಪು ಎತ್ತಿಹಿಡಿದು ಮೇಲ್ಮನವಿಗಳನ್ನು ವಜಾಗೊಳಿಸಿತ್ತು. ಇದೀಗ ಕೊನೆಯ ಒಂದು ಪ್ರಕರಣದಲ್ಲೂ ಸಾಕ್ಷ್ಯಾಧಾರ ಕೊರತೆಯಿಂದ ಕೋಲಿಯನ್ನು ಖುಲಾಸೆಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...