ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್ 5ರಂದು ಮುಂದೂಡಿದೆ.
ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲ್ಲ ಎಂದ ಸುಪ್ರೀಂ ಕೋರ್ಟ್
ವಿಚಾರಣೆಯ ಆರಂಭದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಕೇಜ್ರಿವಾಲ್ ಅವರ ಅರ್ಜಿಯೊಂದರಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸಲು ಸಮಯ ಕೋರಿದರು. ಆದರೆ ಕೇಜ್ರಿವಾಲ್ ಪರ ವಕೀಲ ಹಿರಿಯ ವಕೀಲ ಡಾ ಅಭಿಷೇಕ್ ಮನು ಸಿಂಘ್ವಿ ಉದ್ದೇಶಪೂರ್ವಕವಾಗಿ ಪ್ರತಿ-ಅಫಿಡವಿಟ್ ಸಲ್ಲಿಸಲು ತಡಮಾಡಲಾಗುತ್ತಿದೆ ಎಂದು ಆರೋಪಿಸಿದರು.
Supreme Court Adjourns Arvind Kejriwal's Bail Plea In CBI Case Till September 5 |@DebbyJain #SupremeCourt https://t.co/TwhkCCdZBd
— Live Law (@LiveLawIndia) August 23, 2024
ಆದರೆ ಪ್ರತಿ-ಅಫಿಡವಿಟ್ ಸಲ್ಲಿಸಲು ಹೆಚ್ಚುವರಿ ಸಮಯವಕಾಶ ನೀಡಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ದೆಹಲಿ ಮುಖ್ಯಮಂತ್ರಿ, ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅವರನ್ನು 2024ರ ಜೂನ್ 26ರಂದು ಬಂಧನ ಮಾಡಲಾಗಿದೆ.