ಅಕ್ರಮ ಕಟ್ಟಡಗಳ ಸಕ್ರಮ, ತೆರವು: ರಾಜ್ಯಗಳು ಸೂಕ್ತ ನೀತಿ ರೂಪಿಸಲು ಸುಪ್ರೀಂ ಕೋರ್ಟ್ ಸಲಹೆ

Date:

ದೇಶಾದ್ಯಂತ ಬಹುಕಾಲದಿಂದ ಇರುವ ಅನಧಿಕೃತ ಕಟ್ಟಡಗಳು ಹಾಗೂ ಅಕ್ರಮ ನಿರ್ಮಾಣಗಳನ್ನು ಸಕ್ರಮಗೊಳಿಸುವುದು ಮತ್ತು ತೆರವುಗೊಳಿಸುವ ಕುರಿತು ಸೂಕ್ತ ಹಾಗೂ ಸ್ಪಷ್ಟ ನೀತಿಯನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

- Advertisement -

ದೇಶಾದ್ಯಂತ ಅಕ್ರಮ ಕಟ್ಟಡಗಳ ವಿಚಾರದಲ್ಲಿ ಒಂದೇ ರೀತಿಯ ಏಕರೂಪದ ನೀತಿಯನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕುರಿತು ಆಯಾ ರಾಜ್ಯಗಳ ಭೌಗೋಳಿಕ ಮತ್ತು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯ ಸರ್ಕಾರಗಳೇ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿ: ಇಸ್ರೇಲಿ ಮಾದರಿ ‘ಬುಲ್ಡೋಜರ್’ ಪ್ರಯೋಗ: ವಿರೋಧಿ ದನಿ ಎದುರಿಸಲು ‘ಕೊಳಚೆ ಅಸ್ತ್ರʼ ಬಳಸುತ್ತಾ ಮೋದಿ ಸರ್ಕಾರ?

‘ಸೆಂಟರ್ ಫಾರ್ ಲಾ ಅಂಡ್ ಗುಡ್ ಗವರ್ನೆನ್ಸ್’ ಸಂಸ್ಥೆಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿ, ದೇಶದಾದ್ಯಂತ ಅನಧಿಕೃತ ನಿರ್ಮಾಣಗಳ ನಿಯಂತ್ರಣ ಹಾಗೂ ಸಕ್ರಮಗೊಳಿಸುವಿಕೆಗೆ ಸಂಬಂಧಿಸಿದಂತೆ ಏಕರೂಪದ ಮಾರ್ಗಸೂಚಿ ಮತ್ತು ನೀತಿ ರೂಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋ ಅವರನ್ನೊಳಗೊಂಡ ಪೀಠವು, “ಪ್ರತಿಯೊಂದು ರಾಜ್ಯದಲ್ಲೂ ನಗರಾಭಿವೃದ್ಧಿ, ಜಾಗದ ಕೊರತೆ ಮತ್ತು ಅಕ್ರಮ ನಿರ್ಮಾಣಗಳ ಸ್ವರೂಪ ಭಿನ್ನವಾಗಿರುತ್ತದೆ. ಹೀಗಾಗಿ ಇಡೀ ದೇಶಕ್ಕೆ ಒಂದೇ ರೀತಿಯ ನೀತಿಯನ್ನು ನ್ಯಾಯಾಲಯವು ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿ ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಲು ನಿರಾಕರಿಸಿತು.

ಆದಾಗ್ಯೂ, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗಂಭೀರವಾಗಿ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ವರ್ಷಗಳಿಂದ ತೆರವುಗೊಳ್ಳದೆ ಉಳಿದಿರುವ ಅಥವಾ ನಿಯಮ ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳ ಬಗ್ಗೆ ದೀರ್ಘಕಾಲೀನ ನೀತಿಗಳನ್ನು ಸಿದ್ಧಪಡಿಸುವಾಗ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವಂತೆ ಪೀಠ ಸಲಹೆ ನೀಡಿದೆ.

ಅಕ್ರಮ ನಿರ್ಮಾಣಗಳನ್ನು ತಡೆಯುವುದು ಮತ್ತು ನಗರ ಯೋಜನೆಗಳನ್ನು ಶಿಸ್ತುಬದ್ಧವಾಗಿ ನಿರ್ವಹಿಸುವುದು ಸ್ಥಳೀಯ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಗಳ ಪ್ರಮುಖ ಹೊಣೆಗಾರಿಕೆಯಾಗಿದ್ದು, ಕಾನೂನುಬದ್ಧ ಪರಿಹಾರ ಕಂಡುಕೊಳ್ಳಲು ರಾಜ್ಯಗಳೇ ಸೂಕ್ತ ನೀತಿ ನಿರೂಪಣೆ ಮಾಡಬೇಕಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...