ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

Date:

ಮಧ್ಯಪ್ರದೇಶದ ರಾಜ್ಯಸಭೆ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರು ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ಅರ್ಜಿಯ ತುರ್ತು ವಿಚಾರಣೆಯನ್ನು ಶುಕ್ರವಾರ ನಡೆಸಲು ಸಮ್ಮತಿಸಿರುವ ಸುಪ್ರೀಂ ಕೋರ್ಟ್, ಚುನಾವಣಾ ಫಲಿತಾಂಶ ಪ್ರಕಟಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

- Advertisement -

ಮೀನಾಕ್ಷಿ ನಟರಾಜನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಂ. ಸಿಂಘ್ವಿ, ‘ತೆಲಂಗಾಣದಲ್ಲಿ ದಾಖಲಾಗಿರುವ ಖಾಸಗಿ ದೂರಿನ ಪ್ರಕರಣದಲ್ಲಿ ಅವರಿಗೆ ಕೇವಲ ನೋಟಿಸ್ ಮಾತ್ರ ಜಾರಿಯಾಗಿದೆ. ನ್ಯಾಯಾಲಯವು ಈ ಬಗ್ಗೆ ಇನ್ನೂ ವಿಚಾರಣೆ ಕೈಗೆತ್ತಿಕೊಂಡಿಲ್ಲ ಹಾಗೂ ಯಾವುದೇ ತನಿಖೆ ನಡೆದು ದೋಷಾರೋಪ ಪಟ್ಟಿಯೂ ಸಲ್ಲಿಕೆಯಾಗಿಲ್ಲ. ಚುನಾವಣಾ ನಿಯಮಗಳ ಪ್ರಕಾರ, ಇದು ‘ಕ್ರಿಮಿನಲ್ ಪ್ರಕರಣ’ದ ವ್ಯಾಪ್ತಿಗೆ ಬರುವುದಿಲ್ಲವಾದ್ದರಿಂದ ನಾಮಪತ್ರದಲ್ಲಿ ಈ ಬಗ್ಗೆ ಮಾಹಿತಿ ನೀಡುವ ಅಗತ್ಯವಿರಲಿಲ್ಲ’ ಎಂದು ವಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ನಾಯಕತ್ವ ಕೈತಪ್ಪಿದರೂ ಕ್ರೀಡಾಸ್ಫೂರ್ತಿ ಮೆರೆದ ಸೂರ್ಯಕುಮಾರ್ ಯಾದವ್‌

ತೆಲಂಗಾಣದಲ್ಲಿ ತಮ್ಮ ವಿರುದ್ಧವಿರುವ ಪ್ರಕರಣದ ಮಾಹಿತಿಯನ್ನು ಮೀನಾಕ್ಷಿ ನಟರಾಜನ್ ಅವರು ನಾಮಪತ್ರದಲ್ಲಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಮಹೇಶ್ ಕೇವತ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಆಕ್ಷೇಪಣೆಯ ಹಿನ್ನೆಲೆಯಲ್ಲಿ ಮೀನಾಕ್ಷಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ‘ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ನ್ಯಾಯಾಲಯದ ಪ್ರಕ್ರಿಯೆಯಲ್ಲಿ ನೋಟಿಸ್ ನೀಡುವ ಹಂತ ತಲುಪಿದಾಗ ಆ ಬಗ್ಗೆ ನಾಮಪತ್ರದಲ್ಲಿ ಮಾಹಿತಿ ನೀಡುವುದು ಕಡ್ಡಾಯ’ ಎಂದು ಬಿಜೆಪಿ ಪ್ರತಿನಿಧಿಗಳು ವಾದಿಸಿದ್ದಾರೆ. ಆದರೆ, ‘ಅವರ ವಿರುದ್ಧ ಯಾವುದೇ ಅಧಿಕೃತ ಕ್ರಿಮಿನಲ್ ಪ್ರಕರಣ ಇಲ್ಲದಿರುವುದರಿಂದ ಮಾಹಿತಿ ನೀಡುವ ಅಗತ್ಯವಿಲ್ಲ’ ಎಂದು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಈ ಅನಿರೀಕ್ಷಿತ ಬೆಳವಣಿಗೆಯು ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳನ್ನೇ ಬದಲಿಸಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ, ಈಗಾಗಲೇ ಎರಡು ಸ್ಥಾನಗಳನ್ನು ಗೆಲ್ಲುವುದು ಬಹುತೇಕ ಖಚಿತವಾಗಿತ್ತು. ಇದೀಗ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ ಮೂರನೇ ಸ್ಥಾನದ ಮೇಲೂ ಬಿಜೆಪಿ ಹಿಡಿತ ಸಾಧಿಸುವ ಸಾಧ್ಯತೆಯಿದೆ. ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲುವಷ್ಟು ಸಂಖ್ಯಾಬಲ ಹೊಂದಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಕಾನೂನು ಹೋರಾಟದಲ್ಲಿ ಗೆಲುವು ಸಿಗದಿದ್ದರೆ ಭಾರಿ ಹಿನ್ನಡೆಯಾಗಲಿದೆ. ಈ ಘಟನೆಯನ್ನು ಕಾಂಗ್ರೆಸ್ ‘ಸಾಂವಿಧಾನಿಕ ಪಿತೂರಿ’ ಎಂದು ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....